ಇನ್ಮುಂದೆ ಯಾದಗಿರಿಯಲ್ಲೂ ನಿಲ್ಲುತ್ತೆ ವಂದೇ ಭಾರತ್ ರೈಲು: ಇಲ್ಲಿದೆ ಹೊಸ ವೇಳಾಪಟ್ಟಿ

ಬೆಂಗಳೂರು-ಕಲಬುರಗಿ ನಡುವಿನ ನೂತನ ವಂದೇ ಭಾರತ್ ರೈಲು ಯಾದಗಿರಿಯಲ್ಲಿ ನಿಲ್ಲುವುದಿಲ್ಲ ಎಂಬುದಕ್ಕೆ ಜಿಲ್ಲೆಯ ಜನರು ಬೇಸರಗೊಂಡಿದ್ದರು. ಆದರೆ ಇನ್ಮುಂದೆ ಯಾದಗಿರಿ ರೈಲ್ವೆ ನಿಲ್ದಾಣಕ್ಕೂ ವಂದೇ ಭಾರತ್ ರೈಲು ಸ್ಟಾಪ್ ಆಗಲಿದೆ. ಯಾದಗಿರಿ ರೈಲ್ವೆ‌ ನಿಲ್ದಾಣಕ್ಕೆ ಕಲಬುರ್ಗಿಯಿಂದ ಬೆಳಗ್ಗೆ 5:54 ಕ್ಕೆ ರೈಲು ಬರಲಿದೆ. ವಿಚಾರ ತಿಳಿದ ಜಿಲ್ಲೆಯ ಜನರು ಸಂತಸಗೊಂಡಿದ್ದಾರೆ. 

ಇನ್ಮುಂದೆ ಯಾದಗಿರಿಯಲ್ಲೂ ನಿಲ್ಲುತ್ತೆ ವಂದೇ ಭಾರತ್ ರೈಲು: ಇಲ್ಲಿದೆ ಹೊಸ ವೇಳಾಪಟ್ಟಿ
ವಂದೇ ಭಾರತ್ ರೈಲು (ಸಂಗ್ರಹ ಚಿತ್ರ)
Follow us
ಅಮೀನ್​ ಸಾಬ್​
| Updated By: ಗಂಗಾಧರ​ ಬ. ಸಾಬೋಜಿ

Updated on: Apr 05, 2024 | 9:42 PM

ಯಾದಗಿರಿ, ಏಪ್ರಿಲ್​ 05: ಬೆಂಗಳೂರು-ಕಲಬುರಗಿ ನಡುವಿನ ನೂತನ ವಂದೇ ಭಾರತ್ ರೈಲಿಗೆ (Vande Bharat Train) ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಗುಜರಾತ್​​ನ ಅಹಮದಾಬಾದ್​​ನಿಂದಲೇ ವರ್ಚುವಲ್​ ಮೂಲಕ ಚಾಲನೆ ನೀಡಿದ್ದರು. ಈ ಬೆಂಗಳೂರು-ಕಲಬುರಗಿ ನಡುವಿನ ನೂತನ ವಂದೇ ಭಾರತ್ ರೈಲು ಯಾದಗಿರಿಯಲ್ಲಿ ನಿಲ್ಲುವುದಿಲ್ಲ ಎಂಬುದಕ್ಕೆ ಜಿಲ್ಲೆಯ ಜನರು ಬೇಸರಗೊಂಡಿದ್ದರು. ಆದರೆ ಇನ್ಮುಂದೆ ಯಾದಗಿರಿ ರೈಲ್ವೆ ನಿಲ್ದಾಣಕ್ಕೂ ವಂದೇ ಭಾರತ್ ರೈಲು ಸ್ಟಾಪ್ ಆಗಲಿದೆ.

ಕಲಬುರ್ಗಿಯಿಂದ ಬೆಂಗಳೂರಿಗೆ ಹೊರಡಲಿರುವ ನೂತನ ವಂದೇ ಭಾರತ್ ರೈಲು ಕಳೆದ ತಿಂಗಳಷ್ಟೇ ಆರಂಭವಾಗಿತ್ತು. ವಂದೇ ಭಾರತ್ ರೈಲು ನಿಲ್ಲುಗಡೆಗೆ ಆಗ್ರಹಿಸಿ ಕನ್ನಡ ಪರ‌ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗಿತ್ತು.

ಇದನ್ನೂ ಓದಿ: ಕಲಬುರಗಿ, ಮಂಗಳೂರು ಸೇರಿದಂತೆ ದೇಶದ 10 ವಂದೇ ಭಾರತ ರೈಲಿಗೆ ಪ್ರಧಾನಿ ಮೋದಿ ಚಾಲನೆ, ಇಲ್ಲಿದೆ ವೇಳಾಪಟ್ಟಿ

ಪ್ರತಿಭಟನೆಗೆ ಮಣಿದ ರೈಲ್ವೆ ಇಲಾಖೆ ಕೊನೆಗೂ ರೈಲು ನಿಲ್ಲುಗಡೆ ಮಾಡುವುದಾಗಿ ಆದೇಶಿಸಿದ್ದು, ಯಾದಗಿರಿ ರೈಲ್ವೆ‌ ನಿಲ್ದಾಣಕ್ಕೆ ಕಲಬುರ್ಗಿಯಿಂದ ಬೆಳಗ್ಗೆ 5:54 ಕ್ಕೆ ರೈಲು ಬರಲಿದೆ. ವಿಚಾರ ತಿಳಿದ ಜಿಲ್ಲೆಯ ಜನರು ಸಂತಸಗೊಂಡಿದ್ದಾರೆ.

ಕಲಬುರಗಿ-ಬೆಂಗಳೂರು ವಂದೇ ಭಾರತ್​ ರೈಲು

ಬೆಂಗಳೂರು-ಕಲಬುರಗಿ ನಡುವಿನ ನೂತನ ವಂದೇ ಭಾರತ್ ರೈಲು ಸಂಚಾರ ಇತ್ತೀಚೆಗೆ ಆರಂಭವಾಗುವ ಮೂಲಕ ಆ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ಈ ರೈಲು ಕಲಬುರಗಿ ಮತ್ತು ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿರುವ ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಡುವೆ ಸಂಚರಿಸುತ್ತದೆ.

ಇದನ್ನೂ ಓದಿ: Vande Bharat Express: ಮೈಸೂರು ಚೆನ್ನೈ ಮಧ್ಯೆ ಇಂದಿನಿಂದ ಮತ್ತೊಂದು ವಂದೇ ಭಾರತ್ ಎಕ್ಸ್​ಪ್ರೆಸ್

ಕಲಬುರಗಿ-ಎಸ್‌ಎಂವಿ ಬೆಂಗಳೂರು ನಡುವೆ ರೈಲು ಸಂಖ್ಯೆ 22231 ಮತ್ತು ಎಸ್‌ಎಂವಿ ಬೆಂಗಳೂರು-ಕಲಬುರಗಿ ನಡುವೆ ರೈಲು ಸಂಖ್ಯೆ 22232 ಗುರುವಾರ ಹೊರತುಪಡಿಸಿ ವಾರದ ಎಲ್ಲಾ ದಿನಗಳ ಕಾಲ ಸಂಚಾರ ನಡೆಸಲಿದೆ.

ವೇಳಾಪಟ್ಟಿ ಹೀಗಿದೆ

ಪ್ರತಿನಿತ್ಯ ಬೆಳಿಗ್ಗೆ 5.15 ಕ್ಕೆ ಕಲಬುರಗಿಯಿಂದ ಹೊರಟು ಮಧ್ಯಾಹ್ನ 12.45 ಕ್ಕೆ ಬೆಂಗಳೂರು ತಲುಪಲಿದೆ. ಮಧ್ಯಾಹ್ನ 3.15ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 11.30 ಕ್ಕೆ ಕಲಬುರಗಿಗೆ ತಲುಪಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ