ವಾಲ್ಮೀಕಿ ಅಭಿವೃದ್ಧಿ ನಿಗಮದ ವಂಚನೆ ಕೇಸ್​: ಬಂಧಿತ ಅಧಿಕಾರಿಗಳು 6 ದಿನ SIT ಕಸ್ಟಡಿಗೆ

ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧೀಕ್ಷಕರ ಸಾವು ಮತ್ತು ಕೋಟ್ಯಂತರ ರೂ. ವಂಚನೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು 6 ದಿನ SIT ಕಸ್ಟಡಿಗೆ ನೀಡಿ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್‌ ಆದೇಶ ಹೊರಡಿಸಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ವಂಚನೆ ಕೇಸ್​: ಬಂಧಿತ ಅಧಿಕಾರಿಗಳು 6 ದಿನ SIT ಕಸ್ಟಡಿಗೆ
ವಾಲ್ಮೀಕಿ ಅಭಿವೃದ್ಧಿ ನಿಗಮದ ವಂಚನೆ ಕೇಸ್​: ಬಂಧಿತ ಅಧಿಕಾರಿಗಳು 6 ದಿನ SIT ಕಸ್ಟಡಿಗೆ
Follow us
Prajwal Kumar NY
| Updated By: ಗಂಗಾಧರ​ ಬ. ಸಾಬೋಜಿ

Updated on:Jun 01, 2024 | 6:22 PM

ಬೆಂಗಳೂರು, ಜೂನ್​ 01: ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧೀಕ್ಷಕರ ಸಾವು ಮತ್ತು ಕೋಟ್ಯಂತರ ರೂ. ವಂಚನೆ ಪ್ರಕರಣದ (Valmiki Development Corporation case) ತನಿಖೆ ಚುರುಕುಗೊಂಡಿದೆ. ನಿನ್ನೆ ರಾಜ್ಯ ಸರ್ಕಾರ ಪ್ರಕರಣವನ್ನು ಎಸ್​​ಐಟಿಗೆ ನೀಡಿತ್ತು. ಅದರ ಬೆನ್ನೆಲ್ಲೇ ಇಂದು ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಬಂಧಿಸಲಾಗಿತ್ತು. ಇದೀಗ ಬಂಧಿತರನ್ನು 6 ದಿನ SIT ಕಸ್ಟಡಿಗೆ ನೀಡಿ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್‌ ಆದೇಶ ಹೊರಡಿಸಿದೆ.

ಹಗರಣ ಬಯಲಿಗೆ ಬಂದ ಬಳಿಕ ಇಬ್ಬರೂ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು. ಬ್ಯಾಂಕ್ ಅಧಿಕಾರಿಗಳ ವಿರುದ್ಧವು ಎಫ್​ಐಆರ್​ ದಾಖಲಾಗಿತ್ತು. ಯೂನಿಯನ್ ಬ್ಯಾಂಕ್​ನ ಎಂಡಿ ಹಾಗೂ ಸಿಇಓ ಮಣಿಮೇಘಲೈ, ಕಾರ್ಯನಿರ್ವಾಹಕ ನಿರ್ದೇಶಕ ನಿತೇಶ್ ರಂಜನ್, ರಾಮ ಸುಬ್ರಮಣ್ಯಂ ಸೇರಿ 6 ಮಂದಿ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಯಲ್ಲಿ FIR ದಾಖಲಿಸಲಾಗಿತ್ತು.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಇಬ್ಬರು ಅಧಿಕಾರಿಗಳ ಬಂಧನ

ಬೆಂಗಳೂರಿನ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯಲ್ಲಿ ಅಧೀಕ್ಷ ಚಂದ್ರಶೇಖರ್ ಇತ್ತೀಚೆಗೆ ರಾತ್ರಿ ಶಿವಮೊಗ್ಗದ ವಿನೋಬನಗರದ ಕೆಂಚಪ್ಪ ಲೇಚೌಟ್ ನಲ್ಲಿ ನೇಣಿಗೆ ಶರಣಾಗಿದ್ದರು. ನೇಣಿಗೂ ಮೊದಲು ಚಂದ್ರಶೇಖರ್ ಆರು ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದರು. 187.33 ಕೋಟಿ ರೂ. ನಿಗಮ ಅನುದಾನದಲ್ಲಿ 80 ರಿಂದ 85 ಕೋಟಿ ರೂ. ಅವ್ಯವಹಾರ ಆಗಿದೆ.

ಈ ವ್ಯವಹಾರಕ್ಕೆ ತನ್ನನ್ನು ಹಿರಿಯ ಅಧಿಕಾರಿಗಳಾದ ಪದ್ಮನಾಭ್ಮ, ಪರಶುರಾಮ್ ಹಾಗೂ ಬೆಂಗಳೂರು ಎಂ ಜಿ ರಸ್ತೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ವ್ಯವಸ್ಥಾಪಕಿ ಶುಚಿಸ್ಮಿತಾ ರವುಲ್ ಮೂವರು ಸೇರಿ ಗೋಲ್ ಮಾಲ್ ಮಾಡಿದ್ದಾರೆ. ವಸಂತ ನಗರದಲ್ಲಿರುವ ಖಾತೆಯ ಉಪ ಖಾತೆಯನ್ನು ಎಂ ಜಿ ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್​ನಲ್ಲಿ ಓಪನ್ ಮಾಡಿದ್ದಾರೆ. ಈ ಉಪ ಖಾತೆಗೆ ಒಟ್ಟು 187.33 ಕೋಟಿ ರೂ. ಹಣ ಜಮಾ ಆಗಿತ್ತು. ಆ ಖಾತೆಯಿಂದಲೇ ಕೋಟಿ ಕೋಟಿ ಹಣ ದುರುಪಯೋಗ ಆಗಿದೆ.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ​, ಸೋನಿಯಾ ಗಾಂಧಿಗೂ ಪಾಲು ಸಿಕ್ಕಿದೆ: ಅಶೋಕ್ ಗಂಭೀರ ಆರೋಪ​

ಇದರಲ್ಲಿ ತನ್ನನ್ನು ಸಿಕ್ಕಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈ ಎಲ್ಲ ಅವ್ಯವಹಾರಕ್ಕೆ ಮೂವರು ಅಧಿಕಾರಿಗಳು ಕಾರಣ ಎನ್ನುವುದು ಡೆತ್ ನೋಟ್​ನ ಸಾರಾಂಶವಾಗಿತ್ತು. ಚಂದ್ರಶೇಖರ್ ಪತ್ನಿ ಮತ್ತು ಮಕ್ಕಳು ಶಿವಮೊಗ್ಗದಲ್ಲಿ ವಾಸವಾಗಿದ್ದಾರೆ. ಪತಿಯು ವೀಕೆಂಡ್​ಗೆ ಶಿವಮೊಗ್ಗಕ್ಕೆ ಬಂದು ಹೋಗುತ್ತಿದ್ದರು. ಸದ್ಯ ಕೋಟ್ಯಾಂತರ ಅವ್ಯವಹಾರ ಪ್ರಕರಣದಿಂದ ವಿಚಲಿತವಾಗಿದ್ದ ಚಂದ್ರಶೇಖರ್ ಬೇರೆ ದಾರಿ ಕಾಣದೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವುದು ಕುಟುಂಬಸ್ಥರ ಅಳಲು ತೊಡಿಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:11 pm, Sat, 1 June 24

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ