AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Express: ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್​​ಪ್ರೆಸ್​​ ರೈಲು ಪ್ರಯೋಗಾರ್ಥ ಸಂಚಾರ ಯಶಸ್ವಿ

ಇಂದು (ಜೂ.19) ಬೆಂಗಳೂರು-ಧಾರವಾಡ ನಡುವೆ ವಂದೇ ಭಾರತ್ ಎಕ್ಸ್​​ಪ್ರೆಸ್​​​ ರೈಲು ಪ್ರಯೋಗಾರ್ಥ ಸಂಚಾರ ಯಶಸ್ವಿಯಾಗಿದೆ. ಬೆಳಿಗ್ಗೆ 5:45ಕ್ಕೆ ಬೆಂಗಳೂರಿನಿಂದ ಹೊರಟ ರೈಲು ಮಧ್ಯಾಹ್ನ 12:40ಕ್ಕೆ ಧಾರವಾಡ ತಲುಪಿದೆ.

Vande Bharat Express: ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್​​ಪ್ರೆಸ್​​ ರೈಲು ಪ್ರಯೋಗಾರ್ಥ ಸಂಚಾರ ಯಶಸ್ವಿ
ಧಾರವಾಡ ತಲುಪಿದ ವಂದೇ ಭಾರತ್​ ಎಕ್ಸಪ್ರೆಸ್​
ವಿವೇಕ ಬಿರಾದಾರ
|

Updated on:Jun 19, 2023 | 2:32 PM

Share

ಧಾರವಾಡ: ಇಂದು (ಜೂ.19) ಬೆಂಗಳೂರು-ಧಾರವಾಡ (Bengaluru-Dharwad) ನಡುವೆ ವಂದೇ ಭಾರತ್ ಎಕ್ಸ್​​ಪ್ರೆಸ್ (Vande Bharat Express)​​ ರೈಲು ಪ್ರಯೋಗಾರ್ಥ ಸಂಚಾರ ಯಶಸ್ವಿಯಾಗಿದೆ. ಬೆಳಿಗ್ಗೆ 5:45ಕ್ಕೆ ಬೆಂಗಳೂರಿನಿಂದ ಹೊರಟ ರೈಲು ಮಧ್ಯಾಹ್ನ 12:40ಕ್ಕೆ ಧಾರವಾಡ ತಲುಪಿದೆ. ಈ ರೈಲು ಅಧಿಕೃತವಾಗಿ ಜೂನ್​ 26ರಿಂದ ಆರಂಭವಾಗಲಿದೆ. ರೈಲು ಧಾರವಾಡಕ್ಕೆ ಬರುತ್ತಿದ್ದಂತೆ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಅಲ್ಲದೇ ವಂದೇ ಭಾರತ್ ಎಕ್ಸ್​​ಪ್ರೆಸ್​​ ರೈಲು ಕಂಡು ಜನರು ಸಂಭ್ರಮಿಸಿದ್ದಾರೆ.

ರೈಲು ಬೆಳಿಗ್ಗೆ 5:45 ಕ್ಕೆ ಬೆಂಗಳೂರು ಬಿಟ್ಟಿತ್ತು. ತಾಂತ್ರಿಕ ತಂಡ ಹಾಗೂ ಅಧಿಕಾರಿಗಳು ರೈಲಿನಲ್ಲಿದ್ದರು. ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದೆ. ಎಲ್ಲ ಬಗೆಯ ಪರೀಕ್ಷೆಗಳು ಯಶಸ್ವಿಯಾಗಿವೆ. ಇತ್ತೀಚಿಗಷ್ಟೇ ಧಾರವಾಡ-ಬೆಂಗಳೂರು ಮಧ್ಯೆ ಎಲೆಕ್ಟ್ರಿಕಲ್ ಲೈನ್ ಎಳೆಯಲಾಗಿತ್ತು. ಇದರ ಪರೀಕ್ಷೆಯನ್ನು ಮಾಡಲಾಗಿದೆ. ಎಲ್ಲವೂ ಯಶಸ್ವಿಯಾಗಿವೆ. ಇದರಿಂದಾಗಿ ನಮ್ಮ ಸಿಬ್ಬಂದಿ ಖುಷಿಯಾಗಿದ್ದಾರೆ ಎಂದು ನೈರುತ್ಯ ರೇಲ್ವೆಯ ಜನರಲ್ ಮ್ಯಾನೇಜರ್ ಸಂಜೀವ್ ಕಿಶೋರ್ ಹೇಳಿದ್ದಾರೆ.

ಇದನ್ನೂ ಓದಿ: Secunderabad To Bengaluru Vande Bharat Express: ಇನ್ನು 7 ಗಂಟೆಗಳಲ್ಲೇ ಸಿಕಂದರಾಬಾದ್ -ಬೆಂಗಳೂರು ಮಧ್ಯೆ ವಂದೇ ಭಾರತ್ ಟ್ರೈನ್ ಸಂಚರಿಸಲಿದೆ!

ಇನ್ನು 40 ನಿಮಿಷ ಬೇಗ ಬಂದ ವಿಚಾರವಾಗಿ ಮಾತನಾಡಿ ಇದು ಪ್ರಾಯೋಗಿಕ ಸಂಚಾರ ಹೀಗಾಗಿ ಸಮಯದಲ್ಲಿ ಹೆಚ್ಚು ಕಡಿಮೆಯಾಗಿದೆ. ಮುಂದೆ ಅಧಿಕೃತವಾಗಿ ಆರಂಭವಾದಾಗ ವೇಳೆಯ ಪಾಲನೆಯಾಗಲಿದೆ. ಒಂದೇ ಬಾರಿ‌ಯ ಸಂಚಾರಕ್ಕೆ ವೇಳೆ ನಿಗದಿಪಡಿಸೋದು ಸಾಧ್ಯವಿಲ್ಲ. ಶೀಘ್ರದಲ್ಲೇ ಅಧಿಕೃತ ವೇಳಾಪಟ್ಟಿ ನೀಡಲಾಗುವುದು ಎಂದರು.

ಜೂನ್ 26ಕ್ಕೆ ಮೋದಿ ಚಾಲನೆ

ಜೂನ್ 26 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಸೂಪರ್-ಫಾಸ್ಟ್ ರೈಲು ಸೇವೆಗೆ ಚಾಲನೆ ನೀಡಲಿದ್ದಾರೆ. ಈ ಮೂಲಕ ಕರ್ನಾಟಕಕ್ಕೆ ಎರಡನೇ ಹಂತದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಪಾದಾರ್ಪಣೆ ಮಾಡಿದಂತಾಗುತ್ತದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಗುರುವಾರ ಚೆನ್ನೈನ ಇಂಟಿಗ್ರೇಟೆಡ್ ಕೋಚ್ ಫ್ಯಾಕ್ಟರಿಯಿಂದ ಬೆಂಗಳೂರಿನ ಕೆಎಸ್‌ಆರ್ ನಿಲ್ದಾಣಕ್ಕೆ ಬಂದಿತ್ತು.

ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಮಂಗಳವಾರ ಹೊರತುಪಡಿಸಿ ಎಲ್ಲ ದಿನಗಳಲ್ಲಿ ಕಾರ್ಯನಿರ್ವಹಿಸಲಿದೆ. ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ರೈಲು ಸೇವೆ ಆರಂಭವಾಗಲಿದ್ದು, ದಾವಣಗೆರೆಯಲ್ಲಿ ಮಾತ್ರ ನಿಲುಗಡೆಯಾಗಲಿದೆ. ವಂದೇ ಭಾರತ್ ರೈಲಿನಲ್ಲಿ ಬೆಂಗಳೂರು-ಧಾರವಾಡ ನಡುವಿನ ಪ್ರಯಾಣದ ಸಮಯವು ಸರಿಸುಮಾರು ಏಳು ಗಂಟೆಗಳು ಎಂದು ಹೇಳಲಾಗಿದೆ. ಇತರ ಸಾಮಾನ್ಯ ರೈಲುಗಳಲ್ಲಿ ಒಂಬತ್ತರಿಂದ ಹತ್ತು ಗಂಟೆಗಳು ತೆಗೆದುಕೊಳ್ಳುತ್ತದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:29 pm, Mon, 19 June 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ