AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SL Bhyrappa: ಪದ್ಮಭೂಷಣ, ಹಿರಿಯ ಸಾಹಿತಿ ಎಸ್​​​ಎಲ್ ಭೈರಪ್ಪ ನಿಧನ

SL Bhyrappa Passes Away: ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು(ಸೆಪ್ಟೆಂಬರ್ 24) ಕೊನೆಯುಸಿರೆಳೆದಿದ್ದಾರೆ. ಡಾ|| ಎಸ್.ಎಲ್. ಭೈರಪ್ಪ ಕರ್ನಾಟಕದಲ್ಲಿ ಮಾತ್ರವಲ್ಲದೆ ಭಾರತಾದ್ಯಂತ ಸಾಹಿತ್ಯಾಸಕ್ತರಿಗೆ ಚಿರಪರಿಚಿತ ಹೆಸರು. ಕನ್ನಡ ಕಾದಂಬರಿ ಸಾಹಿತ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುತ್ತಿರುವ ಕೀರ್ತಿ ಇವರಿಗೆ ಸಲ್ಲುತ್ತದೆ.

SL Bhyrappa: ಪದ್ಮಭೂಷಣ, ಹಿರಿಯ ಸಾಹಿತಿ ಎಸ್​​​ಎಲ್ ಭೈರಪ್ಪ ನಿಧನ
S. L. Bhyrappa
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Sep 24, 2025 | 3:37 PM

Share

ಬೆಂಗಳೂರು, (ಸೆಪ್ಟೆಂಬರ್ 24): ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ (SL Bhyrappa )ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು(ಸೆಪ್ಟೆಂಬರ್ 24) ಕೊನೆಯುಸಿರೆಳೆದಿದ್ದಾರೆ.  ವಯೋಸಹಜ ಕಾಯಿಲೆ ಬಳಲುತ್ತಿದ್ದ ಬೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು. 94 ವರ್ಷದ ಹಿರಿಯ ಸಾಹಿತಿ ಎಸ್​ ಎಲ್​ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು,

ಭೈರಪ್ಪ ಅವರು ಪರ್ವ, ಆವರಣ, ಗೃಹಭಂಗ ಸೇರಿದಂತೆ ಅನೇಕ ಕಾದಂಬರಿಗಳನ್ನು ಬರೆದಿದ್ದಾರೆ. ಭೈರಪ್ಪ ಅವರು ಹಾಸನ ಜಿಲ್ಲೆಯ ಸಂತೇಶಿವಾರ ಗ್ರಾಮದವರು. ತಮ್ಮ ಸ್ವಗ್ರಾಮದ ಕೆರೆಗಳಿಗೆ ನೀರು ತುಂಬಿಸಲು ಕೂಡ ಶ್ರಮಿಸಿದ್ದರು. ಬಾಲ್ಯದಲ್ಲಿ ಕಷ್ಟದಲ್ಲೇ ಬೆಳೆದು ವಿದ್ಯಾಭ್ಯಾಸ ಮಾಡಿದ್ದರು. . ಭೈರಪ್ಪ ಅವರಿಗೆ ಜ್ಞಾನಪೀಠ ಪ್ರಶಸ್ತಿ ನೀಡಬೇಕೆಂದು ಅವರ ಓದುಗ ಅಭಿಮಾನಿಗಳು ಒತ್ತಾಯಿಸುತ್ತಿದ್ದರು. ಆದ್ರೆ, ಜ್ಞಾನಪೀಠ ಪ್ರಶಸ್ತಿಗೆ ಪರ್ಯಾಯವಾದ ಸರಸ್ವತಿ ಸಮ್ಮಾನ್ ಪ್ರಶಸ್ತಿ ಭೈರಪ್ಪ ಅವರಿಗೆ ಬಂದಿತ್ತು.

ಎಸ್​​ಎಲ್ ಭೈರಪ್ಪ ಹೃದಯಾಘಾತದಿಂದ ನಿಧನ

Sl Bhyrappa Death

Sl Bhyrappa Death

ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್​ಎಲ್ ಭೈರಪ್ಪ ಅವರು ಇಂದು (ಸೆಪ್ಟೆಂಬರ್ 24)  ಮಧ್ಹಾಹ್ನ 2.38ಕ್ಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಆಸ್ಪತ್ರೆ ಅಧಿಕೃತವಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

ಭೈರಪ್ಪ ಅವರ ಕಾದಂಬರಿಗಳು

ಭೀಮಕಾಯ(1952), ಬೆಳಕು ಮೂಡಿತು(1959), ಧರ್ಮಶ್ರೀ – (1961), ದೂರ ಸರಿದರು(1967), ಮತದಾನ (1965), ವಂಶವೃಕ್ಷ(1965), ಜಲಪಾತ (1967), ನಾಯಿ ನೆರಳು (1968), ತಬ್ಬಲಿಯು ನೀನಾದೆ ಮಗನೆ(1968), ಗೃಹಭಂಗ(1970), ನಿರಾಕರಣ-(1971), ಗ್ರಹಣ-(1972), ದಾಟು (1973), ಅನ್ವೇಷಣ(1976), ಪರ್ವ(1979), ನೆಲೆ (1983), ಸಾಕ್ಷಿ (1986) ಅಂಚು-(1990), ತಂತು (1993), ಸಾರ್ಥ(1998), ಮಂದ್ರ(2001), ಆವರಣ(2007), ಕವಲು (2010), ಯಾನ (2014) ಉತ್ತರಕಾಂಡ-(2017).

ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಎಂಬುದು ಎಸ್‌.ಎಲ್. ಬೈರಪ್ಪ ಅವರ ಪೂರ್ಣ ಹೆಸರು. ಭೈರಪ್ಪ ಅವರು ಕಾದಂಬರಿಗಳಲ್ಲದೆ ಸೌಂದರ್ಯಮೀಮಾಂಸೆ, ತತ್ವಶಾಸ್ತ್ರದ ಕುರಿತು ಅನೇಕ ಗ್ರಂಥಗಳನ್ನು ರಚಿಸಿದ್ದಾರೆ. ಪ್ರಮುಖ ಕೃತಿಗಳೆಂದರೇ, ವಂಶವೃಕ್ಷ, ದಾಟು, ತಂತು, ಅಂಚು, ಪರ್ವ, ಗೃಹಭಂಗ, ಅನ್ವೇಷಣ, ಮಂದ್ರ, ಸಾರ್ಥ, ನಾಯಿನೆರಳು, ಧರ್ಮಶ್ರೀ, ದೂರಸರಿದರು, ಮತದಾನ ಮುಂತಾದವು ಅವರ ಕಾದಂಬರಿಗಳಾಗಿವೆ. ಬೈರಪ್ಪ ಅವರಿಗೆ ಬಂದ ಪದವಿಗಳು ಮತ್ತು ಪ್ರಶಸ್ತಿಗಳು ಅಂದರೇ, ಭೈರಪ್ಪ ಅವರಿಗೆ 2010ರಲ್ಲಿ ಸರಸ್ವತಿ ಸಮ್ಮಾನ್, 2015ರಲ್ಲಿ ಸಾಹಿತ್ಯ ಅಕಾಡೆಮಿ ಫೆಲೋಶಿಪ್, 2016ರಲ್ಲಿ ಪದ್ಮಶ್ರೀ, ಮತ್ತು 2023ರಲ್ಲಿ ಪದ್ಮಭೂಷಣ ಪ್ರಶಸ್ತಿಗಳು ಲಭಿಸಿವೆ. ವಿಶೇಷತೆ ಅಂದರೆ, ಭೈರಪ್ಪನವರ ಕಾದಂಬರಿಗಳು ವೈವಿಧ್ಯಮಯ ವಿಷಯಗಳನ್ನು ಒಳಗೊಂಡಿದ್ದು, ಅನೇಕ ಸಾರ್ವಜನಿಕ ಚರ್ಚೆಗಳಿಗೆ ಕಾರಣವಾಗಿವೆ.

Published On - 2:57 pm, Wed, 24 September 25

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ