AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನಿಗೆ ಚಿಕಿತ್ಸೆ ನೀಡಿ, ಮಾಹಿತಿ ನೀಡದಿದ್ದಕ್ಕೆ ವೇಣು ಹೆಲ್ತ್ ಕೇರ್ ಸೆಂಟರ್ ಲೈಸೆನ್ಸ್ ರದ್ದು

ಬೆಂಗಳೂರು: ಕೊರೊನಾ ಸೋಂಕಿರುವ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದು, ಸರ್ಕಾರಕ್ಕೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ ನಗರದ ವೇಣು ಹೆಲ್ತ್ ಕೇರ್ ಸೆಂಟರ್ ಪರವಾನಗಿ ರದ್ದು ಮಾಡಲಾಗಿದೆ. ಬೆಂಗಳೂರಿನ ಹೊಂಗಸಂದ್ರದಲ್ಲಿರುವ ವೇಣು ಹೆಲ್ತ್ ಕೇರ್​ಗೆ ಏಪ್ರಿಲ್ 18ರಂದು ಉಸಿರಾಟ ಸಮಸ್ಯೆಯಿಂದ 419ನೇ ಸೋಂಕಿತ ವ್ಯಕ್ತಿ ಹೋಗಿದ್ದನು. 419ನೇ ಸೋಂಕಿತನಿಗೆ ಹೆಲ್ತ್‌ ಕೇರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆತನಿಗೆ ಕೊರೊನಾ ಲಕ್ಷಣಗಳು ಇದ್ದರೂ ಕ್ಲಿನಿಕ್ ಸಿಬ್ಬಂದಿ ಹಾಗೂ ವೈದ್ಯ ಯಾರು ಕೂಡ ಈ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿಲ್ಲ. ಸರ್ಕಾರಕ್ಕೆ ಮಾಹಿತಿ […]

ಸೋಂಕಿತನಿಗೆ ಚಿಕಿತ್ಸೆ ನೀಡಿ, ಮಾಹಿತಿ ನೀಡದಿದ್ದಕ್ಕೆ ವೇಣು ಹೆಲ್ತ್ ಕೇರ್ ಸೆಂಟರ್ ಲೈಸೆನ್ಸ್ ರದ್ದು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 23, 2020 | 8:23 AM

Share

ಬೆಂಗಳೂರು: ಕೊರೊನಾ ಸೋಂಕಿರುವ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದು, ಸರ್ಕಾರಕ್ಕೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ ನಗರದ ವೇಣು ಹೆಲ್ತ್ ಕೇರ್ ಸೆಂಟರ್ ಪರವಾನಗಿ ರದ್ದು ಮಾಡಲಾಗಿದೆ. ಬೆಂಗಳೂರಿನ ಹೊಂಗಸಂದ್ರದಲ್ಲಿರುವ ವೇಣು ಹೆಲ್ತ್ ಕೇರ್​ಗೆ ಏಪ್ರಿಲ್ 18ರಂದು ಉಸಿರಾಟ ಸಮಸ್ಯೆಯಿಂದ 419ನೇ ಸೋಂಕಿತ ವ್ಯಕ್ತಿ ಹೋಗಿದ್ದನು.

419ನೇ ಸೋಂಕಿತನಿಗೆ ಹೆಲ್ತ್‌ ಕೇರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆತನಿಗೆ ಕೊರೊನಾ ಲಕ್ಷಣಗಳು ಇದ್ದರೂ ಕ್ಲಿನಿಕ್ ಸಿಬ್ಬಂದಿ ಹಾಗೂ ವೈದ್ಯ ಯಾರು ಕೂಡ ಈ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿಲ್ಲ.

ಸರ್ಕಾರಕ್ಕೆ ಮಾಹಿತಿ ನೀಡದೆ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್ ಶಿವಮೂರ್ತಿ ವೇಣು ಹೆಲ್ತ್ ಕೇರ್ ಲೈಸೆನ್ಸ್ ರದ್ದು ಮಾಡಿ ಆದೇಶಿಸಿದ್ದಾರೆ. ಸದ್ಯ ಮೂವರು ನರ್ಸ್‌ಗಳಿಗೆ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ವ್ಯಕ್ತಿ ಜತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 21 ಜನ, ದ್ವಿತೀಯ ಸಂಪರ್ಕ ಹೊಂದಿದ್ದ 23 ಜನ ಕ್ವಾರಂಟೈನ್‌ಗೆ ಶಿಫ್ಟ್ ಮಾಡಲಾಗಿದೆ. https://www.facebook.com/Tv9Kannada/videos/551390629124622/

Published On - 8:21 am, Thu, 23 April 20

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್