Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರಗೆ ನ್ಯಾಯಾಂಗ ಬಂಧನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಆಗಸ್ಟ್ 3 ತನಕ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ. ಬಿ. ನಾಗೇಂದ್ರ ಪರಪ್ಪನ ಅಗ್ರಹಾರ ಸೇರಿದ್ದಾರೆ.

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರಗೆ ನ್ಯಾಯಾಂಗ ಬಂಧನ
ಬಿ ನಾಗೇಂದ್ರ
Follow us
Prajwal Kumar NY
| Updated By: ವಿವೇಕ ಬಿರಾದಾರ

Updated on:Jul 22, 2024 | 12:31 PM

ಬೆಂಗಳೂರು, ಜುಲೈ 22: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ (Valmiki Scheduled Tribes Development Corporation)ದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ (B Nagendra) ಅವರನ್ನು ಆಗಸ್ಟ್ 3 ತನಕ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ. ಹಗರಣದ ಆರೋಪಿ ಸತ್ಯನಾರಾಯಣ ವರ್ಮನನ್ನು ಬಾಡಿವಾರೆಂಟ್​​ ಮೇಲೆ ನಮಗೆ ನೀಡಿ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಹಗರಣ ಸಂಬಂಧ ಸತ್ಯನಾರಾಯಣ ವರ್ಮನನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದು, ಸದ್ಯ ಆರೋಪಿ ಪರಪ್ಪನ ಅಗ್ರಹಾರದಲ್ಲಿದ್ದಾನೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ರವಿವಾರ ಪರಪ್ಪನ ಅಗ್ರಹಾರಕ್ಕೆ ತೆರಳಿ ಸತ್ಯನಾರಾಯಣ ವರ್ಮನನ್ನು ವಿಚಾರಣೆ ನಡೆಸಿದ್ದರು.

ಏನಿದು ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ?

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಸಂಬಂಧಿಸಿದ ಬ್ಯಾಂಕ್ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾಗಿತ್ತು. ಎಂಜಿ ರಸ್ತೆಯ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಹಣ ವರ್ಗಾವಣೆಯಾಗಿತ್ತು. ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿತ್ತು. ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪ್ತ ಎನ್ನಲಾದ ನಾಗರಾಜ್ ನೆಕ್ಕುಂಟಿ, ನಾಗೇಶ್ವರ್ ರಾವ್ ಎಂಬುವವರನ್ನು ಎಸ್‌ಐಟಿ ಬಂಧಿಸಿದೆ.

ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಣ ಹರಿದು ಹಂಚಿದ್ದು, ಭ್ರಷ್ಟ ಕುಳಗಳ ಹೊಟ್ಟೆ ಸೇರಿದ್ದು ಹೇಗೆ? ಇಲ್ಲಿದೆ ವಿವರ

ಹಗರಣ ಸಂಬಂಧ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ (ಜು.10) ಬೆಳ್ಳಂ ಬೆಳಗ್ಗೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್​​ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ್ದರು. ನಿಗಮದ ಹಣ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮದ್ಯ ಖರೀದಿ ಮಾಡಿದ್ದಾರೆ. ಈ ಬಗ್ಗೆ ಬಸನಗೌಡ ದದ್ದಲ್​ ಮತ್ತು ನಾಗೇಂದ್ರ ನಿವಾಸದಲ್ಲಿ ಮಹತ್ವದ ದಾಖಲೆಗಳ ಪತ್ತೆಯಾಗಿವೆ ಎಂದು ಜಾರಿ ನಿರ್ದೇಶನಾಲಯದ ಪ್ರಕಟಣೆ ಮೂಲಕ ತಿಳಿಸಿತ್ತು.

ಈ ಎಲ್ಲ ಅಂಶಗಳನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಗಮನದಲ್ಲಿ ಇಟ್ಟುಕೊಂಡು ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಬಂಧಿಸಿದ್ದರು. ಇದೀಗ  ಬಿ. ನಾಗೇಂದ್ರ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:15 pm, Mon, 22 July 24

ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ