AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀರಶೈವ ಮಹಾಸಭಾ ಸಭೆಯಲ್ಲಿ 5 ನಿರ್ಣಯ, ಜಾತಿಗಣತಿ ವರದಿ ಒಪ್ಪದಿರಲು ತೀರ್ಮಾನ

ಭಾರತ ವೀರಶೈವ ಮಹಾಸಭಾ ಮುಖಂಡರ ಸಭೆ ನಡೆದಿದ್ದು, ಈ ಸಭೆಯಲ್ಲಿ ಕಾಂಗ್ರೆಸ್ ಸರ್ಕಾರದ ಜಾತಿಗಣತಿ ವರದಿಯನ್ನು ಒಪ್ಪದಿರಲು ತೀರ್ಮಾನ ಕೈಗೊಳ್ಳಲಾಗಿದೆ. ಇದರ ಜೊತೆಗೆ ಸಭೆಯಲ್ಲಿ ಐದು ಪ್ರಮುಖ ನಿರ್ಣಯಗಳನ್ನು ಕೈಗೊಂಡಿದೆ. ಹಾಗಾದ್ರೆ, ಸಭೆಯಲ್ಲಿ ಕೈಗೊಂಡ ಆ ಐದು ನಿರ್ಣಯಗಳಾವುವು ಎನ್ನುವ ವಿವರ ಇಲ್ಲಿದೆ.

ವೀರಶೈವ ಮಹಾಸಭಾ ಸಭೆಯಲ್ಲಿ 5 ನಿರ್ಣಯ, ಜಾತಿಗಣತಿ ವರದಿ ಒಪ್ಪದಿರಲು ತೀರ್ಮಾನ
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ|

Updated on:Oct 22, 2024 | 9:43 PM

Share

ಬೆಂಗಳೂರು, ಅಕ್ಟೋಬರ್ 22): ವೀರಶೈವ ಲಿಂಗಾಯತ ಮಹಾಸಭಾ (Veerashaiva Lingayat Mahasabha) ಮುಖಂಡರ ಸಭೆ ಅಂತವಾಗಿದೆ. ಬೆಂಗಳೂರಿನಲ್ಲಿಂದು ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (Shamanuru Shivashankarappa) ನೇತೃತ್ವದ ನಡೆದ ಸಭೆಯಲ್ಲಿ ಪ್ರಮುಖ ಐದು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಇದರ ಜೊತೆ ಸಿದ್ದರಾಮಯ್ಯ ಸರ್ಕಾರ ಜಾರಿ ಮಾಡಲು ಹೊರಟಿರುವ ಜಾತಿಗಣತಿ ವರದಿಯನ್ನು ಒಪ್ಪದಿರಲು ಸಭೆ ತೀರ್ಮಾನಿಸಿದೆ. ಜಾತಿ ಗಣತಿ ವರದಿ ಅವೈಜ್ಞಾನಿಕವಾಗಿ ನಡೆದಿದೆ ಎಂದು ಪ್ರತಿಪಾದಿಸಿ, ಮತ್ತೊಮ್ಮೆ ವೈಜ್ಞಾನಕ್ಕಾಗಿ ಸಮೀಕ್ಷೆ ನಡೆಸಬೇಕೆಂದು ಒತ್ತಾಯ ಮಾಡಲು ತೀರ್ಮಾನಿಸಿದೆ.

ಸಭೆಯ ಐದು ನಿರ್ಣಯಗಳು ಹೀಗಿವೆ

  1.  ಲಿಂಗಾಯತ ಸಮುದಾಯ ಜಾತಿಗಣತಿಯ ವಿರೋಧಿಗಳಲ್ಲ ಆದರೆ ಕಳೆದ 10 ವರ್ಷಗಳ ಹಿಂದೆ ನಡೆಸಲಾದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯು ಹಲವು ವೈರುದ್ಯ ಮತ್ತು ಲೋಪಗಳಿಂದ ಕೂಡಿದ್ದು. ಇದನ್ನು ಸರಿಪಡಿಸುವ ಅಗತ್ಯವಿದೆ. ಹೀಗಾಗಿ ಹೊಸದಾಗಿ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕೆಂದು ಮಹಾಸಭೆ ಆಗ್ರಹಿಸುತ್ತದೆ.
  2.  ರಾಜ್ಯ ಸರ್ಕಾರದ ಪರಿಗಣನೆಯಲ್ಲಿರುವ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸ್ಸುಗಳು, ಶ್ರೀ ಕಾಂತರಾಜು ಅಧ್ಯಕ್ಷತೆಯಲ್ಲಿ ನಡೆಸಿದ ಸಮೀಕ್ಷಾ ವರದಿಯಾಗಿದ್ದು, ಈ ವರದಿಯು ಅವೈಜ್ಞಾನಿಕ ಮತ್ತು ಅಸಂವಿಧಾನಿಕವಾದುದ್ದರಿಂದ ಸ್ವೀಕಾರಕ್ಕೆ ಅರ್ಹವಲ್ಲವೆಂದು ಮಹಾಸಭೆಯು ಸ್ಪಷ್ಟವಾಗಿ ಅಭಿಪ್ರಾಯಿಸುತ್ತದೆ. ಆದ್ದರಿಂದ ಮಾನ್ಯ ಮುಖ್ಯಮಂತ್ರಿಗಳು ಈ ಕುರಿತಾದ ಯಾವುದೇ ಉದ್ದೇಶಿತ ಪ್ರಕ್ರಿಯೆಯನ್ನು ಕೈಬಿಡಬೇಕೆಂದು ಮಹಾಸಭೆಯು ಆಗ್ರಹಿಸುತ್ತದೆ.
  3.  ರಾಜ್ಯ ಹಿಂದುಳಿದ ವರ್ಗಗಳ (ಓ.ಬಿ.ಸಿ) ಪಟ್ಟಿಯಲ್ಲಿ ವಿವಿಧ ವರ್ಗಗಳ ಅಡಿಯಲ್ಲಿ ಹಲವಾರು ಲಿಂಗಾಯತ ಉಪಪಂಗಡಗಳ ಹೆಸರಿನ ಜೊತೆಯಲ್ಲಿ “ಲಿಂಗಾಯತ” ಪದವಿಲ್ಲದೇ ಕೇವಲ ಉಪಪಂಗಡಗಳ ಹೆಸರನ್ನು ಮಾತ್ರ ನಮೂದಿಸಲಾಗಿರುತ್ತದೆ. ಆದುದರಿಂದ ಉಚ್ಚ ಹಾಗೂ ಸರ್ವೋಚ್ಚ ನ್ಯಾಯಾಲಯ ಸಿವಿಲ್ ಅಪೀಲ್ ನಂ. 7241/2021 ಪ್ರಕರಣದಲ್ಲಿ ನೀಡಿರುವ ತೀರ್ಪನ್ನು ಆಧಾರವಾಗಿರಿಸಿಕೊಂಡು, ಎಲ್ಲಾ ಲಿಂಗಾಯತ ಉಪಪಂಗಡಗಳ ಜೊತೆಯಲ್ಲಿ “ಲಿಂಗಾಯತ” ಎಂದು ನಮೂದಿಸಿದ ಆಯ್ಕೆಯನ್ನು ಈಗಿರುವ ಪಟ್ಟಿಯಲ್ಲಿ, ಉಪಪಂಗಡಗಳಿರುವ ವರ್ಗಗಳನ್ನು ಬದಲಾಯಿಸದೇ ಸರ್ಕಾರದ ಆದೇಶಕ್ಕೆ ಸೂಕ್ತ ತಿದ್ದುಪಡಿ ತರಲು ರಾಜ್ಯ ಸರ್ಕಾರಕ್ಕೆ ಮಹಾಸಭಾ ಮನವಿ ಮಾಡುತ್ತದೆ.
  4. ವೀರಶೈವ-ಲಿಂಗಾಯತ ಎಲ್ಲಾ ಉಪಪಂಗಡಗಳನ್ನು ಕೇಂದ್ರ ಹಿಂದುಳಿದ ವರ್ಗಗಳ (ಓ.ಬಿ.ಸಿ) ಪಟ್ಟಿಯಲ್ಲಿ ಸೇರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮಾನ್ಯ ಮುಖ್ಯಮಂತ್ರಿಗಳು ಶಿಫಾರಸ್ಸು ಮಾಡಬೇಕೆಂದು ಮಹಾಸಭೆಯು ಮನವಿ ಮಾಡುತ್ತದೆ.
  5.  ಸಾಮಾಜಿಕ ಅಸಮಾನತೆಯ ನಿರಾಕರಣೆ ಮತ್ತು ಸಾಮಾಜಿಕ ನ್ಯಾಯ ಕುರಿತಾದ ಸರ್ಕಾರದ ಎಲ್ಲಾ ಸೈದ್ಧಾಂತಿಕ, ಆಡಳಿತಾತ್ಮಕ ಮತ್ತು ಕಾನೂನಾತ್ಮಕ ಪ್ರಕ್ರಿಯೆಗಳಲ್ಲಿ ವೀರಶೈವ ಲಿಂಗಾಯತ ಸಮುದಾಯ ಮುಂಚೂಣಿಯಲ್ಲಿ ನಿಂತು ಬೆಂಬಲಿಸುತ್ತದೆ ಎಂದು ನಮ್ಮ ಸಮುದಾಯದ ಪರವಾಗಿ ಮಹಾಸಭೆಯ ಅಧ್ಯಕ್ಷನಾಗಿ ನಾನು ತುಂಬು ಹೃದಯದಿಂದ ಆಶ್ವಾಸನೆಯನ್ನು ನೀಡುತ್ತೇನೆ

Published On - 9:36 pm, Tue, 22 October 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!