ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದ್ವೇಷಿ. ಸರ್ಕಾರದ ಅನುದಾನ ಮದುವೆ, ಪ್ರೇಮ ವಿವಾಹಕ್ಕಲ್ಲ. ಕನ್ನಡ ರಾಜ್ಯೋತ್ಸವ ಆಚರಿಸಲು ಅನುದಾನ ಕೊಡ್ತಾರೆ. ಸಿಎಂ ಬಿಎಸ್‌ವೈ ಅನುದಾನ ಕೊಡಿ ಅಂದ್ರೆ ಕೊಡಲಿಲ್ಲ. ಬಿಎಸ್‌ವೈ ಸರ್ಕಾರದಿಂದ ಅನುದಾನ ತೆಗೆದುಕೊಂಡಿಲ್ಲ. ಆದರೆ, ಅವರು ಅನುದಾನ ಕೊಟ್ಟಿಲ್ಲವೆಂದು ಆಚರಣೆ ನಿಲ್ಲಿಸಿಲ್ಲ ಎಂದು ಕನ್ನಡ ಸಂಘಟನೆಗಳಿಗೆ ಸರ್ಕಾರ ಅನುದಾನ ನೀಡದ ವಿಚಾರವಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದರು.
ಕೊವಿಡ್ ವಿಚಾರದಲ್ಲಿ ಕೋಟಿ ಕೋಟಿ ಹಣ ನುಂಗಿದ್ದಾರೆ. ಬಂದ್‌ಗೂ ಅನುದಾನಕ್ಕೂ ಯಾವುದೇ ಸಂಬಂಧವಿಲ್ಲ. ನಾನು ನೀಚ ಕೆಲಸ ಮಾಡೋದಿಲ್ಲ ನಾವು ಬಂದ್‌ನಿಂದ ಹಿಂದೆ ಸರಿಯುವಂತೆ ಮಾಡುತ್ತಿದ್ದಾರೆ. ಸಿಎಂ ಯಡಿಯೂರಪ್ಪಗೆ ನೀಚ ಬುದ್ಧಿ ಇದೆ ಎಂದು ವಾಟಾಳ್ ನಾಗರಾಜ್ ಹೇಳಿದರು.
ಆದರೆ, ಯಾರು ಏನೇ ಅಪಪ್ರಚಾರ ಮಾಡಿದ್ರೂ ಹಿಂದೆ ಸರಿಯಲ್ಲ. ನಾವು ಬಂದ್‌ನಿಂದ ಹಿಂದೆ ಸರಿಯುವುದಿಲ್ಲ ಎಂದು ವಾಟಾಳ್ ನಾಗರಾಜ್ ಹೇಳಿದರು.