ಉಪ ಚುನಾವಣೆಗೆ ವಾಟಾಳ್​​ ನಾಗರಾಜ್ ಸಿದ್ಧ, ಎಲ್ಲಿಂದ ಗೊತ್ತಾ?

ಮೈಸೂರು: ಡಿಸೆಂಬರ್​ 5ರಂದು ರಾಜ್ಯದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ವಾಟಾಳ್ ನಾಗರಾಜ್ ಅವರಿಗೆ ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರಂತೆ. ನಿಮ್ಮಂತಹವರು ವಿಧಾನಸಭೆಯಲ್ಲಿ ಇರಬೇಕು, ಸ್ಪರ್ಧೆ ಮಾಡಿ ಎಂದು ಕನ್ನಡಪರ ಹೋರಾಟಗಾರರೊಬ್ಬರು ವಾಟಾಳ್ ನಾಗರಾಜ್ ಅವರನ್ನು ಉಪಚುನಾವಣೆಗೆ ಸ್ಪರ್ಧಿಸಲು ಒತ್ತಾಯ ಮಾಡಿದ್ದಾರಂತೆ. ಆದರೆ ಈಗ ರಾಜಕೀಯ ಹೊಲಸು ವ್ಯಾಪಾರವಾಗಿದೆ. ನಾಮಪತ್ರ ಸಲ್ಲಿಕೆಯ ಕೊನೇ ದಿನದವರೆಗೂ ಚಿಂತನೆ ಮಾಡಿ, ಕೊನೇ ದಿನ ಬೇಕಾದರೆ ನಾನು ನಾಮಪತ್ರ ಸಲ್ಲಿಸುತ್ತೇನೆ ಎಂದು ಮೈಸೂರಿನಲ್ಲಿ […]

ಉಪ ಚುನಾವಣೆಗೆ ವಾಟಾಳ್​​ ನಾಗರಾಜ್ ಸಿದ್ಧ, ಎಲ್ಲಿಂದ ಗೊತ್ತಾ?
ಸಾಧು ಶ್ರೀನಾಥ್​

Updated on: Nov 11, 2019 | 3:50 PM

ಮೈಸೂರು: ಡಿಸೆಂಬರ್​ 5ರಂದು ರಾಜ್ಯದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ವಾಟಾಳ್ ನಾಗರಾಜ್ ಅವರಿಗೆ ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರಂತೆ.

ನಿಮ್ಮಂತಹವರು ವಿಧಾನಸಭೆಯಲ್ಲಿ ಇರಬೇಕು, ಸ್ಪರ್ಧೆ ಮಾಡಿ ಎಂದು ಕನ್ನಡಪರ ಹೋರಾಟಗಾರರೊಬ್ಬರು ವಾಟಾಳ್ ನಾಗರಾಜ್ ಅವರನ್ನು ಉಪಚುನಾವಣೆಗೆ ಸ್ಪರ್ಧಿಸಲು ಒತ್ತಾಯ ಮಾಡಿದ್ದಾರಂತೆ. ಆದರೆ ಈಗ ರಾಜಕೀಯ ಹೊಲಸು ವ್ಯಾಪಾರವಾಗಿದೆ. ನಾಮಪತ್ರ ಸಲ್ಲಿಕೆಯ ಕೊನೇ ದಿನದವರೆಗೂ ಚಿಂತನೆ ಮಾಡಿ, ಕೊನೇ ದಿನ ಬೇಕಾದರೆ ನಾನು ನಾಮಪತ್ರ ಸಲ್ಲಿಸುತ್ತೇನೆ ಎಂದು ಮೈಸೂರಿನಲ್ಲಿ ವಾಟಾಳ್ ನಾಗರಾಜ್ ಹೇಳಿದ್ದಾರೆ.

Published On - 3:24 pm, Mon, 11 November 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us