ವಾಲ್ಮೀಕಿ ಹಗರಣ ತನಿಖೆ ಹೊಣೆ ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್ ನಿರಾಕರಿಸಿದೆ. ಬ್ಯಾಂಕಿಂಗ್ ನಿಯಂತ್ರಣ ಅಧಿನಿಯಮದ ಸೆಕ್ಷನ್ 35ಎ ಅಡಿಯಲ್ಲಿ ಸಿಬಿಐ ತನಿಖೆಗೆ ಅವಕಾಶವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ವಾಲ್ಮೀಕಿ ಹಗರಣ ತನಿಖೆ ಹೊಣೆ ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರ
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಸಿಬಿಐಗೆ ತನಿಖೆ ವಹಿಸಲು ಹೈಕೋರ್ಟ್ ನಕಾರ
Follow us
Ramesha M
| Updated By: ಗಂಗಾಧರ​ ಬ. ಸಾಬೋಜಿ

Updated on:Nov 13, 2024 | 3:56 PM

ಬೆಂಗಳೂರು, ನವೆಂಬರ್​ 13: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ (Valmiki Corporation scam) ಸಂಬಂಧಿಸಿದಂತೆ ತನಿಖೆ ಹೊಣೆ ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರವೆತ್ತಿದೆ. ಆ ಮೂಲಕ ಹಗರಣದ ತನಿಖೆಯನ್ನು ಕೇಂದ್ರಕ್ಕೆ ವರ್ಗಾಯಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ರಿಟ್​ ಅರ್ಜಿಯನ್ನು ವಜಾಗೊಳಿಸಿ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.

ಬ್ಯಾಂಕಿಂಗ್​ ನಿಯಂತ್ರಣ ಅಧಿನಿಯಮ ಸೆಕ್ಷನ್ 35 ಎ ಅಡಿಯ ವ್ಯಾಖ್ಯಾನ ಪರಿಗಣಿಸಿ ಸಿಬಿಐ ತನಿಖೆಗೆ ವಹಿಸಲಾಗುವುದಿಲ್ಲ. ಒಂದು ವೇಳೆ ಅನುಮತಿ ನೀಡಿದರೆ ಎಲ್ಲಾ ಬ್ಯಾಂಕ್​ಗಳೂ ಇದನ್ನೇ ಕೇಳಬಹುದು. ಆಗ ದೆಹಲಿ ಸ್ಪೆಷಲ್​ ಪೊಲೀಸ್ ಎಸ್ಟಾಬ್ಲಿಷ್​ಮೆಂಟ್​ ಆ್ಯಕ್ಟ್​ ನಿರರ್ಥಕವಾಗಬಹುದು ಎಂದು ಅರ್ಜಿ ತಿರಸ್ಕರಿಸಿ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ.

ಇದನ್ನೂ ಓದಿ: ವಾಲ್ಮೀಕಿ ಹಗರಣದಲ್ಲಿ ಬಂಧನವಾಗಿದ್ದ ಶಾಸಕ ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ?

ಹಗರಣದ ತನಿಖೆ ಹೊಣೆ ಸಿಬಿಐಗೆ ವರ್ಗಾಯಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನಂತರ ಹೈಕೋರ್ಟ್ ಸೆಪ್ಟೆಂಬರ್ 30 ರಂದು ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಯೂನಿಯನ್​ ಬ್ಯಾಂಕ್​ ಅರ್ಜಿಗೆ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವ ಅಧಿಕಾರ ರಾಜ್ಯ ಪೊಲೀಸರಿಗೆ ಇದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿತ್ತು.

ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಬಿ. ವಿ. ಆಚಾರ್ಯ, ಬ್ಯಾಂಕ್ ಸಲ್ಲಿಸಿರುವ ಅರ್ಜಿಯ ನಿರ್ವಹಣೆಯ ಬಗ್ಗೆ ಪ್ರಾಥಮಿಕ ಆಕ್ಷೇಪಣೆ ಎತ್ತಿದ್ದಾರೆ. ತನಿಖೆಯ ಅಧಿಕಾರ ರಾಜ್ಯ ಸರ್ಕಾರಕ್ಕಿದೆ. ತನಿಖೆ ಕಳಂಕಿತವೆಂದು ಯೂನಿಯನ್ ಬ್ಯಾಂಕ್ ಹೇಳಿಲ್ಲ. ಕೇವಲ ಬ್ಯಾಂಕ್ ನಿಯಂತ್ರಣ ಅಧಿನಿಯಮ ಸೆಕ್ಷನ್​ 35ಎ ಉಲ್ಲೇಖಿಸಲಾಗಿದೆ. ತನಿಖೆಯ ವ್ಯಾಪ್ತಿ ಬಗ್ಗೆ ಸುಪ್ರೀಂಕೋರ್ಟ್ ಮಾತ್ರ ತೀರ್ಮಾನಿಸಬೇಕು. ಹೀಗಾಗಿ ಅರ್ಜಿ ವಿಚಾರಣೆಗೆ ಯೋಗ್ಯವಲ್ಲವೆಂದು ವಾದಿಸಿದರು.

ಇದನ್ನೂ ಓದಿ: ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಜಾಮೀನು ಮಂಜೂರು

ಇನ್ನು ಈ ಪ್ರಕರಣ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ನಡುವಿನ ವಿವಾದವಾಗಿದ್ದು, ಈ ವಿಷಯದ ಬಗ್ಗೆ ನಿರ್ಧರಿಸಲು ಸುಪ್ರೀಂ ಕೋರ್ಟ್‌ಗೆ ಮಾತ್ರ ಅಧಿಕಾರವಿದೆ ಹೊರತು ಹೈಕೋರ್ಟ್‌ಗೆ ಅಲ್ಲ ಎಂದು ಹೇಳಿದ್ದಾರೆ. ವಾಲ್ಮೀಕಿ ನಿಗಮದ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ವಾದಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:22 pm, Wed, 13 November 24

"ನಾನಾಗಿದ್ದರೆ ಸಿದ್ದರಾಮಯ್ಯ ಕಪಾಳಕ್ಕೆ ಹೊಡೆಯುತ್ತಿದ್ದೆ": ಸ್ವಾಮೀಜಿ
ರೈತರಿಗೆ ನೀಡಿದ ನೋಟೀಸ್ ವಾಪಸ್ಸು ಪಡೆಯುವುದರಿಂದ ಏನೂ ಅಗಲ್ಲ: ಯತ್ನಾಳ್
ರೈತರಿಗೆ ನೀಡಿದ ನೋಟೀಸ್ ವಾಪಸ್ಸು ಪಡೆಯುವುದರಿಂದ ಏನೂ ಅಗಲ್ಲ: ಯತ್ನಾಳ್
ಸಚಿವರ ಆಪ್ತ ಕಾರ್ಯದರ್ಶಿ ನೀಡಿದ ದೂರಿನ ಮೇರೆಗೆ ಪುನೀತ್ ಪೊಲೀಸ್ ವಶಕ್ಕೆ
ಸಚಿವರ ಆಪ್ತ ಕಾರ್ಯದರ್ಶಿ ನೀಡಿದ ದೂರಿನ ಮೇರೆಗೆ ಪುನೀತ್ ಪೊಲೀಸ್ ವಶಕ್ಕೆ
ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಸ್ಫೋಟಕ ಹೇಳಿಕೆ
ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಸ್ಫೋಟಕ ಹೇಳಿಕೆ
ರೀಲ್ಸ್​ಗಾಗಿ ಪೆಟ್ರೋಲ್ ಬಾಂಬ್ ಸ್ಫೋಟಿಸಿ ವಿದ್ಯಾರ್ಥಿಗಳಿಂದ ಹುಚ್ಚಾಟ
ರೀಲ್ಸ್​ಗಾಗಿ ಪೆಟ್ರೋಲ್ ಬಾಂಬ್ ಸ್ಫೋಟಿಸಿ ವಿದ್ಯಾರ್ಥಿಗಳಿಂದ ಹುಚ್ಚಾಟ
ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಮೆಸ್ಕಾಂ‌ ಸಿಬ್ಬಂದಿಯ ಎಣ್ಣೆ ಪಾರ್ಟಿ, ಧಮ್ಕಿ
ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಮೆಸ್ಕಾಂ‌ ಸಿಬ್ಬಂದಿಯ ಎಣ್ಣೆ ಪಾರ್ಟಿ, ಧಮ್ಕಿ
ಬಿಗ್ ಬಾಸ್ ಮನೆಗೆ ‘ರಾಮಾಚಾರಿ’ ಜೋಡಿ; ಕುರಿನ ಕರೆದಂತೆ ಚಾರುನ ಕರೆದ ಹನುಮಂತ
ಬಿಗ್ ಬಾಸ್ ಮನೆಗೆ ‘ರಾಮಾಚಾರಿ’ ಜೋಡಿ; ಕುರಿನ ಕರೆದಂತೆ ಚಾರುನ ಕರೆದ ಹನುಮಂತ
ಪದೇ ಪದೇ ಹಾವುಗಳು ಕಣ್ಣಿಗೆ ಕಾಣಿಸುತ್ತಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಪದೇ ಪದೇ ಹಾವುಗಳು ಕಣ್ಣಿಗೆ ಕಾಣಿಸುತ್ತಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಗೆ ಇಂದು ನಿವೇಶನ ಕೊಂಡುಕೊಳ್ಳುವ ಯೋಗವಿದೆ
Nithya Bhavishya: ಈ ರಾಶಿಯವರಿಗೆ ಇಂದು ನಿವೇಶನ ಕೊಂಡುಕೊಳ್ಳುವ ಯೋಗವಿದೆ
4 ವರ್ಷಗಳ ಬಳಿಕ ವೈಟ್​ಹೌಸ್​ನಲ್ಲಿ ಡೊನಾಲ್ಡ್ ಟ್ರಂಪ್-ಜೋ ಬೈಡೆನ್ ಭೇಟಿ
4 ವರ್ಷಗಳ ಬಳಿಕ ವೈಟ್​ಹೌಸ್​ನಲ್ಲಿ ಡೊನಾಲ್ಡ್ ಟ್ರಂಪ್-ಜೋ ಬೈಡೆನ್ ಭೇಟಿ