ಬೆಂಗಳೂರು, ಜುಲೈ 11: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ 187 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ಕರ್ನಾಟಕದ ಹಲವೆಡೆ ದಾಳಿ ನಡೆಸಿ ಅನೇಕ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಮಾಜಿ ಸಚಿವ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ನಿವಾಸದ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು ತಡರಾತ್ರಿ ವರೆಗೂ ಶೋಧಕಾರ್ಯ ನಡೆಸಿದ್ದರು. ನಾಗೇಂದ್ರ ಪಿಎ ಹರೀಶ್‌ನನ್ನು ವಶಕ್ಕೆ ಪಡೆದು ನಂತರ ರಾತ್ರಿ ಬಿಡುಗಡೆ ಮಾಡಿದ್ದರು.
ಎಸ್ಐಟಿ ಇದುವರೆಗೂ ಒಟ್ಟು 35 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ನಗದು, ಚಿನ್ನಾಭರಣ ಹಾಗೂ ಬ್ಯಾಂಕ್‌ಗಳಲ್ಲಿದ್ದ ಹಣ ಜಪ್ತಿ ಮಾಡಿದೆ.
ಯೂನಿಯನ್ ಬ್ಯಾಂಕ್ ಕೆಲ ಹಿರಿಯ ಅಧಿಕಾರಿಗಳು ಈ ಅವ್ಯವಹಾರದಲ್ಲಿ ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಎಸ್ಐಟಿ ತನಿಖೆ ವೇಳೆ ಸಿದ್ಧವಾಗಿದ್ದ ಆರೋಪಿ ಸ್ಥಾನದಲ್ಲಿರುವ ಬ್ಯಾಂಕ್ ಸಿಬ್ಬಂದಿಗಳ ಪಟ್ಟಿ ಇಲ್ಲಿದೆ. ಇವರೆಲ್ಲ ಸದ್ಯ ತಲೆಮರೆಸಿಕೊಂಡಿದ್ದಾರೆ.
ಇದನ್ನೂ ಓದಿ: ವಾಲ್ಮೀಕಿ ಹಗರಣ: ಇಡಿ ಸುಳಿಯಲ್ಲಿ ಸಿಲುಕಿರುವ ಬಸನಗೌಡ ದದ್ದಲ್, ನಾಗೇಂದ್ರಗೆ ಎಸ್ಐಟಿ ಶಾಕ್
ಈನ ಆರು ಮಂದಿ ಅಷ್ಟೇ ಅಲ್ಲದೆ, ಡೆಪ್ಯೂಟಿ ಬ್ರಾಂಚ್ ಹೆಡ್ ದೀಪಾ ಹಾಗೂ ಕ್ರೆಡಿಟ್ ಆಫೀಸರ್ ಕೃಷ್ಣಮೂರ್ತಿ ಎಂಬುವವರ ಹೆಸರೂ ಕೂಡ ಸಿಬಿಐ ಎಫ್ಐಆರ್ನಲ್ಲಿ ಉಲ್ಲೇಖವಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ