ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ನಾಗೇಂದ್ರ ಪಿಎ ಹರೀಶ್​ ಬಂಧನ, ಯಾರು ಈತ? ಇಲ್ಲಿದೆ ವಿವರ

|

Updated on: Jul 10, 2024 | 2:22 PM

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಇಂದು ಬೆಳಂಬೆಳಗ್ಗೆ ಮಾಜಿ ಸಚಿವ ಬಿ.ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್​ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದರು. ಇದೀಗ ಹೆಚ್ಚಿನ ವಿಚಾರಣೆಗಾಗಿ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಪಿಎ ಹರೀಶ್‌ನನ್ನು ಬಂಧಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ನಾಗೇಂದ್ರ ಪಿಎ ಹರೀಶ್​ ಬಂಧನ, ಯಾರು ಈತ? ಇಲ್ಲಿದೆ ವಿವರ
ಮಾಜಿ ಸಚಿವ ಬಿ ನಾಗೇಂದ್ರ
Follow us on

ಬೆಂಗಳೂರು, ಜುಲೈ 10: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Valmiki Scheduled Tribes Development Corporation) ಬಹಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ (B Nagendra) ಅವರ ಪಿಎ ಹರೀಶ್‌ನನ್ನು ಬಂಧಿಸಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಇಂದು (ಜು.10) ಬೆಳ್ಳಂ ಬೆಳಗ್ಗೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್​​ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ್ದರು.

ಬೆಂಗಳೂರಿನ ಯಲಹಂಕದಲ್ಲಿರುವ ಬಸನಗೌಡ ದದ್ದಲ್ ನಿವಾಸದ ಮೇಲೆ ದಾಳಿ ನಡೆದಿದ್ದು, ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ಮಾಜಿ ಸಚಿವ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್​ ಶಾಸಕ ನಾಗೇಂದ್ರ ಮನೆ ಮೇಲೂ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಡಾಲರ್ಸ್​ ಕಾಲೋನಿಯಲ್ಲಿರುವ ನಾಗೇಂದ್ರ ಫ್ಲ್ಯಾಟ್​ ಮೇಲೂ ಇ.ಡಿ ಅಧಿಕಾರಿಗಳು ದಾಳಿ ನಡೆಸಿದರು. ಅಧಿಕಾರಿಗಳಿಂದ ಫ್ಲ್ಯಾಟ್​ನಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣಕ್ಕೆ ಹವಾಲಾ ಲಿಂಕ್! ಎಸ್​ಐಟಿ ತನಿಖೆಯಲ್ಲಿ ಬಯಲು

ಪ್ರಕರಣದಲ್ಲಿ ಬಂಧಿತ ಹರೀಶ್ ಪಾತ್ರ ಏನು?

ಬಂಧಿತ ಹರೀಶ್​ ಅವ್ಯವಹಾರದ ವೇಳೆ ಅಧಿಕಾರಿಗಳಿಗೆ ಮೌಖಿಕ ಸೂಚನೆ ನೀಡಿದ್ದನು.  ಸಚಿವರ ಪರವಾಗಿ ಒತ್ತಡ ಹಾಕಿ ಹಣದ ವಹಿವಾಟು ನಡೆಸಿದ್ದಾನೆ. ಹೈದರಾಬಾದ್‌ನ ಆರೋಪಿ ಸತ್ಯನಾರಾಯಣ ವರ್ಮಾನಿಂದ ಬಂದಿದ್ದ ಹಣ ಹರೀಶ್‌ಗೆ ತಲುಪಿತ್ತು. ಪಿಎ ಹರೀಶ್‌ ಏಪ್ರಿಲ್ ತಿಂಗಳಿನ ಎರಡನೇ ವಾರ ಬಿಬಿಎಂಪಿ ಕಚೇರಿಯ ಶ್ರೀನಿಧಿ ಸಾಗರ್ ಹೋಟೆಲ್ ಬಳಿ ಪದ್ಮನಾಭನಿಂದ 25 ಲಕ್ಷ ಹಣ ಪಡೆದಿದ್ದನು.

ಪಿಎ ಹರೀಶ್​ ಮಾಜಿ ಸಚಿವ್​ ನಾಗೇಂದ್ರ ಅವರ ಪರವಾಗಿ ಹವಾಲಾ ಹಣ ಮತ್ತು ಚಿನ್ನದ ಬಿಸ್ಕೆಟ್‌ ಪಡೆದುಕೊಂಡಿದ್ದನು. ಅಲ್ಲದೆ,  50ರಿಂದ 60 ಕೋಟಿ ವ್ಯವಹಾರ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆ ನಡೆಸಲು ಇಡಿ ಅಧಿಕಾರಿಗಳು ಹರೀಶ್‌ನನ್ನು ಬಂಧಿಸಿದ್ದಾರೆ.

ವಾಲ್ಮೀಕಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದಿಂದ ಬೇಸತ್ತು ಅಧೀಕ್ಷಕ ಚಂದ್ರಶೇಖರ್​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ರಾಜ್ಯ ಸರ್ಕಾರಕ್ಕೆ ತಲೆನೋವಾಯಿತು. ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದವು. ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದಂತೆ ಸರ್ಕಾರ ತನಿಖೆಗಾಗಿ ಸರ್ಕಾರ ಎಸ್​ಐಟಿ ರಚಿಸಿದೆ. ಎಸ್​ಐಟಿ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ನಡೆಸುತ್ತಿದೆ. ಅತ್ತ ಸಿಬಿಐ ಕೂಡ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ. ಇದೀಗ ಜಾರಿ ನಿರ್ದೇಶನಾಲಯ ಏಕಾಏಕಿ ಮಾಜಿ ಸಚಿವ ಬಿ ನಾಗೇಂದ್ರ ಮತ್ತು ಬಸನಗೌಡ ದದ್ದಲ್​ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:55 pm, Wed, 10 July 24