ನಾಪತ್ತೆಯಾಗಿರುವ ಭವಾನಿ ರೇವಣ್ಣ ಹಾಗೂ ಕಾರು ಚಾಲಕನಿಗಾಗಿ ಎಸ್ಐಟಿ ಹುಡುಕಾಟ
ಅಪಹರಣ ಪ್ರಕರಣದ ಸಂತ್ರಸ್ತೆ ಮಹಿಳೆ ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡಿರುವ ಆರೋಪದ ಮೇಲೆ ಭವಾನಿ ರೇವಣ್ಣ ಕಾರು ಚಾಲಕ ಅಜಿತ್ಗಾಗಿ ಎಸ್ಐಟಿ ಶೋಧ ನಡೆಸಿದೆ. ಮತ್ತೊಂದೆಡೆ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರ ಜಾಮೀನು ಅರ್ಜಿ ವಜಾಗೊಂಡಿದ್ದು, ಇದೀಗ ತಲೆಮರೆಸಿಕೊಂಡಿರುವ ಭವನಿ ಎಲ್ಲಿದ್ದಾರೆ ಎಂದು ಎಸ್ಐಟಿ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು/ಚಿಕ್ಕಮಗಳೂರು, (ಮೇ 31): ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ (Victim Kidnap case) ಸಂಬಂಧಿಸಿದಂತೆ ಎಚ್ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ(bhavani revanna )ಅವರ ಜಾಮೀನು ಅರ್ಜಿ ವಜಾಗೊಂಡಿದೆ. ಇಂದು (ಮೇ 31) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲವು ಭವಾನಿ ಜಾಮೀನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಇದೀಗ ಎಸ್ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರನ್ನ ವಶಕ್ಕೆ ಪಡೆಯಲು ಮುಂದಾಗಿದೆ. ಆದ್ರೆ, ಬಂಧನದ ಭೀತಿ ಹಿನ್ನೆಲೆಯಲ್ಲಿ ಯಾರ ಸಂಪರ್ಕಕ್ಕೂ ಸಿಗದೇ ಅಜ್ಙಾತ ಸ್ಥಳದಲ್ಲಿರುವ ಭವಾನಿಗಾಗಿ ಎಸ್ಐಟಿ ಶೋಧ ನಡೆಸಿದೆ. ಮತ್ತೊಂದೆಡೆ ಅಪಹರಣ ಪ್ರಕರಣದ ಸಂತ್ರಸ್ತೆ ಮಹಿಳೆ ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡಿರುವ ಆರೋಪದ ಮೇಲೆ ಭವಾನಿ ರೇವಣ್ಣ ಕಾರು ಚಾಲಕ ಅಜಿತ್ಗಾಗಿ ಎಸ್ಐಟಿ ಶೋಧ ನಡೆಸಿದೆ.
ಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆಗೊಂಡಿರುವ ಹಿನ್ನೆಲೆಯಲ್ಲಿ ಎಸ್ಐಟಿ ಭವಾನಿ ರೇವಣ್ಣ ವಶಕ್ಕೆ ಪಡೆಯಲು ಮುಂದಾಗಿದೆ. ಸದ್ಯ ಅಜ್ಙಾತ ಸ್ಥಳಕ್ಕೆ ತೆರಳಿರುವ ಭವಾನಿ ರೇವಣ್ಣ ಎಲ್ಲಿದ್ದಾರೆ ಎಂದು ಎಸ್ಐಟಿ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ ಎಂದು ತಿಳಿದುಬಂದಿದ್ದು, ಎಲ್ಲಿದ್ದಾರೆ ಎನ್ನುವ ಮಾಹಿತಿ ಸಿಕ್ಕ ತಕ್ಷಣ ಯಾವ ಸಂದರ್ಭದಲ್ಲಾದರೂ ಭವಾನಿ ರೇವಣ್ಣ ಅವರ ಬಂಧನವಾಗಬಹುದು.
ಇದನ್ನೂ ಓದಿ: ಕಿಡ್ನ್ಯಾಪ್ ಕೇಸ್: ಭವಾನಿ ಜಾಮೀನು ಅರ್ಜಿ ವಜಾ, ಇಂದು ರೇವಣ್ಣ ಕುಟುಂಬಕ್ಕೆ ಡಬಲ್ ಶಾಕ್
ತಲೆಮರೆಸಿಕೊಂಡ ಭವಾನಿ ರೇವಣ್ಣ
ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ಎಸ್ಐಟಿ ನೊಟೀಸ್ ನೀಡಿತ್ತು. ಆದರೆ, ಈ ನೊಟೀಸ್ಗೆ ಭವಾನಿ ರೇವಣ್ಣ ಉತ್ತರ ನೀಡಿಲ್ಲ. ಅಲ್ಲದೆ, ಕಳೆದ ಹದಿನೈದು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಮೇ 4 ರಂದು ಸಂತ್ರಸ್ತೆಯರ ಸ್ಥಳ ಮಹಜರಿನ ವೇಳೆ ಹೊಳೆನರಸೀಪುರ ಮನೆಯಲ್ಲಿ ಭವಾನಿ ಹಾಜರಿದ್ದರು. ಆ ನಂತರ ಮೇ 6 ರಂದು ಹೊಳೆನರಸೀಪುರದ ಮನೆಯಲ್ಲಿ ಜಿಲ್ಲೆಯ ಜೆಡಿಎಸ್ ಶಾಸಕರು ಹಾಗೂ ಮಾಜಿ ಶಾಸಕರು ಭವಾನಿಯನ್ನು ಬೇಟಿಯಾಗಿದ್ದರು. ಶಾಸಕರನ್ನು ಭೇಟಿಯಾದ ನಂತರ ಹೊಳೆನರಸೀಪುರ ಮನೆಯಿಂದ ಭವಾನಿ ರೇವಣ್ಣ ಹೊರ ಹೋಗಿದ್ದರು.ಆ ನಂತರ, ಅಂದರೆ ಮೇ 8 ರಿಂದ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ.
ಭವಾನಿ ಕಾರು ಚಾಲಕ ಅಜಿತ್ಗಾಗಿ ಎಸ್ಐಟಿ ಶೋಧ
ಸಂತ್ರಸ್ತೆ ವಿಡಿಯೋ ಚಿತ್ರೀಕರಿಸಿದ್ದ ಭವಾನಿ ರೇವಣ್ಣ ಕಾರು ಚಾಲನ ಅಜಿತ್ಗಾಗಿ SIT ಹುಡುಕಾಟ ನಡೆಸಿದ್ದು, ನಿನ್ನೆ (ಮೇ 30) ರಾತ್ರಿ ಚಿಕ್ಕಮಗಳೂರಿನ ಕಲ್ಯಾಣನಗರದಲ್ಲಿರುವ ಅವರ ಮಾವ ದಿನೇಶ್ ಮನೆಯಲ್ಲಿ ಶೋಧ ನಡೆಸಿದೆ. ಅಜಿತ್ಗಾಗಿ ಎಸ್ಐಟಿ ಶೋಧ ನಡೆಸಿದ ಮಾವ ದಿನೇಶ್ ಮನೆಗೆ ಬೀಗಹಾಕಿಕೊಂಡು ಹೋಗಿದ್ದಾರೆ.
ಸಂತ್ರಸ್ತೆ ಅಪಹರಣ ಆರೋಪದ ಮೇಲೆ ಮೈಸೂರಿನ ಕೆಆರ್ಪೇಟೆಯಲ್ಲಿ ಎಚ್ಡಿ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಸಂತ್ರಸ್ತ ಮಹಿಳೆ ಪುತ್ರ ದೂರು ದಾಖಲಿಸಿದ್ದ. ಬಳಿಕ ಭವಾನಿ ರೇವಣ್ಣ ಕಾರು ಚಾಲಕ ಅಜಿತ್, ನನ್ನ ಯಾರು ಅಪಹರಣ ಮಾಡಿಲ್ಲ ಎಂದು ಸಂತ್ರಸ್ತೆಯಿಂದ ಹೇಳಿಸಿ ಆ ವಿಡಿಯೋವನ್ನು ವೈರಲ್ ಮಾಡಿದ್ದ. ಅಲ್ಲದೇ ಸಂತ್ರಸ್ತೆಯನ್ನು ಕಾರಿನಲ್ಲಿ ಕರೆದೊಯ್ದ ಆರೋಪ ಕೇಳಿಬಂದಿತ್ತು. ಸಂತ್ರಸ್ತೆ ಹೇಳಿಕೆ ವೈರಲ್ ಬೆನ್ನಲ್ಲೇ ಅಜಿತ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಬಳಿಕ ತಲೆಮರೆಸಿಕೊಂಡಿರುವ ಅಜಿತ್ಗಾಗಿ ಎಸ್ಐಟಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.