AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸಿಎಂ ಡಿಕೆ ಶಿವಕುಮಾರ್​ಗೆ ಜನ್ಮದಿನದ ಶುಭಾಶಯ ಕೋರಿದ ಉಪರಾಷ್ಟ್ರಪತಿ ಜಗದೀಪ್​ ಧನಕರ್​

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರಿಗೆ ಉಪ ರಾಷ್ಟ್ರಪತಿ ಜಗದೀಪ್ ಧನಕರ್​ ಅವರು ದೂರವಾಣಿ ಕರೆ ಮತ್ತು ಪತ್ರದ ಮೂಲಕ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ. ಇನ್ನು ಮೈಸೂರಿನಲ್ಲಿ ಡಿಕೆ ಶಿವಕುಮಾರ್​ ಅಭಿಮಾನಿಗಳು ದಸರಾ ವಸ್ತು ಪ್ರದರ್ಶನ ಆವರಣದ ಮುಂಭಾಗದಲ್ಲಿ ಗಿಡ ನೆಟ್ಟು, ಸಿಹಿ ಹಂಚುವ ಮೂಲಕ ಹುಟ್ಟುಹಬ್ಬ ಆಚರಿಸಿದರು.

ಡಿಸಿಎಂ ಡಿಕೆ ಶಿವಕುಮಾರ್​ಗೆ ಜನ್ಮದಿನದ ಶುಭಾಶಯ ಕೋರಿದ ಉಪರಾಷ್ಟ್ರಪತಿ ಜಗದೀಪ್​ ಧನಕರ್​
ಡಿಸಿಎಂ ಡಿಕೆ ಶಿವಕುಮಾರ್​, ಉಪರಾಷ್ಟ್ರಪತಿ ಜಗದೀಪ್​ ಧನಕರ್​
Anil Kalkere
| Updated By: ವಿವೇಕ ಬಿರಾದಾರ|

Updated on: May 15, 2024 | 1:14 PM

Share

 ಬೆಂಗಳೂರು, ಮೇ 15: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ (DK Shivakumar) ಅವರಿಗೆ ಉಪ ರಾಷ್ಟ್ರಪತಿ ಜಗದೀಪ್ ಧನಕರ್ (Jagdeep Dhankhar)​ ಅವರು ದೂರವಾಣಿ ಕರೆ ಮತ್ತು ಪತ್ರದ ಮೂಲಕ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ. “ದೇಶದ ಸೇವೆಗೆ ಜೀವನವನ್ನು ಮುಡಿಪಾಗಿಟ್ಟಿರುವ ತಮಗೆ ದೇವರು ಸಂತೋಷ, ಆರೋಗ್ಯ, ಸುದೀರ್ಘ ಫಲಪ್ರದಾಯಕ ಜೀವನ ನೀಡಲಿ” ಎಂದು ಉಪರಾಷ್ಟ್ರಪತಿ ಜಗದೀಪ್‌ ಧನಕರ್ ಶುಭ ಹಾರೈಸಿದ್ದಾರೆ. ಇದಕ್ಕೆ ಉಪಮುಖ್ಯಮಂತ್ರಿ ಡಿಕೆ ಶೀವಕುಮಾರ್​ ಧನ್ಯವಾದ ತಿಳಿಸಿ ಉಪರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

“ನನ್ನ ಜನ್ಮದಿನದ ಅಂಗವಾಗಿ ನಿಮ್ಮ ಶುಭಾಶಯ ಸಂತೋಷವಾಗಿದೆ. ಬಿಡುವಿಲ್ಲದ ವೇಳಾಪಟ್ಟಿ ನಡುವೆ ನೀವು ಶುಭಾಶಯ ಕೋರಿದ್ದೀರಿ.ನಿಮ್ಮ ನಿರೀಕ್ಷೆಯಂತೆ ನನ್ನ ಜೀವನವನ್ನು ಜನ ಸೇವೆಗೆ ಮುಡಿಪಾಗಿಡುತ್ತೇನೆ. ಇದಕ್ಕೆ ನಿಮ್ಮ ಆಶೀರ್ವಾದವನ್ನು ಬಯಸುತ್ತೇನೆಂದು” ಡಿಕೆ ಶಿವಕುಮಾರ್ ಉಪರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

ಗಿಡ ನೆಡುವ ಮೂಲಕ ಹುಟ್ಟು ಹಬ್ಬ ಆಚರಣೆ

ಮೈಸೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರ ಜನ್ಮದಿನ ಅಂಗವಾಗಿ ಅವರ ಅಭಿಮಾನಿಗಳು ದಸರಾ ವಸ್ತು ಪ್ರದರ್ಶನ ಆವರಣದ ಮುಂಭಾಗದಲ್ಲಿ ಗಿಡ ನೆಟ್ಟು, ಸಿಹಿ ಹಂಚುವ ಮೂಲಕ ಹುಟ್ಟುಹಬ್ಬ ಆಚರಿಸಿದರು. ಇನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹುಟ್ಟು ಹಬ್ಬ ಆಚರಿಸಿಕೊಳ್ಳುವುದಿಲ್ಲ ಅಂತ ನಿರ್ಧರಿಸಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉತ್ತರ ಪ್ರದೇಶದಲ್ಲಿ ಬ್ಯೂಸಿಯಾಗಿದ್ದಾರೆ.

ಇದನ್ನೂ ಓದಿ: ಸಂತ್ರಸ್ತೆ ವಿಡಿಯೋ ಬಿಡುಗಡೆ ವಿಚಾರ: ನಾನು ಪ್ರೊಡ್ಯುಸರೂ ಅಲ್ಲ, ಡೈರೆಕ್ಟರೂ ಅಲ್ಲ, ಜಸ್ಟ್ ಎಕ್ಸಿಬಿಟರ್​​; ಡಿಕೆ ಶಿವಕುಮಾರ್​

ಡಿಕೆ ಶಿವಕುಮಾರ್ ರಾಜಕೀಯ ಜೀವನ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ವಿದ್ಯಾರ್ಥಿ ನಾಯಕರಾಗಿ ಸಾರ್ವಜನಿಕ ಜೀವನ ಪ್ರವೇಶಿಸಿ, ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಶಾಸಕರಾಗಿ, ರಾಜ್ಯದ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದರು. ಬಳಿಕ ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿ ಇಂಧನ, ಬಂಧಿಖಾನೆ, ಸಹಕಾರ, ನಗರಾಭಿವೃದ್ಧಿ, ಜಲ ಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ.

ಎಐಸಿಸಿಯ ಸದಸ್ಯರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅವರು ಪ್ರಸ್ತುತ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಗೌರವಾನ್ವಿತ ಅಧ್ಯಕ್ಷರಾಗಿ, ಸಂಘಟಿತ, ಅವಿರತ ಪರಿಶ್ರಮದಿಂದ 136 ಸ್ಥಾನಗಳನ್ನು ಗಳಿಸಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ