AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ವಿಸರ್ಜನೆ ಮೆರವಣಿಗೆ, ಹಲವೆಡೆ ಕೆಟ್ಟು ನಿಂತ ವಾಹನಗಳು: ಬೆಂಗಳೂರಿನ ಕೆಲವೆಡೆ ನಿಧಾನಗತಿಯ ಸಂಚಾರ

ಬೆಂಗಳೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಜೊತೆಗೆ ವರ್ತೂರು, ಗೊರಗುಂಟೆ ಪಾಳ್ಯ, ಎಲೆಕ್ಟ್ರಾನಿಕ್ ಸಿಟಿಯ ಹೊಸ ರಸ್ತೆ ಜಂಕ್ಷನ್‌ ಸೇರಿದಂತೆ ಹಲವೆಡೆ ವಾಹನ ಕೆಟ್ಟು ನಿಂತಿರುವುದರಿಂದ ಆಯಾ ಪ್ರದೇಶಗಳಲ್ಲಿ ನಿಧಾನಗತಿಯ ಸಂಚಾರವಿರುತ್ತದೆ ಎಂದು ಬೆಂಗಳೂರು ಸಂಚಾರ ಪೊಲೀಸ್​, ಸಂಚಾರ ಸಲಹೆ ನೀಡಿದ್ದಾರೆ.

ಗಣೇಶ ವಿಸರ್ಜನೆ ಮೆರವಣಿಗೆ, ಹಲವೆಡೆ ಕೆಟ್ಟು ನಿಂತ ವಾಹನಗಳು: ಬೆಂಗಳೂರಿನ ಕೆಲವೆಡೆ ನಿಧಾನಗತಿಯ ಸಂಚಾರ
ಗಣೇಶ ವಿಸರ್ಜನೆ ಮೆರವಣಿಗೆ, ಹಲವೆಡೆ ಕೆಟ್ಟು ನಿಂತ ವಾಹನಗಳು: ಬೆಂಗಳೂರಿನಲ್ಲಿ ನಿಧಾನಗತಿಯ ಸಂಚಾರ
ಗಂಗಾಧರ​ ಬ. ಸಾಬೋಜಿ
|

Updated on:Sep 17, 2024 | 10:04 PM

Share

ಬೆಂಗಳೂರು, ಸೆಪ್ಟೆಂಬರ್​ 17: 11ನೇ ದಿನದ ಗಣೇಶ ವಿಸರ್ಜನೆ ಕಾರ್ಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಮಾಡಲಾಗುತ್ತಿದೆ. ಹೀಗಾಗಿ ನಗರದ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ನಿಧಾನಗತಿ ಇರಲಿದ್ದು, ದಯಮಾಡಿ ಸಹಕರಿಸುವಂತೆ ಬೆಂಗಳೂರು ಸಂಚಾರ ಪೊಲೀಸ್ (Bengaluru Traffic Police)​ ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಬೆಂಗಳೂರು ಸಂಚಾರ ಪೊಲೀಸ್, ನಗರದಲ್ಲಿ ವರ್ತೂರಿನಲ್ಲಿ ನಡೆಯುತ್ತಿರುವ ಗಣೇಶ ವಿಸರ್ಜನೆ ಮೆರವಣಿಗೆ ಹಿನ್ನೆಲೆ ನಿಧಾನಗತಿಯ ಸಂಚಾರವಿರಲಿದೆ ಎಂದು ಸಂಚಾರ ಸಲಹೆ ನೀಡಿದ್ದಾರೆ.

ಬೆಂಗಳೂರು ಸಂಚಾರ ಪೊಲೀಸ್ ಟ್ವೀಟ್​

ಗೊರಗುಂಟೆ ಪಾಳ್ಯದಲ್ಲಿ ವಾಹನ ಕೆಟ್ಟು ನಿಂತಿರುವುದರಿಂದ ತುಮಕೂರು ರಸ್ತೆ ಹಾಗೂ ಕೈಕೊಂಡನಹಳ್ಳಿಯಲ್ಲಿ ಬಳಿ ಕೂಡ ವಾಹನ ಕೆಟ್ಟು ನಿಂತಿರುವುದರಿಂದ ಇಬ್ಲೂರು, ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ ದಯವಿಟ್ಟು ಸಹಕರಿಸುವಂತೆ ಮನವಿ ಮಾಡಲಾಗಿದೆ.

ಅದೇ ರೀತಿಯಾಗಿ ಎಲೆಕ್ಟ್ರಾನಿಕ್ ಸಿಟಿಯ, ಹೊಸ ರಸ್ತೆ ಜಂಕ್ಷನ್‌ನಲ್ಲಿ ಕೂಡ ವಾಹನ ಕೆಟ್ಟು ನಿಂತಿರುವುದರಿಂದ ನಗರದ, ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ. ಇಟ್ಟಮಡು ಬಳಿ ಒಆರ್‌ಆರ್‌ನಲ್ಲಿ ಕೂಡ ವಾಹನ ಕೆಟ್ಟು ನಿಂತಿರುವುದರಿಂದ ಕತ್ರಿಗುಪ್ಪೆ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:00 pm, Tue, 17 September 24