AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ಹಗರಣ: ಕಾಂಗ್ರೆಸ್​ ಶಾಸಕ ನಾಗೇಂದ್ರನನ್ನು ಮತ್ತೆ ಇಡಿ ಕಸ್ಟಡಿಗೆ ನೀಡಿದ ಕೋರ್ಟ್

ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್​​ ಶಾಸಕ ಬಿ ನಾಗೇಂದ್ರನನ್ನು ಕೋರ್ಟ್​, ಮತ್ತೆ ಇಡಿ ಕಸ್ಟಡಿಗೆ ನೀಡಿದೆ.

ವಾಲ್ಮೀಕಿ ಹಗರಣ: ಕಾಂಗ್ರೆಸ್​ ಶಾಸಕ ನಾಗೇಂದ್ರನನ್ನು ಮತ್ತೆ ಇಡಿ ಕಸ್ಟಡಿಗೆ ನೀಡಿದ ಕೋರ್ಟ್
ನಾಗೇಂದ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ರಮೇಶ್ ಬಿ. ಜವಳಗೇರಾ|

Updated on:Jul 18, 2024 | 4:10 PM

Share

ಬೆಂಗಳೂರು, (ಜುಲೈ 18): ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಗ್ರಾಮಾಂತರ ಕಾಂಗ್ರೆಸ್ ನಾಗೇಂದ್ರನನ್ನು ಕೋರ್ಟ್​ ಮತ್ತೆ ಇಡಿ ಕಸ್ಟಡಿಗೆ ನೀಡಿದೆ. ನಾಗೇಂದ್ರ ಇಡಿ ಕಸ್ಟಡಿ ಇಂದಿಗೆ ಮುಗಿದಿದ್ದರಿಂದ ಅವರನ್ನು ಇಂದು (ಜುಲೈ 18) ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್​ಗೆ ಹಾಜರುಪಡಿಸಿದ್ದು, ಇದೀಗ ಕೋರ್ಟ್​ ಮತ್ತೆ ನಾಗೇಂದ್ರನನ್ನು 5 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ವರ್ಗಾವಣೆಯಾಗಿದ್ದ ಹಣ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮದ್ಯ ಖರೀದಿ ಮಾಡಿದ್ದಾರೆ. ಈ ಬಗ್ಗೆ ಬಸನಗೌಡ ದದ್ದಲ್​ ಮತ್ತು ನಾಗೇಂದ್ರ ನಿವಾಸದಲ್ಲಿ ಮಹತ್ವದ ದಾಖಲೆಗಳ ಪತ್ತೆಯಾಗಿವೆ ಎಂದು ಜಾರಿ ನಿರ್ದೇಶನಾಲಯದ ಪ್ರಕಟಣೆ ಮೂಲಕ ತಿಳಿಸಿದೆ. ಈ ಎಲ್ಲಾ ಅಂಶಗಳನ್ನು ಇಡಿ, ಕೋರ್ಟ್​ ಗಮನಕ್ಕೆ ತಂದು ಮತ್ತೆ ತನ್ನ ಕಸ್ಟಡಿಗೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ಅಲ್ಲ: ಹಗರಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಇಡಿ

ಅಲ್ಲದೇ ಒಟ್ಟು 89.65 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಜಾರಿ ನಿರ್ದೇಶನಾಲಯದಿಂದ ವಿಸ್ತೃತ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ವಾಲ್ಮೀಕಿ ಹಗರಣ ಸಂಬಂಧ ನಾಲ್ಕು ರಾಜ್ಯಗಳ 23 ಕಡೆ ದಾಳಿ ನಡೆಸಿದ್ದೇವೆ. 18 ನಕಲಿ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿದ್ದು, ನಂತರ ಹಲವು ನಕಲಿ ಅಕೌಂಟ್‌ಗಳಿಗೆ ಹೋಗಿ ಕ್ಯಾಶ್‌ ಆಗಿ ಮಾರ್ಪಟ್ಟಿದೆ. ಇದಕ್ಕೆ ಸಂಬಂಧಿಸಿದಂತೆ ನಾಗೇಂದ್ರ, ಬಸನಗೌಡ ದದ್ದಲ್‌ (ವಾಲ್ಮೀಕಿ ನಿಗಮದ ಅಧ್ಯಕ್ಷ) ಮನೆಯಲ್ಲಿ ದಾಖಲೆಗಳು ಪತ್ತೆಯಾಗಿವೆ ಎಂದು ಸ್ಪಷ್ಟಪಡಿಸಿದೆ.

ಬಸನಗೌಡ ದದ್ದಲ್​ ವಿಚಾರಣೆ

ಇನ್ನೊಂದೆಡೆ ನಿಗಮದ ಅಧ್ಯಕ್ಷ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್​ ಅವರನ್ನು ಇಡಿ ವಿಚಾರಣೆ ನಡೆಸಿದೆ. ಶಾಂತಿನಗರದಲ್ಲಿರುವ ಕಚೇರಿಯಲ್ಲಿ ದದ್ದಲ್​ನನ್ನು ವಿಚಾರಣೆಗೊಳಪಡಿಸಿದ್ದು, ದಾಳಿ ವೇಳೆ ಸಿಕ್ಕ ದಾಖಲೆಗ: ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:51 pm, Thu, 18 July 24