ವಾಲ್ಮೀಕಿ ನಿಗಮದ ಹಗರಣಕ್ಕೆ ತಿರುವು: ಮತ್ತೊಬ್ಬ ಸಚಿವರ ಹೆಸರು ತಳುಕು

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹು ಕೋಟಿ ರೂ. ಹಗರಣ ಪ್ರಕರಣವನ್ನು ಎಸ್​ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ತನಿಖೆಯಲ್ಲಿ ಸ್ಫೋಟಕ ವಿಚಾರವೊಂದು ಬಯಲಾಗಿದೆ. ಪ್ರಕರಣದ 8ನೇ ಆರೋಪಿ ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ಈ ವಿಚಾರ ಉಲ್ಲೇಖವಾಗಿದೆ.

ವಾಲ್ಮೀಕಿ ನಿಗಮದ ಹಗರಣಕ್ಕೆ ತಿರುವು: ಮತ್ತೊಬ್ಬ ಸಚಿವರ ಹೆಸರು ತಳುಕು
ವಾಲ್ಮೀಕಿ ನಿಗಮ, ಶರಣ ಪ್ರಕಾಶ್​ ಪಾಟೀಲ್​
Follow us
|

Updated on:Jun 08, 2024 | 1:56 PM

ಬೆಂಗಳೂರು, ಜೂನ್​ 08: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Valmiki Scheduled Tribes Development Corporation) ಬಹು ಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ಸ್ಪೋಟಕ ತಿರುವು ಪಡೆದುಕೊಂಡಿದೆ. ಹಗರಣದಲ್ಲಿ ಸಚಿವ ನಾಗೇಂದ್ರ (Minister Nagendra) ಬೆನ್ನಲ್ಲೇ ಮತ್ತೊಬ್ಬ ಸಚಿವರ ಹೆಸರು ತಳುಕು ಹಾಕಿಕೊಂಡಿದೆ. ಅಕ್ರಮದ ಸಾಕ್ಷ್ಯಗಳ ನಾಶಕ್ಕೆ ಸಚಿವ ಡಾ.ಶರಣಪ್ರಕಾಶ್​ ಪಾಟೀಲ್ (Sharan Prakash Patil)​ ಕಚೇರಿಯಲ್ಲೇ ಸಂಚು ನಡೆದಿತ್ತು ಎಂಬ ಅಂಶ ಪ್ರಕರಣದ ಎಂಟನೇ ಆರೋಪಿಯಾಗಿರುವ ನಿಗಮದ ಲೆಕ್ಕಾಧಿಕಾರಿ ಪರಶುರಾಮ್​ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಫಿಡವಿಟ್​ನಲ್ಲಿ ಉಲ್ಲೇಖಿಸಲಾಗಿದೆ. ಬೆಂಗಳೂರಿನ ಮೂರನೇ ಅಪರ ಮುಖ್ಯ ಮೆಟ್ರೋಪಾಲ್ಟೇನ್​ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ 8ನೇ ಆರೋಪಿ ಪರ ವಕೀಲರು ಈ ಅಫಿಡವಿಟ್​​ನ್ನು ಸಲ್ಲಿಸಿದರು.

ವೈದ್ಯಕೀಯ ಶಿಕ್ಷಣ ಸಚಿವರ ಕಚೇರಿಯಲ್ಲಿ ಮೇ 24ರಂದು ಸಭೆ ನಡೆದು, ಅಕ್ರಮದ ಸಾಕ್ಷ್ಯಗಳ ನಾಶ ಕುರಿತು ಚರ್ಚೆಯಾಗಿದೆ. ಮಾ.24ರ ಬೆಳಗ್ಗೆ 10 ರಿಂದ ಮಧ್ಯಾಹ್ನ 3ರವರೆಗಿನ ಕಚೇರಿ ಸಿಸಿಟಿವಿ ಫೂಟೇಜ್​ಗಳನ್ನು ವಶಪಡಿಸಿಕೊಂಡು ಸಂರಕ್ಷಿಸಲು ತನಿಖಾಧಿಕಾರಿಗೆ ನಿರ್ದೇಶಿಸಬೇಕೆಂದು ಕೋರ್ಟ್‌ಗೆ ಎಂಟನೇ ಆರೋಪಿ ಮೊರೆಯಿಟ್ಟಿದ್ದಾರೆ. ಈ ಸಭೆಯಲ್ಲಿ ಸಚಿವರಾದ ಶರಣ ಪ್ರಕಾಶ್ ಪಾಟೀಲ, ಬಿ.ನಾಗೇಂದ್ರ, ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ದಲ್ ಕೂಡ ಭಾಗವಹಿಸಿದ್ದರು ಎಂದು ಹೇಳಲಾಗಿದೆ.

ಇದನ್ನೂ ಓದಿ: ತೀವ್ರ ಸ್ವರೂಪ ಪಡೆದುಕೊಂಡ ವಾಲ್ಮೀಕಿ ನಿಗಮ ಹಗರಣ: ಇಡಿ ಮೊರೆ ಹೋದ ಬಿಜೆಪಿ

ತನಿಖೆ ನಡೆಯುತ್ತಿರುವಾಗ ಅನೇಕ ವಿಚಾರ ಬರುತ್ತದೆ: ಪರಮೇಶ್ವರ್​

ಸಚಿವ ಶರಣಪ್ರಕಾಶ್ ಪಾಟೀಲ್ ಹೆಸರು ತಳುಕು ಹಾಕಿಕೊಂಡಿರುವ ವಿಚಾರವಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್​ ಮಾತನಾಡಿ, ತನಿಖೆ ನಡೆಯುತ್ತಿರುವಾಗ ಅನೇಕ ವಿಚಾರ ಬರುತ್ತದೆ. ಯಾರು ಅಪರಾಧಿ ಸ್ಥಾನದಲ್ಲಿ ಇರುತ್ತಾರೆ ಅವರು ಹೇಳಿಕೆ ನೀಡುತ್ತಾರೆ. ಈ ಬಗ್ಗೆ SIT ತನಿಖೆ ಮಾಡುತ್ತೆ ಎಂದು ಹೇಳಿದರು. ಶರಣಪ್ರಕಾಶ್ ಪಾಟೀಲ್‌ ರಾಜೀನಾಮೆಗೆ ಬಿಜೆಪಿ ಒತ್ತಾಯ ವಿಚಾರವಾಗಿ ಮಾತನಾಡಿದ ಅವರು, ಯಾರು ಏನೇ ಹೇಳಿದರೂ ಅದನ್ನ ಪರಿಶೀಲನೆ ಮಾಡಬೇಕಾಗುತ್ತದೆ. ಅಗತ್ಯವಿದ್ದರೆ ಎಸ್​ಐಟಿ ಅಧಿಕಾರಿಗಳು ಸಹ ವಿಚಾರಣೆ ಮಾಡುತ್ತಾರೆ ಎಂದರು.

ಶರಣಪ್ರಕಾಶ್ ಪಾಟೀಲ್ ಒಬ್ಬ ಅಪ್ಪಟ ಪ್ರಾಮಾಣಿಕ ವ್ಯಕ್ತಿ: ಎಂಬಿ ಪಾಟೀಲ್​

ಸಚಿವ ಶರಣಪ್ರಕಾಶ್ ಪಾಟೀಲ್ ಒಬ್ಬ ಅಪ್ಪಟ ಪ್ರಾಮಾಣಿಕ ವ್ಯಕ್ತಿ. ಈ ಮಾತನ್ನು ಬಹಳ ಗರ್ವದಿಂದ ಹೇಳುತ್ತೇನೆ. ಸಾಕ್ಷ್ಯ ನಾಶ ಮಾಡುವಂತ ಕೆಲಸಕ್ಕೆ ಶರಣಪ್ರಕಾಶ್​ ಹೋಗುವುದಿಲ್ಲ. ದಯವಿಟ್ಟು ಶರಣಪ್ರಕಾಶ್ ಪಾಟೀಲ್ ಹೆಸರನ್ನು ತಳುಕು ಹಾಕಬೇಡಿ. ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಒಬ್ಬ ಫ್ರಾಡ್ ಎಂದು ಎಂ.ಬಿ.ಪಾಟೀಲ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:52 am, Sat, 8 June 24

ತಾಜಾ ಸುದ್ದಿ
ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿ ದರ್ಶನ್​ ಬಗ್ಗೆ ಸುದೀಪ್​ ಮೊದಲ ಮಾತು
ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿ ದರ್ಶನ್​ ಬಗ್ಗೆ ಸುದೀಪ್​ ಮೊದಲ ಮಾತು
ಪವಿತ್ರಾ ಮನೆಯಲ್ಲಿ ಸ್ಥಳ ಮಹಜರು ವೇಳೆ ನಗ್ತಾ ಸಾಗಿದ ಆರೋಪಿ ಪವನ್
ಪವಿತ್ರಾ ಮನೆಯಲ್ಲಿ ಸ್ಥಳ ಮಹಜರು ವೇಳೆ ನಗ್ತಾ ಸಾಗಿದ ಆರೋಪಿ ಪವನ್
ರೇಣುಕಾ ಸ್ವಾಮಿ ಪ್ರಕರಣ: ಕಾರು ಚಾಲಕನ ಕುಟುಂಬದ ಗೋಳು ಕೇಳೋರ್ಯಾರು?
ರೇಣುಕಾ ಸ್ವಾಮಿ ಪ್ರಕರಣ: ಕಾರು ಚಾಲಕನ ಕುಟುಂಬದ ಗೋಳು ಕೇಳೋರ್ಯಾರು?
ಪೆಟ್ರೋಲ್ -ಡೀಸೆಲ್ ದರ ಏರಿಕೆ ವಿರುದ್ಧ ನಾರಿಯರು ಕಿಡಿ
ಪೆಟ್ರೋಲ್ -ಡೀಸೆಲ್ ದರ ಏರಿಕೆ ವಿರುದ್ಧ ನಾರಿಯರು ಕಿಡಿ
ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಕೆ ಆಗಿದ್ದ ಕಾರು ಜಪ್ತಿ; ಇಲ್ಲಿದೆ ವಿಡಿಯೋ..
ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಕೆ ಆಗಿದ್ದ ಕಾರು ಜಪ್ತಿ; ಇಲ್ಲಿದೆ ವಿಡಿಯೋ..
ಬಳ್ಳಾರಿ: ನೋಬಲ್ ಬುಕ್ ಆಫ್ ರೆಕಾರ್ಡ್ಸ್​​​ಗೆ ಸೇರಿದ 4 ತಿಂಗಳ ಮಗು ಸಾಯಿರಾ
ಬಳ್ಳಾರಿ: ನೋಬಲ್ ಬುಕ್ ಆಫ್ ರೆಕಾರ್ಡ್ಸ್​​​ಗೆ ಸೇರಿದ 4 ತಿಂಗಳ ಮಗು ಸಾಯಿರಾ
ಶ್ವಾಸಕೋಶದ ಸಾಮರ್ಥ್ಯ ಹೆಚ್ಚಿಸುವ ಆಸನ ಅರ್ಧ ಚಕ್ರಾಸನ
ಶ್ವಾಸಕೋಶದ ಸಾಮರ್ಥ್ಯ ಹೆಚ್ಚಿಸುವ ಆಸನ ಅರ್ಧ ಚಕ್ರಾಸನ
ಪವಿತ್ರಾ ಗೌಡ ಮನೆಯಲ್ಲಿ ಮಹಜರು; ಹೇಗಿದೆ ಕೊಲೆ ಆರೋಪಿಯ ಬಂಗಲೆ?
ಪವಿತ್ರಾ ಗೌಡ ಮನೆಯಲ್ಲಿ ಮಹಜರು; ಹೇಗಿದೆ ಕೊಲೆ ಆರೋಪಿಯ ಬಂಗಲೆ?
ವಿಡಿಯೋ: ಆದಿಚುಂಚನಗಿರಿಗೆ ಸೆಂಟ್ರಲ್ ಮಿನಿಸ್ಟರ್ ಕುಮಾರಣ್ಣ ಖಡಕ್​ ಎಂಟ್ರಿ
ವಿಡಿಯೋ: ಆದಿಚುಂಚನಗಿರಿಗೆ ಸೆಂಟ್ರಲ್ ಮಿನಿಸ್ಟರ್ ಕುಮಾರಣ್ಣ ಖಡಕ್​ ಎಂಟ್ರಿ
ತೈಲ ​​​ದರ ಏರಿಕೆ: ಕಿವಿಗೆ ಹೂ, ಕೈಯಲ್ಲಿ ಚಿಪ್ಪು ಹಿಡಿದು ಸಿಟಿ ರವಿ ಧರಣಿ
ತೈಲ ​​​ದರ ಏರಿಕೆ: ಕಿವಿಗೆ ಹೂ, ಕೈಯಲ್ಲಿ ಚಿಪ್ಪು ಹಿಡಿದು ಸಿಟಿ ರವಿ ಧರಣಿ