ಟೀಕೆಗಳ ನಡುವೆಯೇ ಲಕ್ಷ್ಮೀ ಹೆಬ್ಬಾಳ್ಕರ್​​ಗೆ ರಾಮ ಮಂದಿರ ಉದ್ಘಾಟನೆ ಆಮಂತ್ರಣ ನೀಡಿದ ವಿಹೆಚ್​ಪಿ

ರಾಮ ಮಂದಿರ ಉದ್ಘಾಟನೆಯ ‘ಅಕ್ಷತಾ ಅಭಿಯಾನ’ದ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಪ್ರಮುಖರು ಹೆಬ್ಬಾಳ್ಕರ್ ಅವರ ಮನೆಗೆ ತೆರಳಿ, ಕಾರ್ಯಕ್ರಮಕ್ಕೆ ಆಮಂತ್ರಣ ನೀಡಿದ್ದಾರೆ. ಪ್ರತಿಪಕ್ಷಗಳ ನಾಯಕರಿಗೆ ರಾಮ ಮಂದಿರ ಉದ್ಘಾಟನೆಯ ಆಮಂತ್ರಣ ನೀಡಲಾಗುತ್ತಿಲ್ಲ ಎಂಬ ಕಾಂಗ್ರೆಸ್ ನಾಯಕರ ಆರೋಪಗಳ ಮಧ್ಯೆಯೇ ಈ ಬೆಳವಣಿಗೆ ನಡೆದಿದೆ.

ಟೀಕೆಗಳ ನಡುವೆಯೇ ಲಕ್ಷ್ಮೀ ಹೆಬ್ಬಾಳ್ಕರ್​​ಗೆ ರಾಮ ಮಂದಿರ ಉದ್ಘಾಟನೆ ಆಮಂತ್ರಣ ನೀಡಿದ ವಿಹೆಚ್​ಪಿ
ಲಕ್ಷ್ಮೀ ಹೆಬ್ಬಾಳ್ಕರ್​​ಗೆ ರಾಮ ಮಂದಿರ ಉದ್ಘಾಟನೆ ಆಮಂತ್ರಣ ನೀಡಿದ ವಿಹೆಚ್​ಪಿ
Follow us
ಪ್ರಸನ್ನ ಗಾಂವ್ಕರ್​
| Updated By: Ganapathi Sharma

Updated on: Jan 04, 2024 | 12:27 PM

ಬೆಂಗಳೂರು, ಜನವರಿ 4: ವಿಶ್ವ ಹಿಂದೂ ಪರಿಷತ್​ನ (VHP) ಪ್ರಮುಖರು ಗುರುವಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಅವರನ್ನು ಭೇಟಿಯಾಗಿ ಅಯೋಧ್ಯೆಯ ರಾಮ ಮಂದಿರ (Ayodhya Ram Mandir) ಉದ್ಘಾಟನೆ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ ನೀಡಿದರು. ಪ್ರತಿಪಕ್ಷಗಳ ನಾಯಕರಿಗೆ ರಾಮ ಮಂದಿರ ಉದ್ಘಾಟನೆಯ ಆಮಂತ್ರಣ ನೀಡಲಾಗುತ್ತಿಲ್ಲ ಎಂಬ ಕಾಂಗ್ರೆಸ್ ನಾಯಕರ ಆರೋಪಗಳ ಮಧ್ಯೆಯೇ ಈ ಬೆಳವಣಿಗೆ ನಡೆದಿದೆ. ರಾಮ ಮಂದಿರ ಉದ್ಘಾಟನೆಯ ‘ಅಕ್ಷತಾ ಅಭಿಯಾನ’ದ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಪ್ರಮುಖರು ಹೆಬ್ಬಾಳ್ಕರ್ ಅವರ ಮನೆಗೆ ತೆರಳಿ, ಕಾರ್ಯಕ್ರಮಕ್ಕೆ ಆಮಂತ್ರಣ ನೀಡಿದ್ದಾರೆ.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ್ ಹೆಬ್ಬಾಳ್ಕರ್, ವಿಶ್ವ ಹಿಂದೂ ಪರಿಷತ್ತಿನ ಪ್ರಮುಖರಾದ ಪರಮೇಶ್ವರ ಹೆಗಡೆ, ಶ್ರೀಕಾಂತ ಕದಂ, ಆನಂದ ಬುಕ್ಕೆಬಾಗ್, ಗುರುದತ್ತ ಕುಲಕರ್ಣಿ ಉಪಸ್ಥಿತರಿದ್ದರು.

ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ನಿರ್ವಹಣೆಯ ಕಾರಣ ಟ್ರಸ್ಟ್​​ನವರು ಎಲ್ಲರನ್ನೂ ಆಹ್ವಾನಿಸುತ್ತಿಲ್ಲ. ಪರಿಸ್ಥಿತಿ ನೋಡಿಕೊಂಡು ಪ್ರಮುಖರನ್ನಷ್ಟೇ ಆಹ್ವಾನಿಸುತ್ತಿದ್ದಾರೆ. ಇದರಲ್ಲಿ ರಾಜಕೀಯವಿಲ್ಲ. ಕೇಂದ್ರ ಸಚಿವನಾದ ನನ್ನನ್ನೇ ಸಮಾರಂಭಕ್ಕೆ ಬರಬೇಡಿ ಎಂದು ಮನವಿ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಇತ್ತೀಚೆಗೆ ಹೇಳಿದ್ದರು. ಉದ್ಘಾಟನೆ ದಿನ ಮನೆಯಲ್ಲೇ ದೀಪ ಬೆಳಗಿಸಿ ನಂತರದ ದಿನಗಳಲ್ಲಿ ಅಯೋಧ್ಯೆಗೆ ಭೇಟಿ ನೀಡುವಂತೆ ಪ್ರಧಾನಿ ಮೋದಿ ಸಹ ಇತ್ತೀಚೆಗೆ ಭಕ್ತರಲ್ಲಿ ಮನವಿ ಮಾಡಿದ್ದಾರೆ.

ವನ್ ಮ್ಯಾನ್ ಶೋ: ಸತೀಶ್ ಜಾರಕಿಹೊಳಿ

ರಾಮಮಂದಿರ ಉದ್ಘಾಟನೆ ವನ್​ ಮ್ಯಾನ್​ ಶೋ ಆಗುತ್ತಿದೆ ಎಂದು ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಎಲ್ಲಾ ರಾಜಕೀಯ ಪಕ್ಷಗಳಿಗೆ ಆಹ್ವಾನ ಕೊಡಬೇಕು. ಇನ್ನೂ ಸಮಯವಿದೆ ಅಯೋಧ್ಯೆ ಕಾರ್ಯಕ್ರಮಕ್ಕೆ. ಎಲ್ಲರಿಗೂ ಆಹ್ವಾನ ಕೊಡಲಿ. ಉತ್ತರ ಪ್ರದೇಶ ಸಿಎಂ ಬಿಟ್ಟು ಯಾವ ಮುಖ್ಯಮಂತ್ರಿಗಳಿಗೂ ಆಹ್ವಾನ ಕೊಟ್ಟಿಲ್ಲ ಎಂದು ಹೇಳಿದರು.

ನಮ್ಮ ಊರಿನಲ್ಲಿ ರಾಮಮಂದಿರ ಇದೆ, ಅಲ್ಲೇ ಪೂಜೆ ಮಾಡುತ್ತೇನೆ. ಸದ್ಯಕ್ಕೆ ರಶ್​ ಇರುತ್ತದೆ ಹಾಗಾಗಿ ಅಯೋಧ್ಯೆಗೆ ತೆರಳುವುದಿಲ್ಲ. ಮುಂದೆ ಯಾವಾಗಲಾದರೂ ಹೋಗುತ್ತೇನೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಭಾರತವನ್ನು ಪಾಕಿಸ್ತಾನವಾಗಿಸಲು ಸಿದ್ಧತೆ ಮಾಡುತ್ತಿದ್ದಾರೇನೋ: ಯತೀಂದ್ರ ಹೇಳಿಕೆಗೆ ಪೇಜಾವರ ಶ್ರೀ ತಿರುಗೇಟು

ನನಗೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ. ನಮ್ಮ ಪಕ್ಷದ ಕಾರ್ಯಕರ್ತರಿಗೆ ಈ ಬಾರಿ ಅವಕಾಶ ಸಿಗಲಿದೆ. ನಾನು, ನಮ್ಮ ಕುಟುಂಬದ ಸದಸ್ಯರು ಯಾರೂ ಸ್ಪರ್ಧಿಸುವುದಿಲ್ಲ. ಬೆಳಗಾವಿ, ಚಿಕ್ಕೋಡಿ ಎರಡು ಲೋಕಸಭಾ ಕ್ಷೇತ್ರದಲ್ಲೂ ಸ್ಪರ್ಧಿಸಲ್ಲ. ಈ ಬಾರಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಸಿಗಲಿದೆ. ಈ ಬಗ್ಗೆ ಹೈಕಮಾಂಡ್​ ಏನು​​ ಹೇಳುತ್ತದೋ ನೋಡೋಣ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ