ವಿಧಾನಪರಿಷತ್ ಚುನಾವಣೆ: ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ ಪೈಕಿ 1 ಕ್ಷೇತ್ರ ಜೆಡಿಎಸ್‌ಗೆ ಬಿಜೆಪಿ ಬಿಟ್ಟುಕೊಟ್ಟಿದೆ. ವಿಧಾನಪರಿಷತ್‌ನ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ.

ವಿಧಾನಪರಿಷತ್ ಚುನಾವಣೆ: ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ
ಪರಿಷತ್‌ನ ಪದವೀಧರ ಮತ್ತು ಶಿಕ್ಷಕರ ಚುನಾವಣೆ: ಆರು ಕ್ಷೇತ್ರಗಳಿಗೆ ಉಸ್ತುವಾರಿಗಳನ್ನ ನೇಮಿಸಿದ ಬಿಜೆಪಿ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on:May 11, 2024 | 9:12 PM

ಬೆಂಗಳೂರು, ಮೇ 11: ವಿಧಾನಪರಿಷತ್ತಿನ (Legislative Council) ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ ಪೈಕಿ 1 ಕ್ಷೇತ್ರ ಜೆಡಿಎಸ್‌ಗೆ ಬಿಜೆಪಿ ಬಿಟ್ಟುಕೊಟ್ಟಿದೆ. ವಿಧಾನಪರಿಷತ್‌ನ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ. ಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರನಾಥ್ ಪಾಟೀಲ್, ಪರಿಷತ್‌ನ ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ, ಪರಿಷತ್‌ನ ಬೆಂಗಳೂರು ಪದವೀಧರ ಕ್ಷೇತ್ರದಿಂದ ಅ.ದೇವೇಗೌಡ, ಪರಿಷತ್‌ನ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿ ಮತ್ತು ವಿಧಾನಪರಿಷತ್‌ನ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಇ.ಸಿ.ನಿಂಗರಾಜು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮತ್ತೆ ಅಮರನಾಥ್​ ಪಾಟೀಲ್​ಗೆ ಬಿಜೆಪಿ ಮಣೆ

ಕಲಬುರಗಿಯ ಅಮರನಾಥ್ ಪಾಟೀಲ್​​​ರನ್ನ ಹುರಿಯಾಳು ಮಾಡಿದ ಹೈಕಮಾಂಡ್. 2012-16 ಎಂಎಲ್​​ಸಿಯಾಗಿದ್ದರಿ. ಒಂದು ಭಾರಿ ಇದೇ ಕ್ಷೇತ್ರದಿಂದ ಎಂಎಲ್‌ಸಿ ಆಗಿದ್ದ ಅಮರನಾಥ್​ ಪಾಟೀಲ್, ಆದರೆ ಕಳೆದ ಭಾರಿ ಟಿಕೆಟ್ ಕೈತಪ್ಪಿತ್ತು. ಹೀಗಾಗಿ ಕಾಂಗ್ರೆಸ್ ಗೆದ್ದಿತ್ತು.

ಇದನ್ನೂ ಓದಿ: ಮಾಜಿ ವಿಧಾನಪರಿಷತ್​ ಸದಸ್ಯನ ಸಹೋದರನ ಮನೆ ಮೇಲೆ ಇಡಿ ದಾಳಿ

ಆದರೆ ಈ ಭಾರಿ ಮತ್ತೆ ಅಮರನಾಥ್​ ಪಾಟೀಲ್​ಗೆ ಬಿಜೆಪಿ ಮಣೆ ಹಾಕಿದೆ. ಬಿಜೆಪಿ ಜಿಲ್ಲಾಧ್ಯಕ್ಷರಾಗಿಯು ಕೆಲಸ ಮಾಡಿದ್ದಾರೆ. ಸಂಘ ಪರಿವಾರದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.

ಡಾ. ಧನಂಜಯ ಸರ್ಜಿಗೆ ಟಿಕೆಟ್

ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದ ಡಾ. ಧನಂಜಯ ಸರ್ಜಿ ಕೊನೆಯ ಕ್ಷಣದಲ್ಲಿ  ಟಿಕೆಟ್ ತಪ್ಪಿತ್ತು. ಈ ಹಿನ್ನಲೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಮೇಲೆ ಕಣ್ಣು ಇಟ್ಟಿದ್ದು ಇದೀಗ ಟಿಕೆಟ್​ ತಮ್ಮದಾಗಿಸಿಕೊಂಡಿದ್ದಾರೆ. ಶಿವಮೊಗ್ಗ ಸೇರಿದಂತೆ ರಾಜ್ಯದಲ್ಲಿ ಮಕ್ಕಳ ಉತ್ತಮ ವೈದ್ಯ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿಳ: ವಿಧಾನಪರಿಷತ್​​ ಸಭಾಪತಿ ಕಚೇರಿಯಲ್ಲಿ ಹೈಡ್ರಾಮಾ: ಕಾಂಗ್ರೆಸ್ ಸದಸ್ಯರ ರಾಜೀನಾಮೆ ಪ್ರಹಸನ

ಶಿವಮೊಗ್ಗ ಲೋಕಸಭಾ ಕ್ಷೇತ್ರ ಗ್ರಾಮಾಂತರ ಕ್ಷೇತ್ರದ ಜವಾಬ್ದಾರಿ ನಿರ್ವಹಣೆ ಮಾಡಿದ್ದ ಸರ್ಜಿ ಸಾಧು ಲಿಂಗಾಯತ ಜಾತಿಗೆ ಸೇರಿದ್ದಾರೆ. ಬಿಎಸ್ ಯಡಿಯೂರಪ್ಪ ಮತ್ತು ಸಂಘ ಪರಿವಾರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಬಿಎಸ್ ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಶಿವಮೊಗ್ಗ ವಿಧಾನಸಭೆ ಚುನಾವಣೆ ಮೊದಲು ಅಧಿಕೃತವಾಗಿ ಬಿಜೆಪಿ ಸೇರ್ಪಡೆ ಆಗಿದ್ದರು. ಬಿಜೆಪಿ ಸೇರಿ ಒಂದೇ ವರ್ಷದಲ್ಲಿ ಎಲ್ಲರ ಗಮನ ಸೆಳೆದಿದ್ದರು. ಬಿಜೆಪಿಯ ವರಿಷ್ಠರಿಂದ ಸರ್ಜಿ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:33 pm, Sat, 11 May 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ