ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ದೂರು ನೀಡಲು ಬಂದ ಮಹಿಳೆಯನ್ನೇ ತನ್ನ ಕಾಮತೃಷೆಗೆ ಬಳಸಿಕೊಂಡ ಆರೋಪದ ಮೇಲೆ ಬಂಧಿತರಾಗಿರುವ ತುಮಕೂರು ಜಿಲ್ಲೆ ಮಧುಗಿರಿ ಉಪ ವಿಭಾಗದ ಡಿವೈಎಸ್ಪಿ ರಾಮಚಂದ್ರಪ್ಪ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂದನ ವಿಧಿಸಿ ಮಧುಗಿರಿ ಜೆಎಂಎಫ್ಸಿ ಕೋರ್ಟ್ ಶನಿವಾರ ಆದೇಶ ಹೊರಡಿಸಿದೆ. ಇನ್ನು ರಾಮಚಂದ್ರಪ್ಪ ಹೇಗೆ ಪುಸಲಾಯಿಸಿದ ಎನ್ನುವ ಬಗ್ಗೆ ಮಹಿಳೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾಳೆ.
ತುಮಕೂರು, ಜನವರಿ 08): ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರು ಆದೇಶ ಹೊರಡಿಸಿದ್ದರು. ಇದರ ಬೆನ್ನಲ್ಲೇ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಪೊಲೀಸರು ಬಂಧಿಸಿದ್ದರು. ಇನ್ನು ರಾಮಂಚಂದ್ರಪ್ಪ ಏನೆಲ್ಲಾ ಮಾಡುತ್ತಿದ್ದ ಎನ್ನುವುದನ್ನು ಸಂತ್ರಸ್ತ ಮಹಿಳೆ ಪಿನ್ ಟು ಪಿನ್ ಮಾಹಿತಿ ಬಿಚ್ಚಿಟ್ಟಿದ್ದಾಳೆ.
Latest Videos