SSLC ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ ಕುಸಿತ: DDPI, BEO ಅಮಾನತು ಮಾಡಿ ಸಿಎಂ ಆದೇಶ

ಹೊಸಪೇಟೆಯಲ್ಲಿ ನಡೆದ ಕೆಡಿಪಿ ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎಸ್​​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ ಕುಸಿತವಾಗಿದೆ. ಹಾಗಾಗಿ ಡಿಡಿಪಿಐ, ಬಿಇಒ ಅಮಾನತು ಮಾಡಿದ್ದೇನೆ ಎಂದು ಹೇಳಿದ್ದಾರೆ. ಈ ಬಾರಿ ಶೇ 20 ರಷ್ಟು ಗ್ರೇಸ್​ ಅಂಕಗಳನ್ನು ಕೊಟ್ಟರೂ ಈ ಮಟ್ಟಕ್ಕೆ ಕುಸಿದಿದೆ. ನಿಮ್ಮನ್ನು ಏಕೆ ಹೊಣೆ ಮಾಡಬಾರದು ಎಂದು ಪ್ರಶ್ನಿಸಿದ್ದಾರೆ.

SSLC ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ ಕುಸಿತ: DDPI, BEO ಅಮಾನತು ಮಾಡಿ ಸಿಎಂ ಆದೇಶ
SSLC ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ ಕುಸಿತ: DDPI, BEO ಅಮಾನತು ಮಾಡಿ ಸಿಎಂ ಆದೇಶ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jun 21, 2024 | 7:00 PM

ವಿಜಯನಗರ, ಜೂನ್ 21: ಎಸ್​​ಎಸ್​ಎಲ್​ಸಿ (SSLC) ಪರೀಕ್ಷೆ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ ಕುಸಿತವಾಗಿದೆ. ಹಾಗಾಗಿ ಡಿಡಿಪಿಐ, ಬಿಇಒ ಅಮಾನತು ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಹೊಸಪೇಟೆಯಲ್ಲಿ ಕೆಡಿಪಿ ಸಭೆ ಬಳಿಕ ಮಾತನಾಡಿದ ಅವರು, ಎಸ್​​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ 10ನೇ ಸ್ಥಾನದಲ್ಲಿದ್ದ 27ಕ್ಕೆ ಕುಸಿದಿದೆ. ಜಿಲ್ಲೆಯ ಶೇಕಡಾವಾರು ಪ್ರಮಾಣ ಕುಸಿತವಾಗಿದೆ. ಇದಕ್ಕೆ ಸಿಇಒ ಹೊಣೆ ಆಗಿದ್ದರಿಂದ ನೋಟಿಸ್ ಜಾರಿ ಮಾಡಿ ಅಮಾನತು ಮಾಡಿದ್ದೇನೆ ಎಂದು ಹೇಳಿದ್ದಾರೆ.

ಈ ಬಾರಿ ಶೇ 20 ರಷ್ಟು ಗ್ರೇಸ್​ ಅಂಕಗಳನ್ನು ಕೊಟ್ಟರೂ ಈ ಮಟ್ಟಕ್ಕೆ ಕುಸಿದಿದೆ ಎಂದರೆ ನಿಮ್ಮ ಸಾಧನೆ ಏನು? ಇದಕ್ಕೆ ನಿಮ್ಮನ್ನು ಏಕೆ ಹೊಣೆ ಮಾಡಬಾರದು ಎಂದು ಸಿಎಂ ಪ್ರಶ್ನಿಸಿದ್ದಾರೆ. ಇನ್ನು ಮುಂದಿನ ವರ್ಷ ಕೃಪಾಂಕ ಕೊಡಬಾರದು ಎಂದು ಹೇಳಿದ್ದೇನೆ ಎಂದರು.

2 ಜಿಲ್ಲೆಗಳ ಡಿಎಂಎಫ್​ ಫಂಡ್ ಸ್ವಲ್ಪ ಗೊಂದಲವಿದೆ

ಬಳ್ಳಾರಿ, ವಿಜಯನಗರ ಜಿಲ್ಲೆಯ ಫಂಡ್​ ಬಗ್ಗೆ ಗೊಂದಲ ವಿಚಾರವಾಗಿ ಪ್ರತಿಕ್ರಿಯಿಸಿದ್ದು, 2 ಜಿಲ್ಲೆಗಳ ಡಿಎಂಎಫ್​ ಫಂಡ್ ಸ್ವಲ್ಪ ಗೊಂದಲವಿದೆ. ವಿಜಯನಗರದವರು ಶೇ.28ರಷ್ಟು ಬರಬೇಕು ಅಂತಿದ್ದಾರೆ. ಆದರೆ ಬಳ್ಳಾರಿ ಜಿಲ್ಲೆಯವರು ಇದನ್ನು ಒಪ್ಪುತ್ತಿಲ್ಲ. ಅದನ್ನು ಸರಿಯಾಗಿ ಪರಿಶೀಲನೆ ಮಾಡಲು ಹೇಳಿದ್ದೇನೆ. ಎಲ್ಲರೂ ಕುಳಿತು ಸರಿಯಾಗಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: SSLC ಫಲಿತಾಂಶ ಪ್ರಕಟ: ಮತ್ತೆ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೊನೆ ಸ್ಥಾನ

ಕೆರೆಗಳ ಹುಳೆತ್ತುವ ಕಾರ್ಯ ಮಾಡಬೇಕು. ಮಳೆ ನೀರು ಸರಾಗವಾಗಿ ಕೆರೆಗಳಿಗೆ ಹೋಗುವಂತೆ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ. ಕೆರೆ ಒತ್ತುವರಿಯಾಗಿದ್ದರೆ ತೆರವುಗೊಳಿಸುವಂತೆ ಸೂಚನೆ ನೀಡಿದ್ದೇನೆ. ಕೆರೆಗಳು ಬಹಳ ಮುಖ್ಯ ಇದೆ ಅದನ್ನ ಸರಿಪಡಿಸಬೇಕು ಎಂದರು.

ಇದನ್ನೂ ಓದಿ: SSLC ಮೌಲ್ಯಮಾಪನ ಎಡವಟ್ಟು; ಮರು ಮೌಲ್ಯಮಾಪನ ವೇಳೆ ತಾಲೂಕಿಗೆ ಟಾಪರ್, ಇಷ್ಟಪಟ್ಟ ಕಾಲೇಜು ಸಿಗಲಿಲ್ಲವೆಂದು ವಿದ್ಯಾರ್ಥಿನಿ ಅಳಲು

ನವಲಿ ಸಮಾನಾಂತರ ಜಲಾಶಯ ನಿರ್ಮಾಣ ವಿಚಾರವಾಗಿ ಮಾತನಾಡಿದ್ದು, ಆಂಧ್ರಪ್ರದೇಶ, ತೆಲಂಗಾಣದವರ ಪಾಲು ಇದೆ. ಹೀಗಾಗಿ ಅವರ ಜೊತೆ ಮಾತನಾಡುತ್ತೇವೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!