ವಾಲ್ಮೀಕಿ ನಿಗಮ ಹಗರಣ: ಈವರೆಗೆ ಬಂಧನಕ್ಕೊಳಗಾದವರು ಯಾರೆಲ್ಲ? ವಿವರ ಇಲ್ಲಿದೆ ನೋಡಿ

ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿ ಎಸ್​​ಐಟಿ ಈವರೆಗೆ ಒಟ್ಟು 11 ಜನರನ್ನು ಬಂಧಿಸಿದೆ. 6 ಮಂದಿ ತಲೆಮರೆಸಿಕೊಂಡಿದ್ದಾರೆ. ಜಾರಿ ನಿರ್ದೇಶನಾಲಯ ಒಬ್ಬರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದೆ. ಬಂಧಿತರ ಹಾಗೂ ತಲೆಮರೆಸಿಕೊಂಡವರ ವಿವರ ಇಲ್ಲಿದೆ.

ವಾಲ್ಮೀಕಿ ನಿಗಮ ಹಗರಣ: ಈವರೆಗೆ ಬಂಧನಕ್ಕೊಳಗಾದವರು ಯಾರೆಲ್ಲ? ವಿವರ ಇಲ್ಲಿದೆ ನೋಡಿ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on: Jul 11, 2024 | 9:59 AM

ಬೆಂಗಳೂರು, ಜುಲೈ 11: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ 187 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ಕರ್ನಾಟಕದ ಹಲವೆಡೆ ದಾಳಿ ನಡೆಸಿ ಅನೇಕ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಮಾಜಿ ಸಚಿವ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ನಿವಾಸದ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು ತಡರಾತ್ರಿ ವರೆಗೂ ಶೋಧಕಾರ್ಯ ನಡೆಸಿದ್ದರು. ನಾಗೇಂದ್ರ ಪಿಎ ಹರೀಶ್‌ನನ್ನು ವಶಕ್ಕೆ ಪಡೆದು ನಂತರ ರಾತ್ರಿ ಬಿಡುಗಡೆ ಮಾಡಿದ್ದರು.

ಬಂಧನಕ್ಕೊಳಗಾವರ ವಿವರ

  1. ಸತ್ಯನಾರಾಯಣ, ಎಫ್​ಎಫ್​ಸಿಸಿಎಲ್ ಅಧ್ಯಕ್ಷ
  2. ಸತ್ಯನಾರಾಯಣ ವರ್ಮಾ
  3. ಚಂದ್ರಮೋಹನ್
  4. ಶ್ರೀನಿವಾಸ್
  5. ಜಗದೀಶ್, ಮಧ್ಯವರ್ತಿಗಳು
  6. ಜೆಜೆ ಪದ್ಮನಾಭ್‌ – ವಾಲ್ಮೀಕಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ)
  7. ಪರಶುರಾಮ ದುರುಗಣ್ಣವರ, ನಿಗಮದ ಹಿಂದಿನ ಲೆಕ್ಕಾಧಿಕಾರಿ
  8. ನೆಕ್ಕಂಟಿ ನಾಗರಾಜ್‌, ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ
  9. ನಾಗೇಶ್ವರ ರಾವ್‌, ಮಾಜಿ ಸಚಿವ ನಾಗೇಂದ್ರ ಸಂಬಂಧಿ
  10. ಸಾಯಿ ತೇಜ, ಸತ್ಯನಾರಾಯಣ ವರ್ಮಾ ಸಹಚರ
  11. ತೇಜ ತಮ್ಮಯ್ಯ

35 ಕೋಟಿ ರೂ. ಜಪ್ತಿ

ಎಸ್ಐಟಿ ಇದುವರೆಗೂ ಒಟ್ಟು 35 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ನಗದು, ಚಿನ್ನಾಭರಣ ಹಾಗೂ ಬ್ಯಾಂಕ್‌ಗಳಲ್ಲಿದ್ದ ಹಣ ಜಪ್ತಿ ಮಾಡಿದೆ.

ಯೂನಿಯನ್ ಬ್ಯಾಂಕ್ ಕೆಲ ಹಿರಿಯ ಅಧಿಕಾರಿಗಳು ಈ ಅವ್ಯವಹಾರದಲ್ಲಿ ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಎಸ್​ಐಟಿ ತನಿಖೆ ವೇಳೆ ಸಿದ್ಧವಾಗಿದ್ದ ಆರೋಪಿ ಸ್ಥಾನದಲ್ಲಿರುವ ಬ್ಯಾಂಕ್ ಸಿಬ್ಬಂದಿಗಳ ಪಟ್ಟಿ ಇಲ್ಲಿದೆ. ಇವರೆಲ್ಲ ಸದ್ಯ ತಲೆಮರೆಸಿಕೊಂಡಿದ್ದಾರೆ.

  • ಮನಮೆಕಲೈ, ಎಂಡಿ, ಸಿಇಓ, ಯೂನಿಯನ್ ಬ್ಯಾಂಕ್ ಅಪ್ ಇಂಡಿಯಾ.
  • ನಿತೇಶ್ ರಂಜನ್, ನಿರ್ದೇಶಕ ಯೂನಿಯನ್ ಬ್ಯಾಂಕ್ ಅಪ್ ಇಂಡಿಯಾ.
  • ರಾಮಸುಬ್ರಮಣ್ಯ ನಿರ್ದೇಶಕ, ಯೂನಿಯನ್ ಬ್ಯಾಂಕ್ ಅಫ್ ಇಂಡಿಯಾ.
  • ಸಂಜಯ್ ರುದ್ರ, ನಿರ್ದೇಶಕ, ಯೂನಿಯನ್ ಬ್ಯಾಂಕ್ ಅಫ್ ಇಂಡಿಯಾ.
  • ಪಂಕಜ್ ದ್ವಿವೇದಿ, ನಿರ್ದೇಶಕ ಯೂನಿಯನ್ ಬ್ಯಾಂಕ್ ಅಪ್ ಇಂಡಿಯಾ.
  • ಸುಚಿ ಸ್ಮಿತಾ, ಮ್ಯಾನೇಜರ್ ಯೂನಿಯನ್ ಬ್ಯಾಂಕ್ ಅಫ್ ಇಂಡಿಯಾ.

ಇದನ್ನೂ ಓದಿ: ವಾಲ್ಮೀಕಿ ಹಗರಣ: ಇಡಿ ಸುಳಿಯಲ್ಲಿ ಸಿಲುಕಿರುವ ಬಸನಗೌಡ ದದ್ದಲ್, ನಾಗೇಂದ್ರಗೆ ಎಸ್​ಐಟಿ ಶಾಕ್

ಈನ ಆರು ಮಂದಿ ಅಷ್ಟೇ ಅಲ್ಲದೆ, ಡೆಪ್ಯೂಟಿ ಬ್ರಾಂಚ್ ಹೆಡ್ ದೀಪಾ ಹಾಗೂ ಕ್ರೆಡಿಟ್ ಆಫೀಸರ್ ಕೃಷ್ಣಮೂರ್ತಿ ಎಂಬುವವರ ಹೆಸರೂ ಕೂಡ ಸಿಬಿಐ ಎಫ್ಐಆರ್​​ನಲ್ಲಿ ಉಲ್ಲೇಖವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ