
ವೈದ್ಯಕೀಯ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣವಕಾಶವೊಂದು ಇಲ್ಲಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ (BMCRI) ಅಧೀನ ಆಸ್ಪತ್ರೆಯಾದ ಪ್ರಸಿದ್ಧ ವಾಣಿ ವಿಲಾಸ ಆಸ್ಪತ್ರೆಗೆ ಗುತ್ತಿಗೆ ಆಧಾರದ ಮೇಲೆ ಶುಶ್ರೂಷಾಧಿಕಾರಿ (Nursing Officer) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಈ ನೇಮಕಾತಿಯ ಅಧಿಸೂಚನೆ ಸಂಖ್ಯೆ BMCRI/ROCB/01/2026-27 ಆಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಿಗದಿಪಡಿಸಿದ ವೇಳಾಪಟ್ಟಿಯ ಪ್ರಕಾರವೇ ಪ್ರಕ್ರಿಯೆಗಳಲ್ಲಿ ಭಾಗವಹಿಸಬೇಕಾಗುತ್ತದೆ. ಈ ನೇಮಕಾತಿಯ ಅಧಿಕೃತ ಅಧಿಸೂಚನೆಯು 2026 ರ ಜುಲೈ 03 ರಂದು ಪ್ರಕಟವಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಯು ಜುಲೈ 08 ರಿಂದ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನಾಂಕವಾಗಿದೆ. ಇನ್ನು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜುಲೈ 29 ರಂದು ದಾಖಲೆಗಳ ಪರಿಶೀಲನೆ ಹಾಗೂ ನೇರ ಸಂದರ್ಶನ ನಡೆಯಲಿದೆ.
ಅರ್ಹ ಅಭ್ಯರ್ಥಿಗಳು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಅಧಿಕೃತ ವೆಬ್‌ಸೈಟ್ ಆದ bmcribengaluru.karnataka.gov.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ವೆಬ್‌ಸೈಟ್‌ನಲ್ಲಿ ನೀಡಲಾದ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅದರಲ್ಲಿ ಕೇಳಲಾಗಿರುವ ಅಗತ್ಯ ವಿದ್ಯಾರ್ಹತೆ, ವಯೋಮಿತಿ ಮತ್ತು ಇತರ ನಿಯಮಗಳನ್ನು ಪರಿಶೀಲಿಸಿದ ನಂತರವೇ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಕೊನೆಯ ದಿನದವರೆಗೂ ಕಾಯದೆ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಉತ್ತಮ.
ಇದನ್ನೂ ಓದಿ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು!
ಆನ್‌ಲೈನ್‌ನಲ್ಲಿ ಯಶಸ್ವಿಯಾಗಿ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ (Document Verification) ಮತ್ತು ಸಂದರ್ಶನ ಪ್ರಕ್ರಿಯೆಯು 29 ಜುಲೈ 2026 ರಂದು ನಡೆಯಲಿದೆ. ಅಭ್ಯರ್ಥಿಗಳು ತಮ್ಮ ಎಲ್ಲಾ ಅಗತ್ಯ ಮೂಲ ದಾಖಲೆಗಳೊಂದಿಗೆ “ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ, ನಿರ್ದೇಶಕರ ಕಚೇರಿ, ಡೀನ್ ಅವರ ಸಭಾಂಗಣ” ಕ್ಕೆ ಹಾಜರಾಗಬೇಕಾಗುತ್ತದೆ.
ಈ ನೇಮಕಾತಿಗೆ ಸಂಬಂಧಿಸಿದ ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಂದೇಹಗಳಿದ್ದಲ್ಲಿ ಅಭ್ಯರ್ಥಿಗಳು ಬಿಎಂಸಿಆರ್‌ಐ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಅಥವಾ ಅವರ ಕಚೇರಿ ಸಂಪರ್ಕ ಸಂಖ್ಯೆ 080-2670 0810 ಅನ್ನು ಸಂಪರ್ಕಿಸಬಹುದಾಗಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಆಗುವ ಯಾವುದೇ ತಿದ್ದುಪಡಿಗಳು ಅಥವಾ ಹೊಸ ಅಪ್‌ಡೇಟ್‌ಗಳಿಗಾಗಿ ಅಭ್ಯರ್ಥಿಗಳು ನಿಯಮಿತವಾಗಿ ಅಧಿಕೃತ ವೆಬ್‌ಸೈಟ್ ಅನ್ನು ಪರಿಶೀಲಿಸುತ್ತಿರಲು ಸೂಚಿಸಲಾಗಿದೆ.
ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:20 pm, Tue, 14 July 26