ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮತ್ತೋರ್ವ ಆರೋಪಿಯ ಬಂಧನ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹು ಕೋಟಿ ರೂ. ಹಗರಣ ಪ್ರಕರಣವನ್ನು ಎಸ್​ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಐಟಿ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಬಂಧಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮತ್ತೋರ್ವ ಆರೋಪಿಯ ಬಂಧನ
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ
Follow us
| Updated By: ವಿವೇಕ ಬಿರಾದಾರ

Updated on: Jun 25, 2024 | 7:48 AM

ಬೆಂಗಳೂರು, ಜೂನ್​ 25: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Valmiki Scheduled Tribes Development Corporation) ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧ ಅಧೀಕ್ಷಕ ಚಂದ್ರಕ್ಷೇರ ಆತ್ಮಹತ್ಯೆ ಪ್ರಕರಣದಲ್ಲಿ ಎಸ್ಐಟಿ (SIT) ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಸಾಯಿತೇಜ ಎಂಬುವರ ಹೆಸರು ಚಂದ್ರಶೇಖರ್​ ಡೆತ್​​ನೋಟ್​​​ನಲ್ಲಿ ಇತ್ತು. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ಸಾಯಿತೇಜನನ್ನು ಬಂಧಿಸಿ ತೆಗೆದುಕೊಂಡು, ಬೆಂಗಳೂರಿಗೆ ಕರೆತಂದಿದ್ದಾರೆ.

ಇವರ ಬಳಿ ಹಣಕಾಸು ವರ್ಗಾವಣೆ ಸಂಬಂಧದ ಕೆಲವು ಮಹತ್ವದ ದಾಖಲೆಗಳು ಪತ್ತೆಯಾಗಿವೆ ಎಂಬುವುದು ತಿಳಿಬಂದಿದೆ. ಆತ್ಮಹತ್ಯೆಗೆ ಶರಣಾದ ನಿಗಮದ ಅಧಿಕಾರಿ ಚಂದ್ರಶೇಖರನ್ ಬರೆದಿದ್ದ ಮರಣಪತ್ರದಲ್ಲಿ ಸಾಯಿತೇಜ ಹೆಸರು ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಸಾಯಿತೇಜ ಅವರನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣಕ್ಕೆ ತಿರುವು: ಮತ್ತೊಬ್ಬ ಸಚಿವರ ಹೆಸರು ತಳುಕು

ಸಾಯಿತೇಜ್​​​ನನ್ನು ಎಸ್‌ಐಟಿ ಅಧಿಕಾರಿಗಳು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ. ಸಾಯಿತೇಜ ಈ ಹಿಂದೆ ಬಂಧಿಸಲ್ಪಟ್ಟ ಸತ್ಯನಾರಾಯಣ ವರ್ಮಾ ಸಹಚರನಾಗಿದ್ದು, ಹೈದ್ರಾಬಾದ್​ನ ಕೋ-ಆಪರೇಟಿವ್ ಬ್ಯಾಂಕ್ ವೊಂದರಲ್ಲಿ ನಕಲಿ ಖಾತೆ ತೆರೆಯುವಲ್ಲಿ ಈ ಇಬ್ಬರದ್ದು ಪ್ರಮುಖ ಪಾತ್ರವಿದೆ ಎಂಬ ಆರೋಪ ಕೇಳಿಬಂದಿದೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಸಾಯಿತೇಜ್​ ಬಂಧನದಿಂದ ನಿಗಮದ ಹಣ ಅಕ್ರಮ ವರ್ಗಾವಣೆ ಸಂಬಂಧ ಮಹತ್ವದ ಮಾಹಿತಿಗಳು ಹೊರಬೀಳುವ ಸಾಧ್ಯತೆಯಿದೆ. ತನ್ಮೂಲಕ ಪ್ರಕರಣಕ್ಕೆ ಪ್ರಮುಖ ತಿರುವು ಸಿಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಈಗಾಗಲೇ ಎಸ್‌ಐಟಿ ಅಧಿಕಾರಿಗಳು ನಿಗಮದ ಹಣ ಅಕ್ರಮ ವರ್ಗಾವಣೆ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ, ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ ನೆಕ್ಕುಂಟಿ ನಾಗರಾಜ್ ಸೇರಿದಂತೆ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. 13.92 ಕೋಟಿ ರು. ನಗದು ಹಾಗೂ 272 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ