AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMCRI Recruitment 2026: ವೈದ್ಯಕೀಯ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣವಕಾಶ

ವೈದ್ಯಕೀಯ ಕ್ಷೇತ್ರದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ. ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಶುಶ್ರೂಷಾಧಿಕಾರಿ (Nursing Officer) ಹುದ್ದೆಗಳ ನೇಮಕಾತಿಗಾಗಿ BMCRI ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಗುತ್ತಿಗೆ ಆಧಾರದ ಈ ಹುದ್ದೆಗಳಿಗೆ ಆಸಕ್ತರು ಜುಲೈ 22ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಜುಲೈ 29 ರಂದು ದಾಖಲೆಗಳ ಪರಿಶೀಲನೆ ಮತ್ತು ನೇರ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ವಿವರಗಳಿಗಾಗಿ bmcribengaluru.karnataka.gov.in ಭೇಟಿ ನೀಡಿ.

BMCRI Recruitment 2026: ವೈದ್ಯಕೀಯ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣವಕಾಶ
ಶುಶ್ರೂಷಾಧಿಕಾರಿ ಹುದ್ದೆಗಳ ಭರ್ತಿImage Credit source: bmcribengaluru.karnataka.gov.in
ಅಕ್ಷತಾ ವರ್ಕಾಡಿ
|

Updated on:Jul 14, 2026 | 3:21 PM

Share

ಮುಖ್ಯಾಂಶಗಳು

  • ವೈದ್ಯಕೀಯ ಕ್ಷೇತ್ರದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ.
  • ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಶುಶ್ರೂಷಾಧಿಕಾರಿ ಹುದ್ದೆಗಳ ನೇಮಕಾತಿ
  • ಗುತ್ತಿಗೆ ಆಧಾರದ ಈ ಹುದ್ದೆಗಳಿಗೆ ಆಸಕ್ತರು ಜುಲೈ 22ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ

ವೈದ್ಯಕೀಯ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣವಕಾಶವೊಂದು ಇಲ್ಲಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ (BMCRI) ಅಧೀನ ಆಸ್ಪತ್ರೆಯಾದ ಪ್ರಸಿದ್ಧ ವಾಣಿ ವಿಲಾಸ ಆಸ್ಪತ್ರೆಗೆ ಗುತ್ತಿಗೆ ಆಧಾರದ ಮೇಲೆ ಶುಶ್ರೂಷಾಧಿಕಾರಿ (Nursing Officer) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಈ ನೇಮಕಾತಿಯ ಅಧಿಸೂಚನೆ ಸಂಖ್ಯೆ BMCRI/ROCB/01/2026-27 ಆಗಿದೆ.

ಪ್ರಮುಖ ದಿನಾಂಕಗಳು ಮತ್ತು ವೇಳಾಪಟ್ಟಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಿಗದಿಪಡಿಸಿದ ವೇಳಾಪಟ್ಟಿಯ ಪ್ರಕಾರವೇ ಪ್ರಕ್ರಿಯೆಗಳಲ್ಲಿ ಭಾಗವಹಿಸಬೇಕಾಗುತ್ತದೆ. ಈ ನೇಮಕಾತಿಯ ಅಧಿಕೃತ ಅಧಿಸೂಚನೆಯು 2026 ರ ಜುಲೈ 03 ರಂದು ಪ್ರಕಟವಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಯು ಜುಲೈ 08 ರಿಂದ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನಾಂಕವಾಗಿದೆ. ಇನ್ನು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜುಲೈ 29 ರಂದು ದಾಖಲೆಗಳ ಪರಿಶೀಲನೆ ಹಾಗೂ ನೇರ ಸಂದರ್ಶನ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಅಭ್ಯರ್ಥಿಗಳು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಅಧಿಕೃತ ವೆಬ್‌ಸೈಟ್ ಆದ bmcribengaluru.karnataka.gov.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ವೆಬ್‌ಸೈಟ್‌ನಲ್ಲಿ ನೀಡಲಾದ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅದರಲ್ಲಿ ಕೇಳಲಾಗಿರುವ ಅಗತ್ಯ ವಿದ್ಯಾರ್ಹತೆ, ವಯೋಮಿತಿ ಮತ್ತು ಇತರ ನಿಯಮಗಳನ್ನು ಪರಿಶೀಲಿಸಿದ ನಂತರವೇ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಕೊನೆಯ ದಿನದವರೆಗೂ ಕಾಯದೆ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಉತ್ತಮ.

ಇದನ್ನೂ ಓದಿ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು!

ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ ನಡೆಯುವ ಸ್ಥಳ:

ಆನ್‌ಲೈನ್‌ನಲ್ಲಿ ಯಶಸ್ವಿಯಾಗಿ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ (Document Verification) ಮತ್ತು ಸಂದರ್ಶನ ಪ್ರಕ್ರಿಯೆಯು 29 ಜುಲೈ 2026 ರಂದು ನಡೆಯಲಿದೆ. ಅಭ್ಯರ್ಥಿಗಳು ತಮ್ಮ ಎಲ್ಲಾ ಅಗತ್ಯ ಮೂಲ ದಾಖಲೆಗಳೊಂದಿಗೆ “ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ, ನಿರ್ದೇಶಕರ ಕಚೇರಿ, ಡೀನ್ ಅವರ ಸಭಾಂಗಣ” ಕ್ಕೆ ಹಾಜರಾಗಬೇಕಾಗುತ್ತದೆ.

ಸಂಪರ್ಕ ಮಾಹಿತಿ ಮತ್ತು ಹೆಚ್ಚಿನ ವಿವರಗಳು:

ಈ ನೇಮಕಾತಿಗೆ ಸಂಬಂಧಿಸಿದ ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಂದೇಹಗಳಿದ್ದಲ್ಲಿ ಅಭ್ಯರ್ಥಿಗಳು ಬಿಎಂಸಿಆರ್‌ಐ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಅಥವಾ ಅವರ ಕಚೇರಿ ಸಂಪರ್ಕ ಸಂಖ್ಯೆ 080-2670 0810 ಅನ್ನು ಸಂಪರ್ಕಿಸಬಹುದಾಗಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಆಗುವ ಯಾವುದೇ ತಿದ್ದುಪಡಿಗಳು ಅಥವಾ ಹೊಸ ಅಪ್‌ಡೇಟ್‌ಗಳಿಗಾಗಿ ಅಭ್ಯರ್ಥಿಗಳು ನಿಯಮಿತವಾಗಿ ಅಧಿಕೃತ ವೆಬ್‌ಸೈಟ್ ಅನ್ನು ಪರಿಶೀಲಿಸುತ್ತಿರಲು ಸೂಚಿಸಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:20 pm, Tue, 14 July 26

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?