ವಾಲ್ಮೀಕಿ ಹಗರಣ: ಕೋರ್ಟ್​ಗೆ ಚಾರ್ಜ್ ಶೀಟ್ ಸಲ್ಲಿಕೆ, ನಾಗೇಂದ್ರ, ದದ್ದಲ್‌ ಹೆಸರೇ ಇಲ್ಲ!

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT), ಚಾರ್ಜ್​ಶೀಟ್ ಸಲ್ಲಿಕೆ ಮಾಡಿದೆ. ಒಟ್ಟು 3 ಸಾವಿರ ಪುಟಗಳ ಚಾರ್ಜ್ ಶೀಟ್ ​ಅನ್ನು ಬೆಂಗಳೂರಿನ 1ನೇ ACMM ಕೋರ್ಟ್​ಗೆ ಸಲ್ಲಿಕೆ ಮಾಡಿದೆ. ಆದ್ರೆ, ಚಾರ್ಜ್​ಶೀಟ್​ನಲ್ಲಿ ಕಾಂಗ್ರೆಸ್ ಶಾಸಕರಾದ ನಾಗೇಂದ್ರ ಹಾಗೂ ಬಸನಗೌಡ ದದ್ದಲ್​ ಹೆಸರು ಇಲ್ಲದಿರುವುದು ಅಚ್ಚರಿಗೆ ಕಾರಣವಾಗಿದೆ. ಇನ್ನು ಈ ಚಾರ್ಜ್​ಶೀಟ್​ನಲ್ಲಿ ಏನೇನಿದೆ ಎನ್ನುವ ವಿವರ ಇಲ್ಲಿದೆ.

ವಾಲ್ಮೀಕಿ ಹಗರಣ: ಕೋರ್ಟ್​ಗೆ ಚಾರ್ಜ್ ಶೀಟ್ ಸಲ್ಲಿಕೆ, ನಾಗೇಂದ್ರ, ದದ್ದಲ್‌ ಹೆಸರೇ ಇಲ್ಲ!
ವಾಲ್ಮೀಕಿ ಹಗರಣ
Follow us
Prajwal Kumar NY
| Updated By: ರಮೇಶ್ ಬಿ. ಜವಳಗೇರಾ

Updated on:Aug 05, 2024 | 4:08 PM

ಬೆಂಗಳೂರು, (ಆಗಸ್ಟ್​ 05): ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ (Valmiki Corporation scam) ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಇಂದು (ಆಗಸ್ಟ್​ 05) ಚಾರ್ಜ್​ಶೀಟ್ ಸಲ್ಲಿಕೆ ಮಾಡಿದೆ. ಒಟ್ಟು 12 ಆರೋಪಿಗಳ ವಿರುದ್ಧ ಸುಮಾರು 3 ಸಾವಿರ ಪುಟಗಳ ಚಾರ್ಜ್ ಶೀಟ್ ಅನ್ನು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಇನ್ನು ಈ ಚಾರ್ಜ್​ಶೀಟ್​ನಲ್ಲಿ ಇದೇ ಪ್ರಕರಣದಲ್ಲಿ ಇಡಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್​ ಶಾಸಕ ನಾಗೇಂದ್ರ ಹೆಸರು ಇಲ್ಲ. ಹಾಗೇ ಮತ್ತೋರ್ವ ಶಾಸಕ ಬಸನಗೌಡ ದದ್ದಲ್​ ಅವರ ಹೆಸರು ಸಹ ಉಲ್ಲೇಖವಾಗಿಲ್ಲ. ಈ ಹಿನ್ನೆಲೆಯಲ್ಲಿ ಈ ಚಾರ್ಜ್​ಶೀಟ್​ ಅಚ್ಚರಿಗೆ ಕಾರಣವಾಗಿದೆ.

ಚಾರ್ಜ್​ಶೀಟ್​​ನಲ್ಲಿ ಏನೇನು ಇದೆ?

ಈ ಹಿಂದೆ ಹೈಗ್ರೌಂಡ್ಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಅಧಿಕಾರಿಗಳು ಪ್ರಥಮ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಒಟ್ಟು ಮೂರು ಸಾವಿರದ ಪುಟಗಳ ಚಾರ್ಜ್​ಶೀಟ್​ನಲ್ಲಿ ಹಣ, ಚಿನ್ನ, ಕಾರು ಸೇರಿ 50 ಕೋಟಿ ರೂಪಾಯಿ ಜಪ್ತಿ ಮಾಡಿರುವುದಾಗಿ ಎಸ್​ಐಟಿ ದೋಷಾರೋಪಪಟ್ಟಿಯಲ್ಲಿ  ಉಲ್ಲೇಖಿಸಿದೆ. ನಗದು- 16.83 ಕೋಟಿ ರೂಪಾಯಿ ಹಣ, 11 ಕೋಟಿ 70 ಲಕ್ಷ ಮೌಲ್ಯದ 16.252 ಕೆ.ಜಿ ಚಿನ್ನ, 4.51 ಕೋಟಿ ಮೌಲ್ಯದ ಲ್ಯಾಂಬರ್ಗಿನಿ ಉರುಸ್ ಹಾಗೈ, ಮರ್ಸಿಡೀಸ್ ಬೆಂಜ್ ಕಾರು, ತನಿಖಾಧಿಕಾರಿ ಬ್ಯಾಂಕ್ ಖಾತೆಯಿಂದ 3.19 ಕೋಟಿ ರೂ. ಹಣ, 13.72 ಕೋಟಿ ರೂ. ಹಣ ಫ್ರೀಜ್ ಸೇರಿದಂತೆ ಒಟ್ಟು ಒಟ್ಟು 49.96 ಕೋಟಿ ವಶಪಡಿಸಿಕೊಂಡ ವಸ್ತುಗಳ ಬಗ್ಗೆ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣಕ್ಕೆ ಹವಾಲಾ ಲಿಂಕ್! ಎಸ್​ಐಟಿ ತನಿಖೆಯಲ್ಲಿ ಬಯಲು

ಇನ್ನು ಈ ಪ್ರಕರಣದಲ್ಲಿ ಮೊದಲು ಬಂಧನವಾಗಿರುವ ಆರೋಪಿಗಳ ವಿರುದ್ಧ ಮಾತ್ರ ಚಾರ್ಜ್​ಶೀಟ್​​ ಸಲ್ಲಿಸಲಾಗಿದೆ. ಸತ್ಯನಾರಾಯಣ ವರ್ಮಾ( ಹೈದರಾಬಾದ್) , ಪದ್ಮನಾಭ (ವ್ಯವಸ್ಥಾಪಕ), ಪರುಶುರಾಮ್ ( ಲೆಕ್ಕಾಧಿಕಾರಿ), ನೆಕ್ಕುಂಟಿ ನಾಗರಾಜ್ (ನಾಗೇಂದ್ರ ಆಪ್ತ), ನಾಗೇಶ್ವರ್ ರಾವ್(ನೆಕ್ಕುಂಟಿ ನಾಗರಾಜ್ ಸಂಬಂಧಿ), ಸತ್ಯನಾರಾಯಣ ಇಟ್ಕಾರಿ ತೇಜಾ (ಫಸ್ಟ್ ಫೈನಾನ್ಸ್ ಅಧ್ಯಕ್ಷ),  ಜಗದೀಶ್ (ಉಡುಪಿ), ತೇಜಾ ತಮ್ಮಯ್ಯ(ಬೆಂಗಳೂರು), ಪಿಟ್ಟಲ ಶ್ರೀನಿವಾಸ್ ಗಚ್ಚಿಬೌಲಿ(ಆಂಧ್ರ ಪ್ರದೇಶ), ಸಾಯಿತೇಜ(ಹೈದರಾಬಾದ್) ಸೇರಿ ಒಟ್ಟು 12 ಆರೋಪಿಗಳ ಹೆಸರು ಉಲ್ಲೇಖವಾಗಿದೆ. ಆದ್ರೆ, ಈ ದೋಷಾರೋಪಪಟ್ಟಿಯಲ್ಲಿ ಮಾಜಿ ಸಚಿವ ನಾಗೇಂದ್ರ, ಶಾಸಕ ಬಸನಗೌಡ ದದ್ದಲ್ ಅವರ ಹೆಸರಿಲ್ಲದಿರುವುದೇ ಸಂಚಲನ ಮೂಡಿಸಿದೆ.

ಇನ್ನು ಇದೇ ಪ್ರಕರಣದಲ್ಲಿ ಇಡಿ ಬಂಧನಕ್ಕೊಳಗಾಗಿರುವ ನಾಗೇಂದ್ರ ಹಾಗೂ ಬಸನಗೌಡ ದದ್ದಲ್​ ಹೆಸರು ಈ ಚಾರ್ಜ್​ಶೀರ್ಟ್​ನಲ್ಲಿ ಇಲ್ಲದಿರುವ ಬಗ್ಗೆ ವಿಪಕ್ಷಗಳು ಆಕ್ಷೇಪಿಸುವ ಸಾಧ್ಯತೆಗಳಿದ್ದು, ಇದನ್ನು ಕೋರ್ಟ್​ ಸ್ವೀಕಾರ ಮಾಡುತ್ತಾ ಅಥವಾ ಈ ಬಗ್ಗೆ ಏನಾದರೂ ಹೇಳುತ್ತಾ ಎನ್ನುವುದನ್ನು ಕಾದುನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:49 pm, Mon, 5 August 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ