AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ತಿತ್ವಕ್ಕೆ ಬಂತು ವಿಜಯನಗರ ಜಿಲ್ಲೆ, ಬಳ್ಳಾರಿ ವಿಭಜನೆ; ಹೊರಬಿತ್ತು ಕರ್ನಾಟಕ ಸರ್ಕಾರದ ಅಧಿಸೂಚನೆ

ಬಳ್ಳಾರಿ ಜಿಲ್ಲೆಯ ಸರಹದ್ದುಗಳನ್ನು ಮಾರ್ಪಡಿಸಿ ನೂತನ ವಿಜಯನಗರ ಜಿಲ್ಲೆಯನ್ನು ಅಸ್ತಿತ್ವಕ್ಕೆ ತರಲಾಗಿದೆ. ನೂತನ ವಿಜಯನಗರ ಜಿಲ್ಲೆಯ ಕೇಂದ್ರ ಸ್ಥಾನ ಹೊಸಪೇಟೆ ಆಗಿರಲಿದೆ.

ಅಸ್ತಿತ್ವಕ್ಕೆ ಬಂತು ವಿಜಯನಗರ ಜಿಲ್ಲೆ, ಬಳ್ಳಾರಿ ವಿಭಜನೆ; ಹೊರಬಿತ್ತು ಕರ್ನಾಟಕ ಸರ್ಕಾರದ ಅಧಿಸೂಚನೆ
ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗೆ ಸೇರುವ ತಾಲ್ಲೂಕುಗಳು
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Feb 08, 2021 | 6:30 PM

ಬೆಂಗಳೂರು: ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆಯನ್ನು ರಾಜ್ಯ ಸರ್ಕಾರ ಘೋಷಿಸಿದೆ. ಈ ಸಂಬಂಧ ಫೆ.8ರಂದು ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಲಾಗಿದೆ.

ಬಳ್ಳಾರಿ ಜಿಲ್ಲೆಯ ಸರಹದ್ದುಗಳನ್ನು ಮಾರ್ಪಡಿಸಿ ನೂತನ ವಿಜಯನಗರ ಜಿಲ್ಲೆಯನ್ನು ಅಸ್ತಿತ್ವಕ್ಕೆ ತರಲಾಗಿದೆ. ನೂತನ ವಿಜಯನಗರ ಜಿಲ್ಲೆಯ ಕೇಂದ್ರ ಸ್ಥಾನ ಹೊಸಪೇಟೆ ಆಗಿರಲಿದೆ.

ವಿಜಯನಗರ ಜಿಲ್ಲೆಯಲ್ಲಿ ಒಟ್ಟು ಆರು ತಾಲ್ಲೂಕುಗಳು ಇರಲಿದೆ ಎಂದು ಸರ್ಕಾರ ಅಧಿಸೂಚನೆಯಲ್ಲಿ ಘೋಷಿಸಿದೆ. ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ ಮತ್ತು ಹರಪನಹಳ್ಳಿ ತಾಲ್ಲೂಕುಗಳು ನೂತನ ಜಿಲ್ಲೆಯ ಭಾಗವಾಗಲಿವೆ.

ಇಷ್ಟು ದಿನ ಈ ತಾಲ್ಲೂಕುಗಳು ಬಳ್ಳಾರಿ ಜಿಲ್ಲೆಯ ಭಾಗವಾಗಿದ್ದವು. ಮುಂದಿನ ದಿನಗಳಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಬಳ್ಳಾರಿ, ಕುರುಗೋಡು, ಸಿರಗುಪ್ಪ, ಕಂಪ್ಲಿ ಮತ್ತು ಸಂಡೂರು ತಾಲ್ಲೂಕುಗಳು ಮಾತ್ರ ಉಳಿಯುತ್ತವೆ.

ಹೆಲಿಕಾಪ್ಟರ್​ನಲ್ಲಿ ಹೊಸಪೇಟೆಗೆ ಆನಂದ್​ಸಿಂಗ್ ನೂತನ ಜಿಲ್ಲೆಯ ಅಧಿಸೂಚನೆ ಹೊರಬಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹೊಸಪೇಟೆಗೆ ಸಚಿವ ಆನಂದ್​ಸಿಂಗ್ ಹೆಲಿಕಾಪ್ಟರ್​ನಲ್ಲಿ ಹೊರಟರು. ಹಂಪಿ ವಿರೂಪಾಕ್ಷನಿಗೆ ಪೂಜೆ ಸಲ್ಲಿಸಿ, ರಾಜ್ಯ ಸರ್ಕಾರದ ನಿರ್ಧಾರವನ್ನು ಅವರು ಸ್ವಾಗತಿಸಲಿದ್ದಾರೆ.

ಆನಂದ್​ಸಿಂಗ್ ಅವಿರತ ಹೋರಾಟ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸಪೇಟೆಯನ್ನು ಕೇಂದ್ರವಾಗಿಸಿ ನೂತನ ವಿಜಯನಗರ ಜಿಲ್ಲೆ ರಚಿಸಬೇಕು ಎನ್ನುವುದು ಕಾಂಗ್ರೆಸ್​ನಿಂದ ಬಿಜೆಪಿಗೆ ಆನಂದ್​ಸಿಂಗ್ ಪಕ್ಷಾಂತರ ಮಾಡಲು ಇಟ್ಟಿದ್ದ ಮುಖ್ಯ ಷರತ್ತಾಗಿತ್ತು. ನೂತನ ವಿಜಯನಗರ ಜಿಲ್ಲೆಯ ರಚನೆಗೆ ಕಾಂಗ್ರೆಸ್ ನಾಯಕರಾದ ವಿ.ಎಸ್.ಉಗ್ರಪ್ಪ ಮತ್ತು ಕೆ.ಸಿ.ಕೊಂಡಯ್ಯ ಅವರ ತೀವ್ರ ವಿರೋಧ ಇತ್ತು. ಇದೀಗ ಹೊಸ ಜಿಲ್ಲೆಯ ರಚನೆಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿರುವ ಆನಂದ್​ಸಿಂಗ್​ಗೆ ಜಿಲ್ಲೆಯಲ್ಲಿ ಹಿಡಿತ ಹೆಚ್ಚಾಗುವಂತೆ ಮಾಡಿದೆ. ಜನರು ಆನಂದ್​ ಸಿಂಗ್​ ಅವರಿಗೆ ಅದ್ಧೂರಿ ಸ್ವಾಗತ ಕೋರಿ ಹರ್ಷ ವ್ಯಕ್ತಪಡಿಸಿದ್ದಾರೆ.

Karnataka-Gazate

ಕರ್ನಾಟಕ ಸರ್ಕಾರ ಹೊರಡಿಸಿರುವ ಗೆಜೆಟ್ ಅಧಿಸೂಚನೆ

ವಿಜಯನಗರ ಜಿಲ್ಲೆ ರಚನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ PIL ವಜಾ

Published On - 4:28 pm, Mon, 8 February 21

ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ