ವಿಜಯೇಂದ್ರ ವಿರುದ್ಧ ಅಸಮಾಧಾನ: ಪ್ರತ್ಯೇಕ ಪಾದಯಾತ್ರೆಗೆ ಮುಂದಾದ ರಮೇಶ್ ಜಾರಕಿಹೊಳಿ

ಮುಡಾ ಹಗರಣ ಖಂಡಿಸಿ ರಾಜ್ಯ ಬಿಜೆಪಿ ನಾಯಕರು ಬೆಂಗಳೂರಿನಿಂದ-ಮೈಸೂರುವರೆಗು ಪಾದಯಾತ್ರೆ ಮಾಡಲು ನಿರ್ಧರಿಸಿದ್ದಾರೆ. ಆದರೆ ಇತ್ತ, ರಮೇಶ್​ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ್​​ ಯತ್ನಾಳ್​ ಪ್ರತ್ಯೇಕ ಪಾದಾಯಾತ್ರೆ ಮಾಡಲು ನಿರ್ಧರಿಸಿದ್ದು ಅಚ್ಚರಿಗೆ ಕಾರಣವಾಗಿದೆ.

ವಿಜಯೇಂದ್ರ ವಿರುದ್ಧ ಅಸಮಾಧಾನ: ಪ್ರತ್ಯೇಕ ಪಾದಯಾತ್ರೆಗೆ ಮುಂದಾದ ರಮೇಶ್ ಜಾರಕಿಹೊಳಿ
ಬಿಜೆಪಿ ಶಾಸಕ ರಮೇಶ್​ ಜಾರಕಿಹೊಳಿ
Follow us
| Updated By: ವಿವೇಕ ಬಿರಾದಾರ

Updated on:Jul 29, 2024 | 6:32 AM

ಬೆಳಗಾವಿ, ಜುಲೈ 28: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕಿಂತ ವಾಲ್ಮೀಕಿ ನಿಗಮದ (Maharshi Valmiki Scheduled Tribes Development Corporation) ಹಗರಣ ದೊಡ್ಡದು. ವಾಲ್ಮೀಕಿ ನಿಗಮದ ಹಗರಣ, ಎಸ್​ಸಿಎಸ್​ಪಿ, ಟಿಎಸ್​ಪಿ ಹಣವನ್ನು ಗ್ಯಾರಂಟಿಗೆ ಬಳಸಿದ್ದಾರೆ. ಇದನ್ನು ಖಂಡಿಸಿ ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆಗೆ ಸಿದ್ಧರಿದ್ದೇವೆ. ಪಾದಯಾತ್ರೆ ಬಗ್ಗೆ ಹೈಕಮಾಂಡ್​ನಿಂದ ಅನುಮತಿ ಕೇಳಿದ್ದೇವೆ ಎಂದು ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಹೇಳಿದರು. ಗೋಕಾಕ್​ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ವಾಲ್ಮೀಕಿ ಸಮುದಾಯಕ್ಕೆ ರಾಜ್ಯ ಸರ್ಕಾರ ಮೋಸ‌ ಮಾಡಿದೆ. ಬಿಜೆಪಿ ಹೈಕಮಾಂಡ್​ ಒಪ್ಪಿಗೆ ನೀಡಿದರೇ ನಾನು, ಬಸನಗೌಡ ಪಾಟೀಲ್​ ಯತ್ನಾಳ್​ ಪಾದಯಾತ್ರೆ ಮಾಡಲು ಸಿದ್ದರಿದ್ದೇವೆ ಎಂದರು.

ಸದನದಲ್ಲಿ ಗಲಾಟೆ ಮಾಡಿದರೆ ಸಾಲಲ್ಲ, ಪಾದಯಾತ್ರೆ ಮಾಡಬೇಕು. ಬಳ್ಳಾರಿ ಪಾದಯಾತ್ರೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಪಾದಯಾತ್ರೆ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷರ ಜೊತೆ ಮಾತನಾಡಲ್ಲ. ನಾನೇನಿದ್ದರೂ ಹೈಕಮಾಂಡ್ ಜೊತೆ ಮಾತನಾಡ್ತೇನೆ. ಪಾದಯಾತ್ರೆಗೆ ರಾಜ್ಯ ಬಿಜೆಪಿ ಅಧ್ಯಕ್ಷರು ಒಪ್ಪಿಲ್ಲ, ಒಪ್ಪುವುದೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರ ಹಾಕಿದರು.

ಇದನ್ನೂ ಓದಿ: ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ: ರೂಪುರೇಷ ಸಿದ್ಧ, ಇಲ್ಲಿದೆ ರೂಟ್​​ಮ್ಯಾಪ್

ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕೆಳಗಿಳಿಸುವ ಹುನ್ನಾರ ನಡೆದಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕೆಲವು ವಿಚಾರ ಮಾಧ್ಯಮಗಳ ಮುಂದೆ ಹೇಳಲು ಆಗವುದಿಲ್ಲ. ಸಿದ್ದರಾಮಯ್ಯ ಕೆಳಗಿಳಿಸುವುದು ಬಿಡುವುದು ಅವರ ಪಕ್ಷದ ಆಂತರಿಕ ವಿಚಾರ. ಸರ್ಕಾರ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಕಾರಣ. ಸಿಡಿ ಶಿವುನಂತವರು ಎದೆ ಉಬ್ಬಿಸಿಕೊಂಡು ಮಾತನಾಡಿದರೆ ಆಗಲ್ಲ. ಈಗ ಮಹಾನಾಯಕನ ಹೆಸರು ಬದಲಾವಣೆ ಆಗಿದೆ. ಮಹಾನಾಯಕ ಎಂದರೆ ಬಿ.ಆರ್​ ಅಂಬೇಡ್ಕರ್​ ಅವರಿಗೆ ಅವಮಾನ ಆಗುತ್ತೆ. ಡಿಕೆ ಶಿವಕುಮಾರ್​ ಅವರಿಗೆ ಸಿಡಿ ಶಿವು ಎಂದು ನಾನು ಕುಮಾರಸ್ವಾಮಿ ಮರುನಾಮಕರಣ ಮಾಡಿದ್ದೇವೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ಪಕ್ಷದ ತಪ್ಪಿಗಿಂತ, ಬಿಜೆಪಿಯ ತಪ್ಪಿನಿಂದ ನಾವು ಅಧಿಕಾರಕ್ಕೆ ಬರಲಿಲ್ಲ. ಬಿಜೆಪಿ ಸಮಸ್ಯೆಯಿಂದ ಪಕ್ಷ ಅಧಿಕಾರಕ್ಕೆ ಬರಲಿಲ್ಲ. ಪಕ್ಷ ಸಂಘಟನೆಗೆ ಒತ್ತು ಕೊಡಬೇಕು ಎಂದರು.

ಮುಡಾ ಹಗರಣ ಖಂಡಿಸಿ ರಾಜ್ಯ ಬಿಜೆಪಿ ನಾಯಕರು ಬೆಂಗಳೂರಿನಿಂದ-ಮೈಸೂರುವರೆಗು ಪಾದಯಾತ್ರೆ ಮಾಡಲು ನಿರ್ಧರಿಸಿದ್ದಾರೆ. ಆದರೆ ಇತ್ತ, ರಮೇಶ್​ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ್​​ ಯತ್ನಾಳ್​ ಪ್ರತ್ಯೇಕ ಪಾದಾಯಾತ್ರೆ ಮಾಡಲು ನಿರ್ಧಿಸಿದ್ದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:49 pm, Sun, 28 July 24

Daily Devotional: ನವರಾತ್ರಿ 9ನೇ ದಿನ ಸಿದ್ಧಿದಾತ್ರಿ ದೇವಿ ಆರಾಧನೆ ಮಹತ್ವ
Daily Devotional: ನವರಾತ್ರಿ 9ನೇ ದಿನ ಸಿದ್ಧಿದಾತ್ರಿ ದೇವಿ ಆರಾಧನೆ ಮಹತ್ವ
Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ