ಯಾದಗಿರಿ, ಏಪ್ರಿಲ್ 05: ಬೆಂಗಳೂರು-ಕಲಬುರಗಿ ನಡುವಿನ ನೂತನ ವಂದೇ ಭಾರತ್ ರೈಲಿಗೆ (Vande Bharat Train) ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಗುಜರಾತ್ನ ಅಹಮದಾಬಾದ್ನಿಂದಲೇ ವರ್ಚುವಲ್ ಮೂಲಕ ಚಾಲನೆ ನೀಡಿದ್ದರು. ಈ ಬೆಂಗಳೂರು-ಕಲಬುರಗಿ ನಡುವಿನ ನೂತನ ವಂದೇ ಭಾರತ್ ರೈಲು ಯಾದಗಿರಿಯಲ್ಲಿ ನಿಲ್ಲುವುದಿಲ್ಲ ಎಂಬುದಕ್ಕೆ ಜಿಲ್ಲೆಯ ಜನರು ಬೇಸರಗೊಂಡಿದ್ದರು. ಆದರೆ ಇನ್ಮುಂದೆ ಯಾದಗಿರಿ ರೈಲ್ವೆ ನಿಲ್ದಾಣಕ್ಕೂ ವಂದೇ ಭಾರತ್ ರೈಲು ಸ್ಟಾಪ್ ಆಗಲಿದೆ.
ಕಲಬುರ್ಗಿಯಿಂದ ಬೆಂಗಳೂರಿಗೆ ಹೊರಡಲಿರುವ ನೂತನ ವಂದೇ ಭಾರತ್ ರೈಲು ಕಳೆದ ತಿಂಗಳಷ್ಟೇ ಆರಂಭವಾಗಿತ್ತು. ವಂದೇ ಭಾರತ್ ರೈಲು ನಿಲ್ಲುಗಡೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗಿತ್ತು.
ಇದನ್ನೂ ಓದಿ: ಕಲಬುರಗಿ, ಮಂಗಳೂರು ಸೇರಿದಂತೆ ದೇಶದ 10 ವಂದೇ ಭಾರತ ರೈಲಿಗೆ ಪ್ರಧಾನಿ ಮೋದಿ ಚಾಲನೆ, ಇಲ್ಲಿದೆ ವೇಳಾಪಟ್ಟಿ
ಪ್ರತಿಭಟನೆಗೆ ಮಣಿದ ರೈಲ್ವೆ ಇಲಾಖೆ ಕೊನೆಗೂ ರೈಲು ನಿಲ್ಲುಗಡೆ ಮಾಡುವುದಾಗಿ ಆದೇಶಿಸಿದ್ದು, ಯಾದಗಿರಿ ರೈಲ್ವೆ ನಿಲ್ದಾಣಕ್ಕೆ ಕಲಬುರ್ಗಿಯಿಂದ ಬೆಳಗ್ಗೆ 5:54 ಕ್ಕೆ ರೈಲು ಬರಲಿದೆ. ವಿಚಾರ ತಿಳಿದ ಜಿಲ್ಲೆಯ ಜನರು ಸಂತಸಗೊಂಡಿದ್ದಾರೆ.
ಬೆಂಗಳೂರು-ಕಲಬುರಗಿ ನಡುವಿನ ನೂತನ ವಂದೇ ಭಾರತ್ ರೈಲು ಸಂಚಾರ ಇತ್ತೀಚೆಗೆ ಆರಂಭವಾಗುವ ಮೂಲಕ ಆ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ಈ ರೈಲು ಕಲಬುರಗಿ ಮತ್ತು ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿರುವ ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಡುವೆ ಸಂಚರಿಸುತ್ತದೆ.
ಇದನ್ನೂ ಓದಿ: Vande Bharat Express: ಮೈಸೂರು ಚೆನ್ನೈ ಮಧ್ಯೆ ಇಂದಿನಿಂದ ಮತ್ತೊಂದು ವಂದೇ ಭಾರತ್ ಎಕ್ಸ್ಪ್ರೆಸ್
ಕಲಬುರಗಿ-ಎಸ್‌ಎಂವಿ ಬೆಂಗಳೂರು ನಡುವೆ ರೈಲು ಸಂಖ್ಯೆ 22231 ಮತ್ತು ಎಸ್‌ಎಂವಿ ಬೆಂಗಳೂರು-ಕಲಬುರಗಿ ನಡುವೆ ರೈಲು ಸಂಖ್ಯೆ 22232 ಗುರುವಾರ ಹೊರತುಪಡಿಸಿ ವಾರದ ಎಲ್ಲಾ ದಿನಗಳ ಕಾಲ ಸಂಚಾರ ನಡೆಸಲಿದೆ.
ಪ್ರತಿನಿತ್ಯ ಬೆಳಿಗ್ಗೆ 5.15 ಕ್ಕೆ ಕಲಬುರಗಿಯಿಂದ ಹೊರಟು ಮಧ್ಯಾಹ್ನ 12.45 ಕ್ಕೆ ಬೆಂಗಳೂರು ತಲುಪಲಿದೆ. ಮಧ್ಯಾಹ್ನ 3.15ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 11.30 ಕ್ಕೆ ಕಲಬುರಗಿಗೆ ತಲುಪಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.