ರಾಮಮಂದಿರ ನಿಧಿ ಸಂಗ್ರಹ ಅಭಿಯಾನಕ್ಕೆ ಟೀಕೆ: ಎಚ್.ಡಿ.ಕುಮಾರಸ್ವಾಮಿ ಟ್ವೀಟ್ಗೆ ವಿಎಚ್ಪಿ ಖಂಡನೆ
ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡುವ ಮೊದಲು ಮಾಜಿ ಮುಖ್ಯಮಂತ್ರಿ ವಾಸ್ತವ ಸಂಗತಿಗಳನ್ನು ಅರ್ಥ ಮಾಡಿಕೊಳ್ಳಬೇಕಿತ್ತು ಎಂದು ವಿಎಚ್ಪಿ ಹೇಳಿದೆ.
ಬೆಂಗಳೂರು: ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೇಜವಾಬ್ದಾರಿ ಟ್ವೀಟ್ ಮಾಡಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ನ (VHP) ಸಂಘಟನಾ ಕಾರ್ಯದರ್ಶಿ ಬಸವರಾಜ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಿಸಲು ವಿಎಚ್ಪಿ ಸೇರಿದಂತೆ ಹಲವು ಸಂಘಟನೆಗಳು ಸಮಾಜದ ಎಲ್ಲ ವರ್ಗಗಳಿಂದಲೂ ದೇಣಿಗೆ ಸಂಗ್ರಹಿಸುತ್ತಿವೆ. ಜನರನ್ನು ಸಂಪರ್ಕಿಸುವ ಸ್ವಯಂಸೇವಕರು ಹಣ ನೀಡಲೇಬೇಕೆಂದು ಯಾರನ್ನೂ ಒತ್ತಾಯಿಸುತ್ತಿಲ್ಲ. ರಾಮಮಂದಿರ ನಿರ್ಮಾಣದಲ್ಲಿ ಇಡೀ ದೇಶ ಪಾಲ್ಗೊಳ್ಳಬೇಕೆಂಬ ಉದ್ದೇಶದಿಂದ ಈ ಕಾರ್ಯ ನಡೆಯುತ್ತಿದೆ ಎಂದು ಹೇಳಿದ್ದಾರೆ.
ರಾಮನು ಭಾರತದ ಅಸ್ಮಿತೆಯಾಗಿದ್ದಾನೆ. ರಾಮನನ್ನು ಬದುಕಿನ ಆದರ್ಶವಾಗಿ ಜನರು ಭಾವಿಸುತ್ತಾರೆ. ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡುವ ಮೊದಲು ಮಾಜಿ ಮುಖ್ಯಮಂತ್ರಿ ವಾಸ್ತವ ಸಂಗತಿಗಳನ್ನು ಅರ್ಥ ಮಾಡಿಕೊಳ್ಳಬೇಕಿತ್ತು ಎಂದು ತಿಳಿಸಿದ್ದಾರೆ.
ರಾಜ್ಯದ ಅತ್ಯುನ್ನತ ಹುದ್ದೆ ನಿರ್ವಹಿಸಿದ್ದ ವ್ಯಕ್ತಿಯಿಂದ ಹೊರಬಂದಿರುವ ಈ ಆಧಾರರಹಿತ ಆರೋಪವನ್ನು ವಿಎಚ್ಪಿ ಗಂಭೀರವಾಗಿ ಪರಿಗಣಿಸಿದೆ. ದೇಶಭಕ್ತ ಸಂಘಟನೆ ಎನಿಸಿರುವ ಆರ್ಎಸ್ಎಸ್ ಬಗ್ಗೆಯೂ ಕುಮಾರಸ್ವಾಮಿ ಹಗುವಾಗಿ ಮಾತನಾಡಿರುವುದನ್ನು ವಿಎಚ್ಪಿ ಖಂಡಿಸುತ್ತದೆ. ಮಾಜಿ ಮುಖ್ಯಮಂತ್ರಿಯೊಬ್ಬರು ಸಾರ್ವಜನಿಕ ಸಂವಾದದ ಘನತೆಯನ್ನು ಕುಗ್ಗಿಸಿರುವುದು ವಿಷಾದದ ಸಂಗತಿಯಾಗಿದೆ ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಟ್ವೀಟ್
It appears that those collecting donations for the construction of Ram Mandir have been separately marking the houses of those who paid money and those who did not. This is similar to what Nazis did in Germany during the regime of Hitler when lakhs of people lost their lives..
— H D Kumaraswamy (@hd_kumaraswamy) February 15, 2021
‘ದೇಣಿಗೆ ನೀಡದವರ ಮನೆಗಳ ಮಾರ್ಕಿಂಗ್’
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ದೇಣಿಗೆ ಸಂಗ್ರಹಿಸಲಾಗಿದ್ದು, ದೇಣಿಗೆ ನೀಡದವರನ್ನು ಆರ್ಎಸ್ಎಸ್ ಪ್ರತ್ಯೇಕವಾಗಿ ಗುರುತಿಸುತ್ತಿದೆ (Marking). ದೇಣಿಗೆ ನೀಡದವರ ಮನೆಗೆ ಪ್ರತ್ಯೇಕವಾಗಿ ಗುರುತು ಹಾಕುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ ಕಿಡಿಕಾರಿದ್ದರು.
ಜರ್ಮನಿಯಲ್ಲಿ ನಾಜಿಗಳು ಅನುಸರಿಸಿದ ನಡೆಯನ್ನೇ ಆರ್ಎಸ್ಎಸ್ ಅನುಸರಿಸುತ್ತಿದೆ. ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರಕ್ಕೆ ದೇಣಿಗೆ ನೀಡಿದ ಮತ್ತು ನೀಡದವರ ಮನೆಗಳನ್ನು ಪ್ರತ್ಯೇಕವಾಗಿ ಗುರುತು ಹಾಕುತ್ತಿದೆ ಎಂದು ಆರೋಪಿಸಿದ್ದರು.
ಇನ್ನಷ್ಟು..
ವಿವಾದಿತ ರಾಮ ಮಂದಿರಕ್ಕೆ ದೇಣಿಗೆ ಕೊಡುವುದಿಲ್ಲ: ಸಿದ್ದರಾಮಯ್ಯ!
ಹಿಟ್ಲರ್ನ ನಾಜಿ ಪಡೆಯಂತೆಯೇ RSS ಕ್ರೂರವಾಗಿ ವರ್ತಿಸುತ್ತಿದೆ: ಎಚ್ ಡಿ ಕುಮಾರಸ್ವಾಮಿ
Published On - 6:31 pm, Tue, 16 February 21