AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಇಬ್ಬರು ಅಧಿಕಾರಿಗಳ ಬಂಧನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್​ ಅವರನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಇಬ್ಬರು ಅಧಿಕಾರಿಗಳ ಬಂಧನ
ವಾಲ್ಮೀಕಿ ಅಭಿವೃದ್ಧಿ ನಿಗಮ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jun 01, 2024 | 4:14 PM

Share

ಬೆಂಗಳೂರು, ಜೂ. 01: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಪ್ರಕರಣಕ್ಕೆ ಸಂಬಂಧ ಇಬ್ಬರು ಅಧಿಕಾರಿಗಳನ್ನು ವಿಶೇಷ ತನಿಖಾ ದಳ (SIT) ಬಂಧಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್​ ಅವರನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ.

ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಎಸ್​ಐಟಿ ಅಧಿಕಾರಿಗಳ ಮುಂದೆ ಸಚಿವರ ಹೆಸರು ಹೇಳಿದರೇ, ಬಿ. ನಾಗೇಂದ್ರ ಅವರು ರಾಜೀನಾಮೆ ನೀಡುವುದು ನಿಶ್ಚಿತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ “ಎಸ್​ಐಟಿ ಮುಂದೆ ನಿಮ್ಮ ಹೆಸರು ಪ್ರಸ್ತಾಪವಾದರೆ ರಾಜೀನಾಮೆ ಪಡೆಯುವುದಾಗಿ” ಹೇಳಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಹೀಗಾಗಿ ಸಚಿವ ನಾಗೇಂದ್ರ ಅವರಿಗೆ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ತಲೆ ನೋವಾಗಿದ್ದಾರೆ. ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಬಿಐಗೆ ವಹಿಸುವ ಸಾಧ್ಯತೆ ಇದೆ ಇದೆ.

ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್​ ಪತನ: ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ

ಏನಿದು ಪ್ರಕರಣ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದೆ. ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್​ನೋಟ್​ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ ನಮೂದಿಸಿದ್ದರು.

ಪ್ರಕರಣದ ತನಿಖೆಯನ್ನು ಎಸ್​ಐಟಿ ನಡೆಸುತ್ತಿದೆ. ಇತ್ತ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು ಸಿಬಿಐ ಪ್ರಾದೇಶಿಕ ಕಚೇರಿಗೆ ದೂರು ನೀಡಿದ್ದಾರೆ.

ರಾಜಿನಾಮೆ ನೀಡುವಂತೆ ಬಿಜೆಪಿ ಒತ್ತಡ

ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ನಾಯಕರು ಸರ್ಕಾರ ಮೇಲೆ ಒತ್ತಡ ಹೇರಿದ್ದರು. ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ಕೆಎಸ್​ ಈಶ್ವರಪ್ಪ ರಾಜಿನಾಮೆ ನೀಡಿದ್ದರು. ಅದೇ ರೀತಿಯ ಘಟನೆ ಈಗ ನಡೆದಿದ್ದು, ಸಚಿವ ಬಿ. ನಾಗೇಂದ್ರ ರಾಜಿನಾಮೆಗೆ ಬಿಜೆಪಿ ಮತ್ತು ಜೆಡಿಎಸ್​ ಆಗ್ರಹಿಸಿದ್ದರು. ಒಂದು ವೇಳೆ ರಾಜಿನಾಮೆ ನೀಡದಿದ್ದರೆ ಜೂನ್​ 6 ರಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡುವುದಾಗಿ ಬಿಜೆಪಿ ಕರೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:59 am, Sat, 1 June 24

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು