Anand Mamani Passed Away: ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆನಂದ್ ಮಾಮನಿ ನಿಧನ
ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆನಂದ್ ಮಾಮನಿ ಶನಿವಾರ ಮಧ್ಯರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಉಪ ಸಭಾಪತಿ, ಸವದತ್ತಿ ಶಾಸಕ ಆನಂದ್ ಮಾಮನಿ (Anand Mamani) (56) ವಿಧಿವಶರಾಗಿದ್ದಾರೆ (Passed away). ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನಂದ್ ಮಾಮನಿ ಅವರು ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮಧ್ಯರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಆನಂದ ಮಾಮನಿ ಅವರು ಕ್ಯಾನ್ಸರ್ ಕಾಯಿಲೆಯಿಂದಾಗಿ ಕೆಲ ದಿನಗಳಿಂದ ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರನ್ನು ಬೆಂಗಳುರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.
ಅಲ್ಲದೇ ಇತ್ತೀಚೆಗಷ್ಟೇ ಈ ಬಗ್ಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ ಆನಂದ್ ಮಾಮನಿ ಅವರು, ಶೀಘ್ರದಲ್ಲೇ ಗುಣಮುಖವಾಗಿ ಜನ ಸೇವೆ ಬರುತ್ತೇನೆ, ಯಾರು ಆತಂಕಪಡಬೇಡಿ. ಊಹಾಪೋಹಗಳಿಗೆ ಕಿವಿಗೊಡಬೇಡಿ ನಾನು ಚೆನ್ನಾಗಿದ್ದೇನೆ ಎಂದಿದ್ದರು. ಆದ್ರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಆನಂದ್ ಮಾಮನಿ ಅವರ ಪಾರ್ಥಿವ ಶರೀರವನ್ನು ಅಂಬ್ಯುಲೆನ್ಸ್ ಮೂಲಕ ಸವದತ್ತಿಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ. ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಭಾನುವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ಟಿವಿ9ಗೆ ತಿಳಿಸಿವೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ
ನಮ್ಮ ಪಕ್ಷದ ಶಾಸಕರು, ರಾಜ್ಯ ವಿಧಾನಸಭೆಯ ಮಾನ್ಯ ಉಪ ಸಭಾಧ್ಯಕ್ಷರಾದ ಆತ್ಮೀಯ ಶ್ರೀ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ.
ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ pic.twitter.com/PQq96zMKPI
— Basavaraj S Bommai (@BSBommai) October 22, 2022
“ನಮ್ಮ ಪಕ್ಷದ ಶಾಸಕರು, ರಾಜ್ಯ ವಿಧಾನಸಭೆಯ ಮಾನ್ಯ ಉಪ ಸಭಾಧ್ಯಕ್ಷರಾದ ಆತ್ಮೀಯ ಶ್ರೀ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ”, ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 12:55 am, Sun, 23 October 22