AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ಹಗರಣ; ಪ್ರಮುಖ ಆರೋಪಿ ನೆಕ್ಕಂಟಿ ನಾಗರಾಜ್ ಸಂಬಂಧಿಕರಿಗೆ ಇಡಿ ನೋಟಿಸ್​​

ವಾಲ್ಮೀಕಿ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಇಡಿ ಅಧಿಕಾರಿಗಳು ಬಳ್ಳಾರಿ ತಾಲೂಕಿನ ಕೃಷ್ಣಾನಗರದ ಕ್ಯಾಂಪ್​ನಲ್ಲಿರುವ ಪ್ರಮುಖ ಆರೋಪಿ ನೆಕ್ಕಂಟಿ ನಾಗರಾಜ್ ಅವರ ಸಂಬಂಧಿಕರಿಗೆ ನೋಟಿಸ್ ನೀಡಿದ್ದಾರೆ. ಹಣ ಹಿಂದಿರುಗಿಸದ ಬಗ್ಗೆ ಕಾರಣ ನೀಡುವಂತೆ ನೋಟಿಸ್ ನೀಡಿದ್ದಾರೆ. ನೆಕ್ಕಂಟಿ ನಾಗರಾಜ್​​ ಮಾವ ವೆಂಕಟೇಶ್ವರ ರಾವ್ ಎಸ್​ಐಟಿ ಕಸ್ಟಡಿಯಲ್ಲಿದ್ದಾರೆ.

ವಾಲ್ಮೀಕಿ ಹಗರಣ; ಪ್ರಮುಖ ಆರೋಪಿ ನೆಕ್ಕಂಟಿ ನಾಗರಾಜ್ ಸಂಬಂಧಿಕರಿಗೆ ಇಡಿ ನೋಟಿಸ್​​
ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರ
ವಿನಾಯಕ ಬಡಿಗೇರ್​
| Edited By: |

Updated on:Aug 06, 2024 | 7:39 AM

Share

ಬಳ್ಳಾರಿ, ಆಗಸ್ಟ್.06: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 89.62 ಕೋಟಿ ರೂ. ಅಕ್ರಮ ವರ್ಗಾವಣೆ ಪ್ರಕರಣಕ್ಕೆ (Valmiki Scam) ಸಂಬಂಧಿಸಿ ಪ್ರಮುಖ ಆರೋಪಿ ನೆಕ್ಕಂಟಿ ನಾಗರಾಜ್ ಅವರ ಸಂಬಂಧಿಕರಿಗೆ ಇಡಿ (Enforcement Directorate) ನೋಟಿಸ್ ನೀಡಿದೆ. ನೆಕ್ಕಂಟಿ ನಾಗರಾಜ್​​ ಮಾವ ವೆಂಕಟೇಶ್ವರ ರಾವ್​ ಮನೆಗೆ ಇಡಿ ತಂಡ ಭೇಟಿ ನೀಡಿದ್ದು ವೆಂಕಟೇಶ್ವರ ರಾವ್ ಈಗಾಗಲೇ ಎಸ್​ಐಟಿ (SIT) ಕಸ್ಟಡಿಯಲ್ಲಿದ್ದಾರೆ.

2-3 ದಿನಗಳ ಹಿಂದೆ ಬಳ್ಳಾರಿ ತಾಲೂಕಿನ ಕೃಷ್ಣಾನಗರದ ಕ್ಯಾಂಪ್​ಗೆ ಬಂದಿದ್ದ ಇಡಿ ಅಧಿಕಾರಿಗಳು, ನೆಕ್ಕಂಟಿ ನಾಗರಾಜ್​​ ಮಾವ ವೆಂಕಟೇಶ್ವರ ರಾವ್​ ಮನೆಗೆ ಭೇಟಿ ನೀಡಿದ್ದರು. ಸದ್ಯ ಇದೀಗ ಕೃಷ್ಣಾನಗರ ಕ್ಯಾಂಪ್​​ನ ಕೆಲವರಿಗೆ ನೋಟಿಸ್ ನೀಡಿದ್ದಾರೆ. ಹಾಗೂ ಹಣ ವಾಪಾಸ್ ನೀಡುವಂತೆ ತಾಕೀತು ಮಾಡಿದ್ದಾರೆ.

ಇನ್ನು ಕೃಷ್ಣಾನಗರದ ಕ್ಯಾಂಪ್​ನಲ್ಲಿರುವ ಸಂಬಂಧಿಕರಿಗೆ ವೆಂಕಟೇಶ್ವರ ರಾವ್​​ ಹಣ ವರ್ಗಾವಣೆ ಮಾಡಿಸಿದ್ದರು. ಶ್ರೀನಿವಾಸ ಎನ್ನುವವರು ಎಸ್ಐಟಿ ವಿಚಾರಣೆ ಹೋಗಿದ್ದು, ಹಣ ವಾಪಸ್ ನೀಡೋದಾಗಿ ಹೇಳಿದ್ದರು. ಇದೀಗ ನಿನ್ನೆ ಮತ್ತೊಮ್ಮೆ ಇಡಿ ಅಧಿಕಾರಿಗಳು ಕೃಷ್ಣಾನಗರದ ಕ್ಯಾಂಪ್​ಗೆ ಭೇಟಿ ನೀಡಿ ನೋಟಿಸ್ ನೀಡಿದ್ದಾರೆ. ಹಣ ಹಿಂದಿರುಗಿಸದ ಬಗ್ಗೆ ಕಾರಣ ನೀಡುವಂತೆ ಇಡಿ ಮತ್ತೆ ನೋಟಿಸ್ ನೀಡಿದೆ.

ಇದನ್ನೂ ಓದಿ: ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಸ್ವಪಕ್ಷದವರ ವಿರುದ್ಧವೇ ಹೊಸ ಬಾಂಬ್ ಸಿಡಿಸಿದ ಯತ್ನಾಳ್

ವಾಲ್ಮೀಕಿ ಹಗರಣ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಎಸ್‌ಐಟಿ, ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ ಸೇರಿ 12 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಪ್ರಾಥಮಿಕ ಆರೋಪ ಪಟ್ಟಿ ಸಲ್ಲಿಸಿದೆ.

ಅಕ್ರಮವಾಗಿ ನಿಗಮದ ಹಣ ದೋಚಿದ್ದ ಆರೋಪಿಗಳ ವಿರುದ್ಧ ನಕಲಿ ಖಾತೆಗಳಿಗೆ ಹಣ ವರ್ಗಾವಣೆ, ವಂಚನೆ ಕುರಿತು ಸಾಕ್ಷ್ಯಾಧಾರ, ಸಾಕ್ಷಿಗಳ ಹೇಳಿಕೆ ಮೇರೆಗೆ 3072 ಪುಟಗಳ ಆರೋಪ ಪಟ್ಟಿಯನ್ನು 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಆರೋಪಿಗಳು ನಿಗಮದ ಖಾತೆಯಿಂದ ದೋಚಿದ್ದ ಹಣದ ಪೈಕಿ ನಗದು, ಚಿನ್ನಾಭರಣ ಸೇರಿ 49.96 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಎಸ್‌ಐಟಿ ತಿಳಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:39 am, Tue, 6 August 24

ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!