AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ನಿಗಮ ಹಗರಣ: ಅಮಿತ್ ಶಾಗೆ ಪತ್ರ ಬರೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪತ್ರದಲ್ಲೇನಿದೆ?

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ಇಡಿ ಪರಿಶೀಲನೆ ಜೋರಾಗಿಯೇ ಇದೆ. ಈ ಮಧ್ಯೆ ಕೇಂದ್ರ ಗೃಹಸಚಿವ ಅಮಿತ್​ ಶಾ ಅವರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರ ಬರೆದಿದ್ದು, ಭವಿಷ್ಯದಲ್ಲಿ ಇಂತಹ ಕೃತ್ಯಗಳನ್ನು ತಡೆಯಲು ಕ್ರಮವಹಿಸಬೇಕು ಮನವಿ ಮಾಡಿದ್ದಾರೆ.

ವಾಲ್ಮೀಕಿ ನಿಗಮ ಹಗರಣ: ಅಮಿತ್ ಶಾಗೆ ಪತ್ರ ಬರೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪತ್ರದಲ್ಲೇನಿದೆ?
ವಾಲ್ಮೀಕಿ ನಿಗಮ ಹಗರಣ: ಅಮಿತ್ ಶಾಗೆ ಪತ್ರ ಬರೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪತ್ರದಲ್ಲೇನಿದೆ?
ಹರೀಶ್ ಜಿ.ಆರ್​.
| Edited By: |

Updated on: Jul 11, 2024 | 6:28 PM

Share

ಬೆಂಗಳೂರು, ಜುಲೈ 11: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರಿಗೆ ಪತ್ರ ಬರೆಯುವ ಮೂಲಕ ವಾಲ್ಮೀಕಿ ನಿಗಮದ ಹಗರಣದಲ್ಲಿ ಭಾಗಿಯಾಗಿರುವ ಹಣಕಾಸು ಸಂಸ್ಥೆಗಳಿಂದ ಸಮಗ್ರ ಮತ್ತು ಸ್ವತಂತ್ರ ತನಿಖೆ ನಡೆಸುವಂತೆ ಕೋರಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆ ತೀವ್ರಗೊಳ್ಳಬೇಕು. ಪ್ರಕರಣದಲ್ಲಿ ಯೂನಿಯನ್ ಬ್ಯಾಂಕ್ ಶಾಮೀಲಾಗಿದೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದ್ದಾರೆ.

ಸಮಗ್ರ ತನಿಖೆ ಮಾಡಿಸಿ ಹಗರಣದಲ್ಲಿ ಭಾಗಿಯಾದವನ್ನು ಹೊಣೆಗಾರರನ್ನಾಗಿ ಮಾಡಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ಯೂನಿಯನ್ ಬ್ಯಾಂಕ್ ಮತ್ತು ಇತರೆ ಹಣಕಾಸು ಸಂಸ್ಥೆಗಳ ಪಾತ್ರದ ತನಿಖೆಯಾಗಬೇಕು. ಆ ಮೂಲಕ ಚಂದ್ರಶೇಖರ್ ಆತ್ಮಹತ್ಯೆಗೆ ಕಾರಣ ಪತ್ತೆಹಚ್ಚಬೇಕು. ಭವಿಷ್ಯದಲ್ಲಿ ಇಂತಹ ಕೃತ್ಯಗಳನ್ನು ತಡೆಯಲು ಕ್ರಮವಹಿಸಬೇಕು ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ಪ್ರಕರಣ: ಹಗರಣದ ಆರೋಪಿಗಳ‌ ಮತ್ತೊಂದು ಕಹಾನಿ ಬಯಲು

ಪ್ರಕರಣ ದಿನಕೊಂದು ತಿರುವು ಪಡೆದುಕೊಳ್ಳುತ್ತಿದೆ. ಅದ್ರಲ್ಲೂ ಈ ಕೇಸ್‌ಗೆ ಇಡಿ ಎಂಟ್ರಿಯಾಗ್ತಿದ್ದಂತೆ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್‌ಗೆ ಫುಲ್‌ ಗ್ರಿಲ್‌ ಮಾಡಲಾಗುತ್ತಿದೆ. ನಿನ್ನೆಯಿಂದಲೂ ಇಬ್ಬರ ಮ್ಯಾರಾಥಾನ್‌ ವಿಚಾರಣೆ ನಡೆಯುತ್ತಿದೆ. ಇದರ ನಡುವೆ ಕಾಂಗ್ರೆಸ್‌ ಶಾಸದ ದದ್ದಲ್‌ ಮಾಜಿ ಪಿಎ ಪಂಪಣ್ಣ ಇವತ್ತು ಅರೆಸ್ಟ್‌ ಆಗಿದ್ದಾನೆ.

ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣ: ಬಿ ನಾಗೇಂದ್ರ ಫ್ಲ್ಯಾಟ್​ನಲ್ಲಿ ಇಬ್ಬರನ್ನು ವಶಕ್ಕೆ ಪಡೆದ ಇಡಿ

ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ವಿಲ್ಲಾದಲ್ಲಿ, ಇಡಿ ಅಧಿಕಾರಿಗಳು ಇಂಚಿಂಚೂ ಜಾಲಾಡಿದ್ದರು. ಯಲಹಂಕದ ಶ್ರೀನಿವಾಸಪುರ ಬಳಿಯ ವಿಲ್ಲಾ ಖರೀದಿಯ ಬಗ್ಗೆ ದದ್ದಲ್‌ ದಂಪತಿಯನ್ನ ವಿಚಾರಣೆ ಮಾಡಲಾಗಿದೆ. ಆದರೆ ದದ್ದಲ್​ ಮಾತ್ರ ಯಾವುದನ್ನೂ ಒಪ್ಪಿಕೊಳ್ಳುತ್ತಿಲ್ಲ. ಎಲ್ಲವೂ ಮಾಜಿ ಪಿಎ ಪಂಪಣ್ಣನತ್ತಲೇ ಬೊಟ್ಟು ಮಾಡಿ ತೋರಿಸಿದ್ದಾರೆ. ಇನ್ನು ಪಂಪಣ್ಣ ಪಡೆದುಕೊಂಡಿರೋ 55 ಲಕ್ಷ ರೂ. ಹಣದ ಬಗ್ಗೆ ಪ್ರಶ್ನೆ ಮಾಡಿದ್ರೂ ಆ ವಿಚಾರ ನನಗೆ ಗೊತ್ತಿಲ್ಲ ಅಂದಿದ್ದಾರೆ.

ವಾಲ್ಮೀಕಿ ನಿಗಮ ಹಗರಣ ಸಂಬಂಧ ಸರ್ಕಾರದ ವಿರುದ್ಧ ಬಿಜೆಪಿ ಬೀದಿಗಿಳಿಯಲು ನಿರ್ಧರಿಸಿದೆ. ಜುಲೈ 15ಕ್ಕೆ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಕರೆ ನೀಡಿದೆ. ಆದರೆ ಇದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ