ಹಂಪಿ ಸ್ಮಾರಕದ ಮೇಲೇರಿ ನೃತ್ಯ ಮಾಡಿ ವಿಡಿಯೋ ಅಪ್ಲೋಡ್ ಮಾಡಿದ್ದ ಆರೋಪಿ ಬಂಧನ

ಹಂಪಿ ಸ್ಮಾರಕದಲ್ಲಿ ನೃತ್ಯ ಮಾಡಿ ವಿಡಿಯೋ ಅಪ್ಲೋಡ್ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹಂಪಿ ಪ್ರವಾಸಿ ಠಾಣೆ ಪೊಲೀಸರು ಯಶ್ವಸಿಯಾಗಿದ್ದಾರೆ.

ಹಂಪಿ ಸ್ಮಾರಕದ ಮೇಲೇರಿ ನೃತ್ಯ ಮಾಡಿ ವಿಡಿಯೋ ಅಪ್ಲೋಡ್ ಮಾಡಿದ್ದ ಆರೋಪಿ ಬಂಧನ
ದೀಪ‌ಕ್ ಗೌಡ
Follow us
TV9 Web
| Updated By: ಆಯೇಷಾ ಬಾನು

Updated on:Mar 04, 2023 | 11:20 AM

ವಿಜಯನಗರ: ವಿಶ್ವಪ್ರಸಿದ್ಧ ಹಂಪಿ ಜೈನ್ ದೇವಾಲಯದ(Hampi Jain Temple) ಸ್ಮಾರಕದ ಮೇಲೇರಿ ಡಾನ್ಸ್ ಮಾಡಿ, ಅದರ ವಿಡಿಯೋ ಅನ್ನು ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ್ದ ಯುವಕನನ್ನು ಹಂಪಿ ಪ್ರವಾಸಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ.

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕಾಳೇನಹಳ್ಳಿಯ ದೀಪ‌ಕಗೌಡನೇ ಬಂಧಿತ ಆರೋಪಿಯಾಗಿದ್ದು ದೀಪಕಗೌಡ ಇತ್ತೀಚೆಗೆ ಹಂಪಿಗೆ ಬಂದಿದ್ದ ವೇಳೆ ಹಂಪಿಯ ಜೈನ್ ದೇವಾಲಯದ ಮೇಲೆ ಹಾಗೂ ಅದರ ಸುತ್ತಮುತ್ತಲಿನ ಪರಿಸರದಲ್ಲಿ ವಿಡಿಯೋ ಚಿತ್ರೀಕರಿಸಿ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದ. ಈ ಸಂಬಂಧ ಫೆ. 28ರಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಸಹಾಯಕ ಸಂರಕ್ಷಣಾಧಿಕಾರಿ ಎಂ.ಸಿ. ಸುನೀಲ್‌ಕುಮಾರ್ ಅವರು ಹಂಪಿ ಪ್ರವಾಸಿ ಠಾಣೆಗೆ ದೂರು ಕೊಟ್ಟಿದ್ದರು. ಆ ದೂರು ಆಧರಿಸಿ ದೀಪಕ್‌ಗೌಡನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್. ತಿಳಿಸಿದ್ದಾರೆ.

ಇದನ್ನೂ ಓದಿ: Hampi: ರೀಲ್ಸ್​ಗಾಗಿ ಹಂಪಿ ಸ್ಮಾರಕ ಏರಿ ಪ್ರವಾಸಿಯ ನೃತ್ಯ; ಪ್ರಕರಣ ದಾಖಲಿಸಿದ ಪೊಲೀಸರು, ಆರೋಪಿಗಾಗಿ ಹುಡುಕಾಟ

‘ಹಂಪಿಯಲ್ಲಿರುವ ಸ್ಮಾರಕಗಳನ್ನು ಸಂರಕ್ಷಿತ ಸ್ಮಾರಕಗಳೆಂದು ಕೇಂದ್ರ ಸರ್ಕಾರ ಘೋಷಿಸಿದೆ. ಇಲ್ಲಿಗೆ ಬರುವ ಪ್ರವಾಸಿಗರು ಸ್ಮಾರಕಗಳನ್ನು ಹಾನಿಗೊಳಿಸುವುದು, ವಿರೂಪಗೊಳಿಸಿದರೆ ಎರಡು ವರ್ಷ ಜೈಲು ಶಿಕ್ಷೆ ಇದೆ’ ಎಂದು ತಿಳಿಸಿದ್ದಾರೆ. ದೀಪಕ್‌ಗೌಡ, ಬೇಲೂರು, ಹಳೆಬೀಡು, ಪಟ್ಟದಕಲ್ಲು, ಬಾದಾಮಿ ಸೇರಿದಂತೆ ಇತರೆ ಸ್ಮಾರಕಗಳ ಬಳಿಯೂ ಇದೇ ರೀತಿ ವಿಡಿಯೋ ಚಿತ್ರೀಕರಿಸಿದ್ದ. ಹಂಪಿಯಲ್ಲಿ ನಡೆದ ಘಟನೆ ನಂತರ ಟೀಕೆ ವ್ಯಕ್ತವಾಗಿತ್ತು. ಪೊಲೀಸರಿಗೆ ದೂರು ಸಲ್ಲಿಕೆಯಾಗಿದ್ದ ನಂತರ ಕ್ಷಮೆ ಕೂಡ ಯಾಚಿಸಿದ್ದ. ಘಟನೆಯ ಕುರಿತು ಹೊಸಪೇಟೆ ತಾಲೂಕಿನ ಹಂಪಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ

ಹಂಪಿ ವಿಶ್ವ ಪರಂಪರೆ ತಾಣವಾಗಿದ್ದು, ಮತ್ತು ಇಲ್ಲಿರುವ ಎಲ್ಲಾ ಸ್ಮಾರಕಗಳು ಸಂರಕ್ಷಿತ ಸ್ಮಾರಕಗಳೆಂದು ಭಾರತ ಸರ್ಕಾರವು ಈಗಾಗಲೇ ರಾಜ್ಯ ಪತ್ರದಲ್ಲಿ ಘೋಷಣೆ ಮಾಡಿರುವುದರಿಂದ ಪ್ರವಾಸಕ್ಕೆ ಹಾಗೂ ವೀಕ್ಷಣೆಗೆ ಬರುವ ಪ್ರವಾಸಿಗರು ಇಲ್ಲಿರುವ ಸ್ಮಾರಕಗಳನ್ನು ಹಾನಿಗೊಳಿಸುವುದು, ವಿರೂಪಗೊಳಿಸುವುದು ದುರುಪಯೋಗ ಪಡಿಸಿಕೊಳ್ಳುವುದು, ಮಾಡಿದರೆ The Ancient Monuments & Arch, Sites & Remains Act 1958 d ಅಪರಾಧವಾಗುತ್ತದೆ. ಸದರಿ ಅಪರಾಧಕ್ಕೆ 02 ವರ್ಷಗಳ ವರೆಗೆ ಜೈಲು ಶಿಕ್ಷೆ ಮತ್ತು ಒಂದು ಲಕ್ಷ ರೂಪಾಯಿ ದಂಡ ಇರುತ್ತದೆ ಎಂದು ಜಿಲ್ಲಾಡಳಿತ ಪ್ರವಾಸಿಗರಿಗೆ ಎಚ್ಚರಿಕೆ ನೀಡಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:12 am, Sat, 4 March 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ