ಮಾನಸಿಕ ಅಸ್ವಸ್ಥೆಯನ್ನು ಬೆತ್ತಲೆಗೊಳಿಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ತಿಪ್ಪೇಹಳ್ಳಿ ಬಳಿ ಕಲ್ಲು ಎತ್ತಿಹಾಕಿ ಮಾನಸಿಕ ಅಸ್ವಸ್ಥೆಯ ಹತ್ಯೆಯನ್ನು ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಅಬ್ಬೇನಹಳ್ಳಿಯ ನೇತ್ರಾ(30) ಕೊಲೆಯಾದ ಮಹಿಳೆ. ಬೆತ್ತಲೆಗೊಳಿಸಿ ತಲೆಯ ಮೇಲೆ ಕಲ್ಲು ಎತ್ತಿಹಾಕಿ ದುಷ್ಕರ್ಮಿಗಳು ಕೊಂದಿದ್ದಾರೆ.

ಮಾನಸಿಕ ಅಸ್ವಸ್ಥೆಯನ್ನು ಬೆತ್ತಲೆಗೊಳಿಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ
ಮಾನಸಿಕ ಅಸ್ವಸ್ಥೆಯನ್ನು ಬೆತ್ತಲೆಗೊಳಿಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಗಂಗಾಧರ​ ಬ. ಸಾಬೋಜಿ

Updated on: Aug 31, 2024 | 6:28 PM

ವಿಜಯನಗರ, ಆಗಸ್ಟ್​ 31: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಾನಸಿಕ‌ ಅಸ್ವಸ್ಥೆಯನ್ನು ಬೆತ್ತಲೆಗೊಳಿಸಿ ಹತ್ಯೆ (kills) ಮಾಡಿರುವಂತಹ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಬಳಿಯ ತಿಪ್ಪೇಹಳ್ಳಿಯಲ್ಲಿ ನಡೆದಿದೆ. ಚಳ್ಳಕೆರೆ ತಾಲ್ಲೂಕಿನ ಅಬ್ಬೇನಹಳ್ಳಿಯ ನೇತ್ರಾ (30) ಮೃತ ಮಾನಸಿಕ ಅಸ್ವಸ್ಥೆ. ತಿಪ್ಪೇಹಳ್ಳಿ- ಅಬ್ಬೇನಹಳ್ಳಿಯ ಮಧ್ಯದ ನಿರ್ಜನ ಪ್ರದೇಶದಲ್ಲಿ ಹತ್ಯೆ ಮಾಡಲಾಗಿದೆ.

ಶ್ವಾನದಳ, ಬೆರಳಚ್ಚು ಸಿಬ್ಬಂದಿ ಸ್ಥಳದಲ್ಲಿ ತನಿಖೆ ನಡೆಸುತ್ತಿದ್ದಾರೆ. ವಿಜಯನಗರ ಎಸ್​ಪಿ ಶ್ರೀ ಹರಿಬಾಬು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕೊಟ್ಟೂರು ಸಿಪಿಐ ವೆಂಕಟಸ್ವಾಮಿ, ಕಾನಹೊಸಹಳ್ಳಿ ಪಿಎಸ್ಐ ಸಿದ್ದರಾಮಪ್ಪ ಬಿದರಾಣಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಕಾನಾಹೊಸಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಟೋ-ಕ್ಯಾಂಟರ್ ಮುಖಾಮುಖಿ ಡಿಕ್ಕಿ: ಮಹಿಳೆಯರಿಬ್ಬರು ಸಾವು

ಹಾವೇರಿ: ಆಟೋ-ಕ್ಯಾಂಟರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯರಿಬ್ಬರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ ನಡೆದಿದೆ. ಆಟೋದಲ್ಲಿದ್ದ ಇಬ್ಬರು ದುರ್ಮರಣ ಹೊಂದಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಗೆ ರಾಣೆಬೆನ್ನೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನೆಲಮಂಗಲದಲ್ಲಿ ರೋಡ್ ರೇಜ್​​ ಕೇಸ್​​: ಆರೋಪಿಯನ್ನ ಸ್ಥಳ ಮಹಜರು ನಡೆಸಲು ಕರತಂದಾಗ ಗಲಾಟೆ

ನೆಲಮಂಗಲ: ನಗರದಲ್ಲಿ ರೋಡ್ ರೇಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನಿಗೆ ಚಾಕುವಿನಿಂದ ಇರಿದು ಬರ್ಬರ ಕೊಲೆ ಮಾಡಲಾಗಿತ್ತು. ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕರೆತಂದಾಗ ಮೃತ ಮಹಮ್ಮದ್ ರೆಹಮಾನ್ ಕುಟುಂಬಸ್ಥರಿಂದ ರಸ್ತೆ ತಡೆದು ಗಲಾಟೆ ಮಾಡಲಾಗಿದೆ. ಈ ವೇಳೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಇದನ್ನೂ ಓದಿ: 8 ಜನರ ಮುದ್ದಿನ ಹೆಂಡ್ತಿ: ಜೆಡಿಎಸ್ ಕಾರ್ಯಾಧ್ಯಕ್ಷೆಯ ಕರಾಳ ಮುಖವಾಡ ಬಯಲು!

ಕುಟುಂಬಸ್ಥರನ್ನ ಮನ ಹೋಲಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಸೊಂಡೆಕೊಪ್ಪ ಗ್ರಾಮದಲ್ಲಿ ಬಿಗುವಿನ ವಾತಾವರಣ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಡಿಎಆರ್ ಪೊಲೀಸರ ನಿಯೋಜನೆ ಮಾಡಲಾಗಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಚೈನ್ ಸ್ನ್ಯಾಚಿಂಗ್: ಬೈಕ್​ ಹೋಯ್ತು ಈಗ ಕಾರಿನಲ್ಲಿ ಬಂದು ಸರ ಎಗರಿಸ್ತಾರೆ

ಆ.28ರಂದು ರಾತ್ರಿ ಮೊಹಮದ್ ರೆಹಮಾನ್ ಉಲ್ಲಾನನ್ನು ರೇಣುಕಾ ಪ್ರಸಾದ್(33) ಕೊಲೆಗೈದಿದ್ದ. ಬೆಂಗಳೂರು ಉತ್ತರ ತಾಲೂಕಿನ ಸೊಂಡೆಕೊಪ್ಪದಲ್ಲಿ ಘಟನೆ ನಡೆದಿತ್ತು. ಕಾರನ್ನು ಸೈಡ್ ತೆಗೆಯಿರಿ ಅಂದಿದ್ದಕ್ಕೆ ಬೈಕ್​​ನಲ್ಲಿದ್ದ ಯುವಕನ ಎದೆಗೆ ಚಾಕು ಇರಿದು ಭೀಕರ ಕೊಲೆಗೈಯಲಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!