ಬಾರ್​, ಚಿನ್ನದಂಗಡಿಯ ಖಾತೆಗಳಿಗೆ ವರ್ಗವಾಗಿತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ

Valmiki corporation scam: ವಾಲ್ಮೀಕಿ ನಿಗಮ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯಲ್ಲಿ ಮಹತ್ವದ ಪ್ರಗತಿ ಕಂಡಿರುವ ಎಸ್​ಐಟಿ, ಅಕ್ರಮ ಹಣ ವರ್ಗಾವಣೆಯಾಗಿದ್ದ 18 ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದಿದ್ದ ಆರೋಪಿ ಸತ್ಯನಾರಾಯಣ ವರ್ಮಾನನ್ನು ಹೈದರಾಬಾದ್​ನಲ್ಲಿ ಬಂಧಿಸಿತ್ತು. ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಮಹತ್ವ ವಿಚಾರ ಬೆಳಕಿಗೆ ಬಂದಿದೆ.

ಬಾರ್​, ಚಿನ್ನದಂಗಡಿಯ ಖಾತೆಗಳಿಗೆ ವರ್ಗವಾಗಿತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ
ವಾಲ್ಮೀಕಿ ಅಭಿವೃದ್ಧಿ ನಿಗಮ
Follow us
|

Updated on:Jun 14, 2024 | 10:47 AM

ಬೆಂಗಳೂರು, ಜೂನ್​ 14: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಳ ಅಭಿವೃದ್ಧಿ ನಿಗಮದ (Valmiki Scheduled Tribes Development Corporation) 94.73 ಕೋಟಿ ರೂ. ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 18 ನಕಲಿ ಖಾತೆಗಳಿಗೆ (Fake Account) ವರ್ಗಾವಣೆಯಾಗಿದ್ದ ಮೊತ್ತವನ್ನು ಮದ್ಯದಂಗಡಿಗಳು (Bar), ಚಿನ್ನಾಭರಣ ಮಾರಟ ಮಳಿಗೆಗಳು ಹಾಗೂ ಸಣ್ಣ ಕಂಪನಿಗಳಿಗೆ ವರ್ಗಾಯಿಸಿಕೊಂಡು ನಗದು ಹಣ ಪಡೆದಿರುವುದು ವಿಶೇಷ ತನಿಖಾ ತಂಡ (SIT) ತನಿಖೆಯಲ್ಲಿ ಬಯಲಾಗಿದೆ.

ಪ್ರಕರಣ ಸಂಬಂಧ ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ನಕಲಿ ಖಾತೆಗಳನ್ನು ತೆರೆಯುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಆರೋಪದಡಿ ಎಸ್‌ಐಟಿ ಅಧಿಕಾರಿಗಳು ಹೈದರಾಬಾದ್‌ನಲ್ಲಿ ಸತ್ಯನಾರಾಯಣ ವರ್ಮಾ ಮತ್ತು ಚಂದ್ರಮೋಹನ್‌ ಬಂಧಿಸಿ ಬುಧವಾರ ನಗರಕ್ಕೆ ಕರೆತಂದು ವಿಚಾರಣೆಗೆ ಒಳಪಡಿಸಿದಾಗ ಈ ವಿಚಾರ ಬಾಯಿ ಬಿಟ್ಟಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಹಿಂತಿರುಗಿಸುವಂತೆ ತೆಲಂಗಾಣ ಸಿಎಂಗೆ ಜೆಡಿಎಸ್​ ಪತ್ರ

ಈ ಆರೋಪಿಗಳು ತೆರೆದಿದ್ದ 18 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ ನಿಗಮದ ಹಣವನ್ನು ಹೈದರಾಬಾದ್ ಮತ್ತು ಬೆಂಗಳೂರಿನ ವೈನ್ ಶಾಪ್‌ಗಳು, ಬಾರ್‌ಗಳು, ಚಿನ್ನಾಭರಣ ಮಾರಾಟ ಮಳಿಗೆಗಳು ಹಾಗೂ ಸಣ್ಣ ಕಂಪನಿಗಳು ಸೇರಿದಂತೆ ನೂರಕ್ಕೂ ಅಧಿಕ ಖಾತೆಗಳಿಗೆ ವರ್ಗಾಯಿಸಿಕೊಂಡು ಬಳಿಕ ನಗದು ರೂಪದಲ್ಲಿ ಪಡೆದಿರುವುದು ವಿಚಾರಣೆಯಲ್ಲಿ ತಿಳಿದುಬಂದಿದೆ.

ಸತ್ಯನಾರಾಯಣ ವರ್ಮಾ ಸಂಬಂಧಿಕರ ಮನೆಯಲ್ಲಿ 8.21 ಕೋಟಿ ರೂ. ಪತ್ತೆಯಾಗಿದೆ. ಹಣವನ್ನು 4 ಸೂಟ್ ಕೇಸ್‌ಗಳಲ್ಲಿ ತುಂಬಿಸಿ, ಸಂಬಂಧಿಕರ ಮನೆಯಲ್ಲಿ ಇರಿಸಲಾಗಿತ್ತು. ಎಸ್‌ಐಟಿ ಅಧಿಕಾರಿಗಳು ಆರೋಪಿಯ ಸಂಬಂಧಿಕರ ಮನೆಗಳಿಗೆ ತೆರಳಿ ಹಣವನ್ನು ಜಪ್ತಿ ಮಾಡಿದ್ದಾರೆ. ಅಂತೆಯೆ ವಂಚಕ ಸತ್ಯನಾರಾಯಣ ವರ್ಮಾ ಓಡಾಡುತ್ತಿದ್ದ ಐಷಾರಾಮಿ ಲ್ಯಾಂಬೋರ್ಗಿನಿ ಕಾರನ್ನೂ ಸಹ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಪ್ರಕರಣದಲ್ಲಿ ಈವರೆಗೆ ಎಸ್​​ಐಟಿ ಅಧಿಕಾರಿಗಳು 94.73 ಕೋಟಿ ಹಣದಲ್ಲಿ ಸುಮಾರು 11.83 ಕೋಟಿ ರೂ, ನಗದು ಜಪ್ತಿ ಮಾಡಿದ್ದಾರೆ. ತನಿಖೆ ಮುಂದುವರೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:04 am, Fri, 14 June 24

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ