ಹಲವು ವರ್ಷಗಳಿಂದ ಒಂದೆಕಡೇ ಸೇವೆ ಸಲ್ಲಿಸುತ್ತಿದ್ದ ವಿಧಾನ ಪರಿಷತ್​ನ 30 ಅಧಿಕಾರಿಗಳ ವರ್ಗಾವಣೆ

ಚಿಂತಕರ ಚಾವಡಿ ಎನಿಸಿರುವ ಮೇಲ್ಮನೆಯ ಪ್ರಾಮುಖ್ಯತೆ ಹಾಗೂ ಅದರ ಘನತೆ ಹೆಚ್ಚಿಸಲು ಅಗತ್ಯ ಸುಧಾರಣೆಗಳನ್ನು ಕೈಗೊಂಡು ಆಡಳಿತ ಯಂತ್ರ ಚುರುಕುಗೊಳಿಸಲು ವಿನೂತನ ಪ್ರಯತ್ನವನ್ನು ಸದಾ ಮುನ್ನಡೆಸುತ್ತೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಲವು ವರ್ಷಗಳಿಂದ ಒಂದೆಕಡೇ ಸೇವೆ ಸಲ್ಲಿಸುತ್ತಿದ್ದ ವಿಧಾನ ಪರಿಷತ್​ನ 30 ಅಧಿಕಾರಿಗಳ ವರ್ಗಾವಣೆ
ಬಸವರಾಜ ಹೊರಟ್ಟಿ
Follow us
TV9 Web
| Updated By: guruganesh bhat

Updated on:Aug 20, 2021 | 6:21 PM

ಬೆಂಗಳೂರು: ಕಳೆದ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಬೇರೂರಿದ್ದ ಕರ್ನಾಟಕ ವಿಧಾನ ಪರಿಷತ್​ನ 30 ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆದೇಶಿಸಿದ್ದಾರೆ. ಈಮೂಲಕ ಸಚಿವಾಲಯದ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಯತ್ನಕ್ಕೆ ಅವರು ಕೈಹಾಕಿದ್ದಾರೆ. ಆಯಕಟ್ಟಿನ ಸ್ಥಳಗಳಲ್ಲಿ ಕಳೆದ ಹಲವು ವರ್ಷಗಳಿಂದ ಕೆಲಸ ಮಾಡುತ್ತ ತಮ್ಮದೇ ಹಿಡಿತ ಹಾಗೂ ಪ್ರಭುತ್ವ ಸಾಧಿಸಿದ್ದ ಹಲವರನ್ನು ಬೇರೆಡೆಗೆ ವರ್ಗಾಯಿಸಿ ವಿಧಾನ ಪರಿಷತ್ ಕಾರ್ಯ ನಿರ್ವಹಣೆಯಲ್ಲಿ ಪಾರದರ್ಶಕತೆ ಹಾಗೂ ದಕ್ಷತೆ ಮೂಡಿಸುವಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ನಡೆಸುತ್ತಿರುವ ಭಾಗವೆಂಬ ಮಾತುಗಳು ಕೇಳಿಬಂದಿವೆ. ಈ ಕುರಿತು ನಿನ್ನೆಯಷ್ಟೇ ಅಧಿಸೂಚನೆ ಹೊರಡಿಸಿದ್ದು ಉಪಕಾರ್ಯದರ್ಶಿ, ಅಧೀನ ಕಾರ್ಯದರ್ಶಿ ಶಾಖಾಧಿಕಾರಿಗಳು, ಹಿರಿಯ ಸಹಾಯಕರು, ಸಹಾಯಕರು ಮತ್ತು ಕಿರಿಯ ಸಹಾಯಕರನ್ನೊಳಗೊಂಡ 30 ಜನರನ್ನು ಬೇರೆ ಬೇರೆ ವಿಭಾಗಗಳಿಗೆ ವರ್ಗಾಯಿಸಲಾಗಿದೆ. ಸಿಬ್ಬಂದಿಯ ವರ್ಗಾವಣೆ ಕುರಿತು ವಿಧಾನಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮೀ ಅಧಿಕೃತ ಆದೇಶ ಪ್ರಕಟಿಸಿದ್ದಾರೆ

ಪರಿಷತ್ ಸಚಿವಾಲಯದ ಕಾರ್ಯ ನಿರ್ವಹಣೆಯಲ್ಲಿ ವ್ಯಾಪಕ ಬದಲಾವಣೆ ಅವಶ್ಯಕತೆ ಇದೆ ಎನ್ನುವ ಕೂಗು ಹಲವು ವರ್ಷಗಳಿಂದ ಕೇಳಿ ಬರುತ್ತಿತ್ತಾದರೂ ಈ ಕುರಿತು ಯಾರೂ ಸಹ ಈ ಪ್ರಮಾಣದಲ್ಲಿ ಕ್ರಮ ಕೈಗೊಂಡಿರಲಿಲ್ಲ. ಹಲವಾರು ಪ್ರಭಾವಿಗಳ ಕೃಪಾಶೀರ್ವಾದ, ಒತ್ತಡ ಮೊದಲಾದ ಕಾರಣಗಳಿಂದ ಹಲವು ಸಿಬ್ಬಂದಿ ಸಚಿವಾಲಯದ ಆಯಕಟ್ಟಿನ ಸ್ಥಳಗಳಲ್ಲಿ ಬಹಳ ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು. ಅಂತಹ ಕೆಲ ಸಿಬ್ಬಂದಿಗಳ ಬಗ್ಗೆ ಹಲವು ದೂರುಗಳು ಕೇಳಿ ಬಂದಿದ್ದವು. ಇವೆಲ್ಲವುಗಳನ್ನು ಪರಿಗಣಿಸಿ ಸಭಾಪತಿ ಬಸವರಾಜ ಹೊರಟ್ಟಿ ಮಿಂಚಿನ ಕಾರ್ಯಾಚರಣೆ ನಡೆಸಿ ದಿಢೀರನೆ 30 ಜನ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ್ದಾರೆ.

ಚಿಂತಕರ ಚಾವಡಿ ಎನಿಸಿರುವ ಮೇಲ್ಮನೆಯ ಪ್ರಾಮುಖ್ಯತೆ ಹಾಗೂ ಅದರ ಘನತೆ ಹೆಚ್ಚಿಸಲು ಅಗತ್ಯ ಸುಧಾರಣೆಗಳನ್ನು ಕೈಗೊಂಡು ಆಡಳಿತ ಯಂತ್ರ ಚುರುಕುಗೊಳಿಸಲು ವಿನೂತನ ಪ್ರಯತ್ನವನ್ನು ಸದಾ ಮುನ್ನಡೆಸುತ್ತೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 

ಉತ್ತರ ಕರ್ನಾಟಕ ಸ್ಪೆಷಲ್ ಎಣ್ಣೆ ಬದನೆಕಾಯಿ; ಸರಳ ವಿಧಾನದಲ್ಲಿ ಇಂದೇ ಮಾಡಿ ಸವಿಯಿರಿ

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ, ರಸ್ತೆ ದುರಸ್ತಿಗೆ ಆದ್ಯತೆ ನೀಡಲು ಬಸವರಾಜ ಬೊಮ್ಮಾಯಿ ಸೂಚನೆ

(Vidhana Parishad Chairman Basavaraj Horatti orders Transfer of more than 30 officers which has been serving as one for many years)

Published On - 6:09 pm, Fri, 20 August 21

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ