ಚಾಮರಾಜನಗರ: ಯಡಿಯೂರಪ್ಪ ವಿರುದ್ಧ ಯತ್ನಾಳ್ ಟೀಕೆಗೆ ವೀರಶೈವ ಮಹಾಸಭಾ ಖಂಡನೆ
ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವುದನ್ನು ನಿಲ್ಲಿಸುವಂತೆ ಆಗ್ರಹಿಸಿದ ವೀರಶೈವರು, ಯತ್ನಾಳ್ ವಿರುದ್ಧ ಘೋಷಣೆ ಕೂಗಿದ್ದಾರೆ. ಜೊತೆಗೆ ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ ಎಂದು ಯುವಕರು ಘೋಷಣೆ ಕೂಗಿದ್ದಾರೆ.
ಚಾಮರಾಜನಗರ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪದೇಪದೇ ಟೀಕೆ ಮಾಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಿಲ್ಲಾ ವೀರಶೈವ ಮಹಾಸಭಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಚಾಮರಾಜನಗರದ ವಿರಕ್ತ ಮಠದ ಮುಂಭಾಗ ವೀರಶೈವ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಯಡಿಯೂರಪ್ಪ ಕೂಡ ಲಿಂಗಾಯಿತ, ಯತ್ನಾಳ್ ಕೂಡ ಲಿಂಗಾಯಿತ. ಆದರೆ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವುದು ಸರಿಯಾದ ಕ್ರಮವಲ್ಲ ಎಂದು ವೀರಶೈವರು ಗೋಮುಖ ವ್ಯಾಘ್ರ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವುದನ್ನು ನಿಲ್ಲಿಸುವಂತೆ ಆಗ್ರಹಿಸಿದ ವೀರಶೈವರು, ಯತ್ನಾಳ್ ವಿರುದ್ಧ ಘೋಷಣೆ ಕೂಗಿದ್ದಾರೆ. ಜೊತೆಗೆ ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ ಎಂದು ಯುವಕರು ಘೋಷಣೆ ಕೂಗಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಪ್ರವಾಸಿ ಮಂದಿರಕ್ಕೆ ತೆರಳಿದ ಯತ್ನಾಳ್, ಸದ್ಯ ಪೊಲೀಸ್ ಸರ್ಪಗಾವಲಿನಲ್ಲಿ ಪ್ರವಾಸಿ ಮಂದಿರದಲ್ಲಿ ತಂಗಿದ್ದಾರೆ.
ಸತ್ಯ ಒಂದಲ್ಲ ಒಂದು ದಿನ ಬೆಳಕಿಗೆ ಬರುತ್ತದೆ; ಯತ್ನಾಳ್ ಬಿಜೆಪಿಯ ಕೆಲವರು ವಿಜಯೇಂದ್ರ ಮೊಣಕಾಲಿಗೆ ನಮಸ್ಕಾರ ಮಾಡುತ್ತಾರೆ. ಸಿಎಂ ಮಗನ ಮುಂದೆ ಕೈ ಚಾಚಿ ನಿಲ್ಲುತ್ತಾರೆ. ವಿಜಯೇಂದ್ರ ಗ್ರಾಮ ಪಂಚಾಯಿತಿ ಸದಸ್ಯ ಸಹ ಆಗಿಲ್ಲ. ಅಷ್ಟೊಂದು ಕೆಳಮಟ್ಟದಲ್ಲಿ ಕೆಲವರು ಇದ್ದಾರೆ. ಮೊನ್ನೆ ಉಸ್ತುವಾರಿ ಅರುಣ್ ಸಿಂಗ್ ಮಾಡಿದ್ದ ನಾಟಕ ನೋಡಿ, ದೆಹಲಿಯಲ್ಲೇ ನಾಯಕತ್ವ ಬದಲಾವಣೆ ಇಲ್ಲ ಎಂದಿದ್ದರು. ಈ ರೀತಿ ಅಲ್ಲೇ ಹೇಳಿದ ಮೇಲೆ ಇಲ್ಲಿಗೆ ಏಕೆ ಬಂದರು? ಎಂದು ಪ್ರಶ್ನಸಿದ ಯತ್ನಾಳ್ ಸತ್ಯ ಒಂದಲ್ಲ ಒಂದು ದಿನ ಬೆಳಕಿಗೆ ಬರುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ
ಮೇಕೆದಾಟು ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ
(Veerashaiva mahasabha condemned Yathnal on alleging on CM BS Yediyurappa)
Published On - 12:28 pm, Tue, 6 July 21