AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ನಿಗಮ ಹಗರಣದ ತನಿಖೆ ಚುರುಕು: ಕಾಂಗ್ರೆಸ್​​ನ ಇಬ್ಬರು ಶಾಸಕರಿಗೆ ಕುತ್ತು

ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆ ಚುರುಕುಗೊಂಡಿದೆ. ಒಂದು ಕಡೆ ಎಸ್​ಐಟಿ ತನಿಖೆ ನಡೆಸುತ್ತಿದ್ದರೆ ಮತ್ತೊಂದು ಕಡೆ ಸಿಬಿಐ ಕೂಡ ಚಾರ್ಜ್ ತೆಗೆದುಕೊಂಡು ತನಿಖೆ ಕೈಗೆತ್ತಿಕೊಂಡಿತ್ತು. ಈಗಾಗಲೇ ಎಸ್​​ಐಟಿ ಅಧಿಕಾರಿಗಳು ಹಲವರನ್ನ ಬಂಧಿಸಿ ವಿಚಾರಣೆ ನಡೆಸಿದ್ದು ತನಿಖೆ ಮುಂದುವರೆದಿದೆ. ಇದೀಗ ಮಾಜಿ ಸಚಿವ ನಾಗೇಂದ್ರ, ಬಸನಗೌಡ ದದ್ದಲ್​ಗೂ SIT ನೋಟಿಸ್ ನೀಡಿದೆ.

ವಾಲ್ಮೀಕಿ ನಿಗಮ ಹಗರಣದ ತನಿಖೆ ಚುರುಕು: ಕಾಂಗ್ರೆಸ್​​ನ ಇಬ್ಬರು ಶಾಸಕರಿಗೆ ಕುತ್ತು
ವಾಲ್ಮೀಕಿ ನಿಗಮ ಹಗರಣದ ತನಿಖೆ ಚುರುಕು: ಕಾಂಗ್ರೆಸ್​​ನ ಇಬ್ಬರು ಶಾಸಕರಿಗೆ ಕುತ್ತು
ಗಂಗಾಧರ​ ಬ. ಸಾಬೋಜಿ
|

Updated on: Jul 05, 2024 | 6:06 PM

Share

ಬೆಂಗಳೂರು, ಜುಲೈ 05: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ  (Valmiki Development Corporation scam)  ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಮತ್ತು ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್​​ಗೆ ವಿಶೇಷ ತನಿಖಾ ತಂಡದಿಂದ ನೋಟಿಸ್ ನೀಡಲಾಗಿದೆ. ವಿಚಾರಣೆಗೆ‌ ಹಾಜರಾಗುವಂತೆ ಇಬ್ಬರಿಗೂ ಎಸ್​ಐಟಿಯಿಂದ ನೋಟಿಸ್​ ನೀಡಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್​ ಆತ್ಮಹತ್ಯೆ  ಮತ್ತು ಹಗರಣದಲ್ಲಿ ಹೆಸರು ಕೇಳಿಬಂದ ಹಿನ್ನೆಲೆ ಮಾಜಿ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದರು.

ಮಾಜಿ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ ಬಳಿಕ ಕೂಡ ಎಸ್​ಐಟಿ ಅಧಿಕಾರಿಗಳಿಂದ ಯಾವುದೇ ವಿಚಾರಣೆ ಮಾಡಿರಲಿಲ್ಲ. ಈ ಬಗ್ಗೆ ಬಿಜೆಪಿ ಯಾಕೆ ಅವರನ್ನು ವಿಚಾರಣೆ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಮೊದಲ ಬಾರಿಗೆ ಮಾಜಿ ಸಚಿವ ನಾಗೇಂದ್ರಗೆ ಎಸ್​ಐಟಿ ನೋಟಿಸ್​ ನೀಡಿದು, ತನಿಖೆಗೆ ಹಾಜರಾಗುವಂತೆ ತಿಳಿಸಿದೆ. ಸದ್ಯ ನಾಗೇಂದ್ರಗೆ ಢವಢವ ಶುರುವಾಗಿದೆ.

ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆ ಚುರುಕುಗೊಂಡಿದೆ. ಒಂದು ಕಡೆ ಎಸ್​ಐಟಿ ತನಿಖೆ ನಡೆಸುತ್ತಿದ್ದರೆ ಮತ್ತೊಂದು ಕಡೆ ಸಿಬಿಐ ಕೂಡ ಚಾರ್ಜ್ ತೆಗೆದುಕೊಂಡು ತನಿಖೆ ಕೈಗೆತ್ತಿಕೊಂಡಿತ್ತು. ಈಗಾಗಲೇ ಎಸ್​​ಐಟಿ ಅಧಿಕಾರಿಗಳು ಹಲವರನ್ನ ಬಂಧಿಸಿ ವಿಚಾರಣೆ ನಡೆಸಿದ್ದು ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ಎಸ್​ಟಿ ನಿಗಮದ ಹಗರಣ: ಚಂದ್ರಶೇಖರ್​ ಆತ್ಮಹತ್ಯೆಯಿಂದ ನಾಗೇಂದ್ರ ರಾಜೀನಾಮೆ ತನಕ ಏನೇನು ಆಯ್ತು? ಇಲ್ಲಿದೆ ವರದಿ

ಈ ಮಧ್ಯೆ ಕಾಂಗ್ರೆಸ್ ಶಾಸಕ ಹಾಗೂ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್​ ಇತ್ತೀಚೆಗೆ ರಾಯಚೂರಿನಲ್ಲಿ ಬೆಚ್ಚಿ ಬೀಳಿಸುವ ಸಂಗತಿ ಬಾಯ್ಬಿಟ್ಟಿದ್ದರು. ಈ ಹಗರಣದಲ್ಲಿ ಅಂತರರಾಜ್ಯ ಜಾಲಗಳಿವೆ ಎಂಬ ಬಗ್ಗೆ ಮಾಹಿತಿ ನೀಡುವ ಮೂಲಕ ಪ್ರಕರಣಕ್ಕೆ ಮತ್ತೊಂದು ಆಯಾಮ ನೀಡಿದ್ದರು. ಸಿಬಿಐ ಹಾಗೂ ಎಸ್​ಐಟಿ ಜಿತೆ ಇಡಿ ಕೂಡ ಈ ಪ್ರಕರಣದ ತನಿಖೆ ನಡೆಸುತ್ತಿದೆ ಎಂದು ದದ್ದಲ್ ಹೇಳಿದ್ದರು. ಇದೆಲ್ಲಾ ವಿಚಾರವಾಗಿ ಸದ್ಯ ಇವರಿಗೂ ವಿಶೇಷ ತನಿಖಾ ತಂಡದಿಂದ ನೋಟಿಸ್ ನೀಡಿದ್ದು ತಖಿಗೆ ಹಾಜರಾಗುವಂತೆ ತಿಳಿಸಿದೆ.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ನಿಗಮದ 10 ವರ್ಷದ ಆಯವ್ಯಯ ನೀಡುವಂತೆ ಸರ್ಕಾರಕ್ಕೆ ಪತ್ರ

ಇನ್ನು ಪ್ರಕರಣದಲ್ಲಿ ಪ್ರಭಾವಿಗಳನ್ನ ರಕ್ಷಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ವಿಚಾರವಾಗಿ  ದದ್ದಲ್​ ಸ್ಪಷ್ಟನೆ ನೀಡಿದ್ದು, ಇದರಲ್ಲಿ ಯಾರೂ ಏನನ್ನೂ ಮುಚ್ಚಿಡಲು ಸಾಧ್ಯವಿಲ್ಲ. ಯಾರನ್ನೂ, ಮಂತ್ರಿಗಳು, ಅಧ್ಯಕ್ಷರನ್ನ ರಕ್ಷಣೆ ಮಾಡಲು ಸಾಧ್ಯವಿಲ್ಲ. ಸತ್ಯವನ್ನು ತನಿಖಾ ಸಂಸ್ಥೆಗಳು ಹೊರ ತರುತ್ತಾರೆ. ತನಿಖೆ ಬಳಿಕ ತಪ್ಪು ಮಾಡಿರುವ ಬಗ್ಗೆ ಎಲ್ಲರಿಗೂ ಗೊತ್ತಾಗತ್ತೆ ಎಂದು ಹೇಳಿದ್ದರು.

ವರದಿ: ಪ್ರಜ್ವಲ್​ ಕ್ರೈಂ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು