AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ: ಮಲಗಿದ್ದ ಮಗು ಮೇಲೆ ಕಲ್ಲು ಬಿದ್ದು ದುರ್ಮರಣ; ಸ್ಥಳಕ್ಕೆ ಸಚಿವ ಜಮೀರ್ ಅಹ್ಮದ್ ಭೇಟಿ

ಕಲ್ಲು ಬಿದ್ದು ಮಗು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಚಿವ ಜಮೀರ್ ಅಹ್ಮದ್ ಹಾಗೂ ಶಾಸಕ ಶ್ರೀನಿವಾಸ್ ಭೇಟಿ ನೀಡಿ, ಮೃತ ಮಗು ಪೋಷಕರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಸಚಿವ ಜಮೀರ್ ವೈಯಕ್ತಿಕ ಧನಸಹಾಯ ಮಾಡಿದರು.

ವಿಜಯನಗರ: ಮಲಗಿದ್ದ ಮಗು ಮೇಲೆ ಕಲ್ಲು ಬಿದ್ದು ದುರ್ಮರಣ; ಸ್ಥಳಕ್ಕೆ ಸಚಿವ ಜಮೀರ್ ಅಹ್ಮದ್ ಭೇಟಿ
ಪ್ರಾತಿನಿಧಿಕ ಚಿತ್ರ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Sep 26, 2023 | 9:33 PM

Share

ವಿಜಯನಗರ, ಸೆ.26: ಮಲಗಿದ್ದ ಮಗು ಮೇಲೆ ಕಲ್ಲು ಬಿದ್ದು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ವಿಜಯನಗರ (Vijayanagara) ಜಿಲ್ಲೆಯ ಕೂಡ್ಲಿಗಿ(Kudligi)ತಾಲೂಕಿನ ರಾಯಪುರ ಗ್ರಾಮದಲ್ಲಿ ನಡೆದಿದೆ. ತೇಜಸ್(4) ಮೃತ ರ್ದುದೈವಿ. ಶಾಂತಕುಮಾರ, ಮಲ್ಲೇಶ್ವರಿ ದಂಪತಿ ಕಡಪದಿಂದ ಮನೆ ಕಟ್ಟಿಕೊಂಡಿದ್ದರು. ಮನೆ ಪಕ್ಕದಲ್ಲಿ ತೆಂಗಿನ ಮರ ಇದ್ದು, ಎಮ್ಮೆ ಮನೆ ಪಕ್ಕದ ತೆಂಗಿನ ಮರದ ನಡುವೆ ಸಿಲುಕಿದೆ. ಈ ವೇಳೆ ಎಮ್ಮೆ ಉಜ್ಜಿದ ರಭಸದ ಪರಿಣಾಮ ಕಡಪದ ಗೊಡೆ ಬಿದ್ದು ಈ ದುರ್ಘಟನೆ ನಡೆದಿದೆ.

ಸ್ಥಳಕ್ಕೆ ಸಚಿವ ಜಮೀರ್​ ಭೇಟಿ

ಇನ್ನು ಕಡಪ ಕಲ್ಲು ಬಿದ್ದು ಮಗು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಚಿವ ಜಮೀರ್ ಅಹ್ಮದ್ ಹಾಗೂ ಶಾಸಕ ಶ್ರೀನಿವಾಸ್ ಭೇಟಿ ನೀಡಿ, ಮೃತ ಮಗು ಪೋಷಕರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಸಚಿವ ಜಮೀರ್ ವೈಯಕ್ತಿಕ ಧನಸಹಾಯ ಮಾಡಿದರು. ಈ ಕುರಿತು ಗುಡೇಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ತುಮಕೂರು: ಜ್ವರವೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ 5 ವರ್ಷದ ಹೆಣ್ಣು ಮಗು ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದ ಪೋಷಕರು

ಇನೋವಾ ಕಾರು ಡಿಕ್ಕಿ, ಆಟೋದಲ್ಲಿ ತೆರಳುತ್ತಿದ್ದ ವೃದ್ಧೆ ದುರ್ಮರಣ

ಬೆಳಗಾವಿ: ಇನೋವಾ ಕಾರು ಹಾಗೂ ಆಟೋ ನಡುವೆ ಡಿಕ್ಕಿಯಾಗಿ ಆಟೋದಲ್ಲಿ ತೆರಳುತ್ತಿದ್ದ ವೃದ್ಧೆ ದುರ್ಮರಣ ಹೊಂದಿದ್ದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಬಸವೇಶ್ವರನಗರದಲ್ಲಿ ನಡೆದಿದೆ. ರಾಜೀವ್​ನಗರದ ನಿವಾಸಿ ಲಕ್ಷ್ಮೀ ಕಟ್ಟಿ(66) ಸ್ಥಳದಲ್ಲೇ ಸಾವನ್ನಪ್ಪಿದ ವೃದ್ಧೆ. ಇನ್ನು ಆಟೋ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದ ನಂತರ ಇನೋವಾ ಕಾರು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಈ ಕುರಿತು ಚಿಕ್ಕೋಡಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್​ನಿಂದ ಬಿದ್ದ ಸವಾರ

ಬೆಂಗಳೂರು: ಸವಾರನೊಬ್ಬ ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್​ನಿಂದ ಬಿದ್ದ ಘಟನೆ ನಗರದ ಮಹದೇವಪುರದ ದೊಡ್ಡನೆಕ್ಕುಂದಿಯಲ್ಲಿ ನಡೆದಿದೆ. ಕಾರಿನ ಕ್ಯಾಮಾರದಲ್ಲಿ ಬೈಕ್ ಸವಾರ ಬಿಳುವ ದೃಶ್ಯ ಸೆರೆಯಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೈಕ್ ಸವಾರ ನೆಲಕ್ಕೆ ಬಿಳುವ ದೃಶ್ಯ ಕಾರಿನ ಡ್ಯಾಶ್ ಬೋರ್ಡ್ ಕ್ಯಾಮಾರದಲ್ಲಿ ಸೆರೆಯಾಗಿದೆ. ಇನ್ನು ವಿಡಿಯೋ ಸಮೇತ ಸಾಮಾಜಿಕ ಜಾಲತಾಣದಲ್ಲಿ ಪೊಲೀಸರಿಗೆ ಟ್ಯಾಗ್ ಮಾಡಿ, ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸುವಂತೆ ಮನವಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ