ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್​​​​ ಪಟ್ಟಿಯಲ್ಲಿ ಬಸವರಾಜ ಹೊರಟ್ಟಿ: 2024ನೇ ಸಾಲಿನ ವಾರ್ಷಿಕ ಪುಸ್ತಕ ಪ್ರಕಟ

ಭಾರತೀಯರ ವಿಶ್ವ ದಾಖಲೆಯ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್​​​​ ಪಟ್ಟಿಯಲ್ಲಿ ವಿಧಾನಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಹೆಸರು ಸೇರ್ಪಡೆ ಮಾಡಲಾಗಿದೆ. 2024ನೇ ಸಾಲಿನ ವಾರ್ಷಿಕ ಪುಸ್ತಕ ಇದೀಗ ಪ್ರಕಟವಾಗಿದ್ದು, ಬಸವರಾಜ ಹೊರಟ್ಟಿ ಅವರ ದಾಖಲೆಗಳನ್ನು ಪ್ರಕಟಿಸಲಾಗಿದೆ. ಹೊರಟ್ಟಿ ಅವರು ವಿಧಾನ ಪರಿಷತ್ ಪ್ರವೇಶಿಸಿ ಇಂದಿಗೆ 43 ವರ್ಷ 201 ದಿನಗಳಾಗಿವೆ.

ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್​​​​ ಪಟ್ಟಿಯಲ್ಲಿ ಬಸವರಾಜ ಹೊರಟ್ಟಿ: 2024ನೇ ಸಾಲಿನ ವಾರ್ಷಿಕ ಪುಸ್ತಕ ಪ್ರಕಟ
ವಿಧಾನಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jan 24, 2024 | 5:50 PM

ಬೆಂಗಳೂರು, ಜನವರಿ 24: ಭಾರತೀಯರ ವಿಶ್ವ ದಾಖಲೆಯ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್​​​​ ಪಟ್ಟಿಯಲ್ಲಿ ವಿಧಾನಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಹೆಸರು ಸೇರ್ಪಡೆ ಮಾಡಲಾಗಿದೆ. ಭಾರತದಲ್ಲಿ ಪ್ರಕಟವಾದ 2024ನೇ ಸಾಲಿನ ವಾರ್ಷಿಕ ಪುಸ್ತಕದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರ ದಾಖಲೆಗಳನ್ನು ಪ್ರಕಟ ಮಾಡಲಾಗಿದೆ. ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್ ಪ್ರವೇಶಿಸಿ ಇಂದಿಗೆ 43 ವರ್ಷ 201 ದಿನಗಳಾಗಿವೆ. 1980 ರಿಂದ ಸ್ಪರ್ಧಿಸಿದ ಎಲ್ಲಾ ಚುನಾವಣೆಗಳಲ್ಲಿ ಜಯ ಗಳಿಸಿದ ಅಂಕಿ ಸಂಖ್ಯೆಗಳು ಹಾಗೂ ಇನ್ನಿತರ ಮಾಹಿತಿಯನ್ನು ಪ್ರಕಟಿಸಲಾಗಿದೆ. ಈಗಾಗಲೇ 2022ರಲ್ಲಿ ಲಂಡನ್​ನ ವರ್ಲ್ಡ್ ಬುಕ್ ಆಫ್ ದಾಖಲೆಗೆ ಬಸವರಾಜ ಹೊರಟ್ಟಿ ಹೆಸರು ಸೇರ್ಪಡೆ ಆಗಿದೆ.

ಬಸವರಾಜ ಹೊರಟ್ಟಿ ಪ್ರಸ್ತುತ ಕರ್ನಾಟಕ ವಿಧಾನ ಪರಿಷತ್ತಿನ ಅಧ್ಯಕ್ಷರಾಗಿದ್ದು, ಜೂನ್ 2022 ರಲ್ಲಿ ಅವರು ದಾಖಲೆಯ ಎಂಟನೇ ಬಾರಿಗೆ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಮರು ಆಯ್ಕೆಯಾಗುವು ಮೂಲಕ ಇತಿಹಾಸ ಬರೆದಿದ್ದಾರೆ. ಅವರು 1980 ರಿಂದ ಸದಸ್ಯರಾಗಿ, ಭಾರತದಲ್ಲಿ ಶಾಸಕಾಂಗ ಮಂಡಳಿಯಲ್ಲಿ ದೀರ್ಘಾವಧಿಯ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಕೇಂದ್ರದಿಂದ ಬಿಡುಗಡೆಯಾಗದ ಬರಪರಿಹಾರ ನಿಧಿ, ಅಸಹಾಯಕತೆ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಮೂಲತಃ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಯಡಹಳ್ಳಿಯಲ್ಲಿ ಜನಿಸಿರುವ ಹೊರಟ್ಟಿ, ರೈತಾಪಿ ಕುಟುಂಬದಲ್ಲಿ ಜನಿಸಿದ್ದವರು. ಪ್ರಾಥಮಿಕ, ಫ್ರೌಡ ಶಿಕ್ಷಣವನ್ನ ಮುಗಿಸಿದ್ದ ಅವರು ಹುಬ್ಬಳ್ಳಿಯಲ್ಲಿ ಉನ್ನತ ವ್ಯಾಸಂಗ ಮಾಡಿದ್ದರು. ಅಲ್ಲದೆ 1975 ರಿಂದ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ.

ಹೀಗಾಗಿ ಶಿಕ್ಷಕರ ಸಮಸ್ಯೆಯನ್ನ ಬಹಳ ಹತ್ತಿರದಿಂದ ಬಲ್ಲವರಾಗಿದ್ದರು‌. ಈ ಕಾರಣಕ್ಕೆ 1976 ರಲ್ಲಿ ರಾಜ್ಯ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘ ಸ್ಥಾಪಿಸಿ ಅದರ ಅಧ್ಯಕ್ಷರಾಗಿದ್ದು, ಅಲ್ಲಿಂದಲೇ ಅವರ ರಾಜಕೀಯ ಜೀವನ ಆರಂಭವಾಯಿತು.

ಪವನ್ ಕುಮಾರ್ ಅವರು 24 ವರ್ಷ 165 ದಿನಗಳ ಕಾಲ ಸಿಎಂ

ಈ ಬಾರಿಯ ವಾರ್ಷಿಕ ಪುಸ್ತಕದಲ್ಲಿ ಸಿಕ್ಕಿಂ ರಾಜ್ಯದ ಮಾಜಿ ಸಿಎಂ ಪವನ್ ಕುಮಾರ್ ಅವರು ಭಾರತದ ಅತ್ಯಂತ ದೀರ್ಘಾವಧಿಯ ಮುಖ್ಯಮಂತ್ರಿಯಾಗಿದ್ದಾರೆ. 12 ಡಿಸೆಂಬರ್ 1994 ರಿಂದ 26 ಮೇ 2019 ವರೆಗೆ ಅಂದರೆ 24 ವರ್ಷ 165 ದಿನಗಳು ಐದು ಭಾರಿ ಆ ಹುದ್ದೆಯಲ್ಲಿ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ವಾಪಸ್ ಆಗುವಂತೆ ಜಗದೀಶ್ ಶೆಟ್ಟರ್​ಗೆ ಬಂಪರ್ ಆಫರ್: ಏನದು ಆಫರ್? ಇದಕ್ಕೆ ಮಾಜಿ ಸಿಎಂ ಓಕೆ ಅಂತಾರಾ?

ಇನ್ನು 1 ಜೂನ್ 1977 ರಿಂದ 6 ನವೆಂಬರ್ 2000 ರವರೆಗೆ ಅಂದರೆ 23 ವರ್ಷ 137 ದಿನಗಳು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ ಮಾಜಿ ಸಿಎಂ ಜ್ಯೋತಿ ಬಸು ಅವರ ದಾಖಲೆಯನ್ನು ಅವರು ಮೀರಿಸಿದ್ದಾರೆ ಈ ಎಲ್ಲಾ ಅಂಶಗಳನ್ನು 2024ನೇ ಸಾಲಿನ ವಾರ್ಷಿಕ ಪುಸ್ತಕದಲ್ಲಿ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:37 pm, Wed, 24 January 24

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ