ವಾಲ್ಮೀಕಿ ನಿಗಮ ಹಗರಣ: ಹೊಸ ಅಸ್ತ್ರ ಪ್ರಯೋಗಿಸಲು ಮುಂದಾದ ಬಿಜೆಪಿ, ಕೋರ್ಟ್​ನಲ್ಲಿ ದಾವೆ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ ನಡೆದಿರುವ ಹಗರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಹಗರಣದ ತನಿಖೆಯನ್ನು ನಡೆಸಿದ ಇಡಿ ಹಲವು ವಿಚಾರ ಚಾರ್ಜ್ ಶೀಟ್​​ನಲ್ಲಿ ಉಲ್ಲೇಖಿಸಿದೆ. ಇದರ ಆಧಾರದ ಮೇಲೆ ಬಿಜೆಪಿ ಹೊಸ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ.

ವಾಲ್ಮೀಕಿ ನಿಗಮ ಹಗರಣ: ಹೊಸ ಅಸ್ತ್ರ ಪ್ರಯೋಗಿಸಲು ಮುಂದಾದ ಬಿಜೆಪಿ, ಕೋರ್ಟ್​ನಲ್ಲಿ ದಾವೆ
ಬಿಜೆಪಿ, ಇ ತುಕಾರಾಂ
Follow us
ಕಿರಣ್​ ಹನಿಯಡ್ಕ
| Updated By: ವಿವೇಕ ಬಿರಾದಾರ

Updated on:Sep 14, 2024 | 7:40 AM

ಬೆಂಗಳೂರು, ಸೆಪ್ಟೆಂಬರ್​ 14: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ (Maharshi Valmiki Scheduled Tribes Development) ನಡೆದಿರುವ ಹಗರಣದ ಬಗ್ಗೆ ಜಾರಿ ನಿರ್ದೇಶನಾಲಯ (ED) ಎಳೆಎಳೆಯಾಗಿ ಬಿಚ್ಚಿಟ್ಟಿದೆ. ನಿಗಮದ 21 ಕೋಟಿ ರೂ. ಹಣವನ್ನು ಬಳ್ಳಾರಿ ಲೋಕಸಭೆ ಚುನಾವಣೆಗೆ ಬಳಸಿಕೊಳ್ಳಲಾಗಿದೆ ಎಂದು ಇಡಿ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್​​​ಶೀಟ್​​ನಲ್ಲಿ ಉಲ್ಲೇಖಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ವಿಚಾರ ಇಡಿ ಬಯಲು ಮಾಡುತ್ತಿದ್ದಂತೆ ಕರ್ನಾಟಕ ಬಿಜೆಪಿ ಹೊಸ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ.

ಮಾಜಿ ಸಚಿವ ಬಿ. ನಾಗೇಂದ್ರ ತಲೆದಂಡ ಬಳಿಕ ರಾಜ್ಯ ಬಿಜೆಪಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಇ. ತುಕಾರಂ ಅವರನ್ನು ಟಾರ್ಗೆಟ್ ಮಾಡಿದೆ. ಮಾಜಿ ಸಚಿವ ಶ್ರೀರಾಮುಲು ಸಂಸದ ತುಕಾರಾಂ ವಿರುದ್ಧ ಕೋರ್ಟ್​ನಲ್ಲಿ ದಾವೆ ಹೂಡಲು ಮುಂದಾಗಿದ್ದಾರೆ. ಬಳ್ಳಾರಿ ಸಂಸದ ಸ್ಥಾನವನ್ನು ಅನರ್ಹಗೊಳಿಸುವಂತೆ ದಾವೆ ಹೂಡಲು ಸಿದ್ದರಾಗಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ

ಮತ್ತೊಂದು ಕಡೆ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​​ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಬಿಜೆಪಿ ನಿಯೋಗಕ್ಕೆ ಬಳ್ಳಾರಿ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿದ್ದ ಅರುಣ್​ ಹಿರೇಹಾಳ್​ ಸಾಥ್​ ನೀಡುವ ಸಾಧ್ಯತೆ ಇದೆ. ವಾಲ್ಮಿಕಿ ನಿಗಮದ ಹಣ ಹಾಗೂ ಪರಿಶಿಷ್ಟ ಕಲ್ಯಾಣ ನಿಧಿ ಚುನಾವಣಾ ಅಕ್ರಮಕ್ಕೆ ಬಳಕೆಯಾಗಿದೆ ಎಂದು ಆರೋಪಿಸಿ ಅರುಣ್​ ಹಿರೇಹಾಳ್​ ಈ ಹಿಂದೆ ಚುನಾವಣಾ ಆಯೋಗಕ್ಕೆ ತಿಳಿಸಿದ್ದರು.

ಇದನ್ನೂ ಓದಿ: ನಾಗೇಂದ್ರ ಕೃತ್ಯಗಳ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಇಡಿ ಚಾರ್ಜ್​ಶೀಟ್

ಹೀಗಾಗಿ, ಬಳ್ಳಾರಿ ಹಾಗೂ ರಾಯಚೂರು ಲೋಕಸಭಾ ಫಲಿತಾಂಶ ರದ್ದುಗೊಳಿಸುವಂತೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ದೂರಿನ ವೇಳೆ ಅರುಣ್​ ಹಿರೇಹಾಳ್​ ಕೆಲವು ಮಹತ್ವದ ದಾಖಲೆ ಸಲ್ಲಿಕೆ ಮಾಡಿದ್ದರು.

ಬಳ್ಳಾರಿ ಲೋಕಸಭಾ ಚುನಾವಣೆಗೆ 21 ಕೋಟಿ ಬಳಕೆ

ವಾಲ್ಮೀಕಿ ನಿಗಮದ 21 ಕೋಟಿ ರೂಪಾಯಿ ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಮನಿಟ್ರಯಲ್ ನಡೆದಿದೆ ಎಂದು ಚಾರ್ಜ್​​​ಶೀಟ್​​ನಲ್ಲಿ ಉಲ್ಲೇಖಿಸಲಾಗಿತ್ತು. ನಾಗೇಂದ್ರ ಸೇರಿ 5 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿತ್ತು.

ನಾಗೇಂದ್ರ ಅಣತಿಯಂತೆ ಹಣಕಾಸು ವಹಿವಾಟು

ವಾಲ್ಮೀಕಿ ನಿಗಮದ ಅವ್ಯವಹಾರ ಮಾಜಿ ಸಚಿವ ನಾಗೇಂದ್ರ ಅವರ ಅಣತಿಯಂತೆ ನಡೆದಿದೆ. ನಾಗೇಂದ್ರ ಅವರು ಆರೋಪಿ ಸತ್ಯನಾರಯಣವರ್ಮ ಜೊತೆ ನಿಕಟ ಸಂಪರ್ಕ ಹೊಂದಿದ್ದ ಬಗ್ಗೆ ಚಾರ್ಜ್​​​ಶೀಟ್​​ನಲ್ಲಿ ಉಲ್ಲೇಖಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:38 am, Sat, 14 September 24

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ