ವಿಜಯನಗರ: ಕೆಎಸ್​​ಆರ್​ಟಿಸಿ ಬಸ್​ ಪಲ್ಟಿ: ಮಹಿಳೆ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನಲ್ಲಿ ಕೆಎಸ್​​ಆರ್​​ಟಿಸಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಪ್ಪತ್ತಕ್ಕೂ ಹೆಚ್ಚು ಜನ ಗಾಯಗೊಂಡಿರುವಂತಹ ಘಟನೆ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಶಾಲಾ ಮಕ್ಕಳಿದ್ದ ಆಟೋಗೆ ಪಿಕಪ್​ ವಾಹನ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ಮೃತಪಟ್ಟಿರುವಂತಹ ಘಟನೆ ಮಂಗಳೂರಿನಲ್ಲಿ ನಡೆದಿದೆ.

ವಿಜಯನಗರ: ಕೆಎಸ್​​ಆರ್​ಟಿಸಿ ಬಸ್​ ಪಲ್ಟಿ: ಮಹಿಳೆ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
ವಿಜಯನಗರ: ಕೆಎಸ್​​ಆರ್​ಟಿಸಿ ಬಸ್​ ಪಲ್ಟಿ: ಮಹಿಳೆ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ಗಂಗಾಧರ​ ಬ. ಸಾಬೋಜಿ

Updated on: Oct 24, 2024 | 5:08 PM

ವಿಜಯನಗರ, ಅಕ್ಟೋಬರ್​ 24: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲೇ ಕೆಎಸ್​​ಆರ್​ಟಿಸಿ (KSRTC) ಬಸ್​ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಸತ್ತೂರು ಗ್ರಾಮದ ಬಳಿ ನಡೆದಿದೆ. ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಸುತ್ತೂರು ಗ್ರಾಮದ ಹನುಮಕ್ಕ (45) ಮೃತ ಮಹಿಳೆ. ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ಬಸ್​ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಣಿಕರಿಗೆ ಗಾಯಗಳಾಗಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ದಾವಣಗೆರೆಯಿಂದ ಹರಪ್ಪನಹಳ್ಳಿ ಕಡೆ ಕೆಎಸ್​ಆರ್​ಟಿಸಿ ಬಸ್​ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ.

ಶಾಲಾ ಮಕ್ಕಳಿದ್ದ ಆಟೋಗೆ ಪಿಕಪ್​ ವಾಹನ ಡಿಕ್ಕಿ: ವಿದ್ಯಾರ್ಥಿನಿ ಸಾವು

ಮಂಗಳೂರು: ಶಾಲಾ ಮಕ್ಕಳಿದ್ದ ಆಟೋಗೆ ಪಿಕಪ್​ ವಾಹನ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ಸಾವನ್ನಪ್ಪಿರುವಂತಹ ಘಟನೆ ನಗರದ ಹೊರವಲಯದ ಬೆಳ್ಮ ಗ್ರಾಮದ ಕಲ್ಲಪಾದೆ ಬಳಿ ನಡೆದಿದೆ. ದೇರಳಕಟ್ಟೆ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಮತ್ತು ಬಡಕಬೈಲು ಮೊಹಮ್ಮದ್‌ ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ(10) ಮೃತ ವಿದ್ಯಾರ್ಥಿನಿ.

ಇದನ್ನೂ ಓದಿ: 38 ಲಕ್ಷ ರೂ ಮೌಲ್ಯದ 200 ಮೊಬೈಲ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರಿಸಿದ ಕಲಬುರಗಿ ಪೊಲೀಸ್

ಮದಕ ಕಡೆಯಿಂದ ದೇರಳಕಟ್ಟೆ ಕಡೆಗೆ ಆಟೋ ಬರುತ್ತಿತ್ತು. ಈ ವೇಳೆ ಕಲ್ಲಪಾದೆ ಬಳಿ ಎದುರಿನಿಂದ ವೇಗವಾಗಿ ಬಂದು ಪಿಕಪ್‌ ವಾಹನ ಡಿಕ್ಕಿ ಹೊಡೆದಿದೆ. ಆಟೋದಲ್ಲಿದ್ದ ಆಯಿಷಾ ಸಾವನ್ನಪ್ಪಿದ್ದರೆ, 4 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಾಳಿವೆ. ಗಾಯಾಳುಗಳಿಗೆ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಬೈಕ್​, ಮಿನಿ ಲಾರಿ ಮಧ್ಯೆ ಅಪಘಾತ: ಯುವಕರಿಬ್ಬರು ಸಾವು

ವಿಜಯಪುರ: ಬೈಕ್ ಹಾಗೂ ಮಿನಿ ಲಾರಿ ಮಧ್ಯೆ ಅಪಘಾತ ಸಂಭವಿಸಿದ್ದು, ಬೈಕ್​ನಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವಂತಹ ಘಟನೆ ವಿಜಯಪುರ ತಾಲೂಕಿನ ಭೂತನಾಳ ತಾಂಡಾ ಬಳಿ ನಡೆದಿದೆ. ಅನೀಲ ರೂಪಸಿಂಗ ಚವ್ಹಾಣ (35) ಹಾಗೂ ಶಿವಾಜಿ ಚವ್ಹಾಣ (40) ಮೃತ ಯುವಕರು.

ಇದನ್ನೂ ಓದಿ: ಬಾರ್​ನಲ್ಲಿ ಸೌಂಡ್ ಮಾಡಬೇಡ ಎಂದಿದ್ದಕ್ಕೆ ಬಿತ್ತು ಹೆಣ: ಕೊಲೆಗೈದು ರೂಂನಲ್ಲಿ ನಿದ್ರೆ ಮಾಡುತ್ತಿದ್ದ ಹಂತಕರ ಬಂಧನ

ಅನೀಲ ಹಾಗೂ ಶಿವಾಜಿ ಚವ್ಹಾಣ ಕೆಲಸಕ್ಕೆ ಹೊರಟಿದ್ದರು. ಓವರ್ ಟೆಕ್ ಮಾಡುವ ಭರದಲ್ಲಿ ಮಿನಿ ಲಾರಿ ಚಾಲಕ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಆದರ್ಶ ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್