Vijayanagara District: ಉದಯವಾಯಿತು ವಿಜಯನಗರ ಜಿಲ್ಲೆ; ಹೊಸಪೇಟೆಯಲ್ಲಿ ಕರ್ನಾಟಕದ 31ನೇ ಜಿಲ್ಲೆಯ ಉದ್ಘಾಟನೆ

TV9 Digital Desk

| Edited By: Sushma Chakre

Updated on:Oct 02, 2021 | 7:50 PM

Vijayanagara Inauguration : ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅದ್ದೂರಿ ಕಾರ್ಯಕ್ರಮದಲ್ಲಿ ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರವನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

Vijayanagara District: ಉದಯವಾಯಿತು ವಿಜಯನಗರ ಜಿಲ್ಲೆ; ಹೊಸಪೇಟೆಯಲ್ಲಿ ಕರ್ನಾಟಕದ 31ನೇ ಜಿಲ್ಲೆಯ ಉದ್ಘಾಟನೆ
ವಿಜಯನಗರ ನೂತನ ಜಿಲ್ಲೆ ಉದ್ಘಾಟನೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ


ಬಳ್ಳಾರಿ: ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರವನ್ನು ಘೋಷಿಸಲಾಗಿದ್ದು, ನೂತನ ಜಿಲ್ಲೆ ವಿಜಯನಗರವನ್ನು ಇಂದು ಉದ್ಘಾಟನೆ ಮಾಡಲಾಗಿದೆ. ಆರು ತಾಲೂಕುಗಳನ್ನೊಳಗೊಂಡ ನೂತನ ವಿಜಯನಗರ ಜಿಲ್ಲೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರು, ಶಾಸಕರು, ಮಠಾಧೀಶರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ವಿಜಯನಗರ ಜಿಲ್ಲೆಯ ವಿಜಯಸ್ತಂಭವನ್ನು ಅನಾವರಣಗೊಳಿಸಲಾಗಿದೆ.

ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅದ್ದೂರಿ ಕಾರ್ಯಕ್ರಮದಲ್ಲಿ ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರವನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಈ ಮೊದಲು ಬಳ್ಳಾರಿಗೆ ಸೇರಿದ್ದ ಹೊಸಪೇಟೆ, ಕೂಡ್ಲಿಗಿ, ಹಗರಿ ಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ ಮತ್ತು ಹರಪನಹಳ್ಳಿ ತಾಲ್ಲೂಕುಗಳು ವಿಜಯನಗರ ನೂತನ ಜಿಲ್ಲೆಯಲ್ಲಿ ಇರಲಿವೆ.

ಬಳ್ಳಾರಿ ಜಿಲ್ಲೆಯಿಂದ ವಿಭಜನೆ ಮಾಡಿ ವಿಜಯನಗರ ಎಂಬ ಪ್ರತ್ಯೇಕ ಜಿಲ್ಲೆಯನ್ನು ರಚಿಸಬೇಕೆಂಬ ಒತ್ತಾಯ ಹಲವು ವರ್ಷಗಳಿಂದ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೂತನ ಜಿಲ್ಲೆಯನ್ನಾಗಿ ವಿಜಯನಗರವನ್ನು ಘೋಷಿಸಿ ಆದೇಶ ಹೊರಡಿಸಿತ್ತು. ಗಾಂಧಿ ಜಯಂತಿಯ ದಿನವಾದ ಇಂದು ವಿಜಯನಗರ ನೂತನ ಜಿಲ್ಲೆ ಎಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

ಈಗಾಗಲೇ ರಾಜ್ಯ ಸರ್ಕಾರದಿಂದ ವಿಜಯನಗರ ಜಿಲ್ಲೆಗೆ ಹೊಸ ಸಿಇಓ ಆಗಿ ಕೆ.ಎಂ. ಗಾಯತ್ರಿ ಅವರನ್ನು ನೇಮಕ ಮಾಡಲಾಗಿದೆ.ಕೆ.ಎಂ. ಗಾಯತ್ರಿ ಅವರು ಈ ಹಿಂದೆ ಮೈಸೂರಿನ ANSSIRD ನಿರ್ದೇಶಕರಾಗಿದ್ದರು. ಹಾಗೇ, ಐಎಎಸ್ ಅಧಿಕಾರಿ ಅನಿರುದ್ಧ್ ಶ್ರವಣ್ ಅವರನ್ನು ವಿಜಯನಗರ ಜಿಲ್ಲೆಯ ಮೊದಲ ಜಿಲ್ಲಾಧಿಕಾರಿಯಾಗಿ ಮತ್ತು ಎಸ್​ಪಿಯಾಗಿ ಡಾ. ಅರುಣ್​. ಕೆ ಅವರನ್ನು ನೇಮಕ ಮಾಡಲಾಗಿದೆ

ಇದನ್ನೂ ಓದಿ: ಕರ್ನಾಟಕದ 31ನೇ ಜಿಲ್ಲೆಯಾಗಿ ಉದಯಿಸಲಿದೆ ವಿಜಯನಗರ; ಹಂಪಿ ಪರಿಕಲ್ಪನೆಯಲ್ಲಿ ವೇದಿಕೆ ಸಿದ್ಧ

Vijayanagara district: ಇಂದು ಕನ್ನಡ ನಾಡಿಗೆ ಸಂಭ್ರಮ- 6 ತಾಲೂಕಿನ 31ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆಗೆ ಅಧಿಕೃತ ಚಾಲನೆ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada