ವಿಜಯನಗರ: ಸತತ ಎರಡು ಬಾರಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಮುಂದೂಡಿಕೆ; ಆಕ್ರೋಶಗೊಂಡ ಸದಸ್ಯರಿಂದ ಅಹೋರಾತ್ರಿ ಧರಣಿ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ತೊಗರಿಕಟ್ಟೆ ಗ್ರಾಮ ಪಂಚಾಯತಿಯಲ್ಲಿ ಆರೋಗ್ಯದ ನೆಪ ಹೇಳಿ ಚುನಾವಣೆ ನಡೆಸದೆ ಅಧಿಕಾರಿಗಳು ಮುಂದೂಡಿದ್ದಾರೆ. ಹೌದು ಒಂದಲ್ಲ, ಎರಡು ಬಾರಿ ಚುನಾವಣೆ ಮಂದೂಡಿದ್ದು, ಸದಸ್ಯರನ್ನು ಆಕ್ರೋಶಗೊಳ್ಳುವಂತೆ ಮಾಡಿದೆ. ಈ ಹಿನ್ನಲೆ 11 ಜನ ಸದಸ್ಯರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದಾರೆ.

ವಿಜಯನಗರ: ಸತತ ಎರಡು ಬಾರಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಮುಂದೂಡಿಕೆ; ಆಕ್ರೋಶಗೊಂಡ ಸದಸ್ಯರಿಂದ ಅಹೋರಾತ್ರಿ ಧರಣಿ
ಹರಪನಹಳ್ಳಿ ತಾಲೂಕಿನ ತೊಗರಿಕಟ್ಟೆ ಗ್ರಾಮ ಪಂಚಾಯತಿ
Follow us
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 08, 2023 | 3:20 PM

ವಿಜಯನಗರ, ಆ.8: ಜಿಲ್ಲೆಯ ಹರಪನಹಳ್ಳಿ(Harapanahalli) ತಾಲೂಕಿನ ತೊಗರಿಕಟ್ಟೆ ಗ್ರಾಮ ಪಂಚಾಯತಿಯಲ್ಲಿ ಆರೋಗ್ಯದ ನೆಪ ಹೇಳಿ ಚುನಾವಣೆ ನಡೆಸದೆ ಅಧಿಕಾರಿಗಳು ಮುಂದೂಡಿದ್ದಾರೆ. ಹೌದು ಒಂದಲ್ಲ, ಎರಡು ಬಾರಿ ಚುನಾವಣೆ ಮಂದೂಡಿದ್ದು, ಸದಸ್ಯರನ್ನು ಆಕ್ರೋಶಗೊಳ್ಳುವಂತೆ ಮಾಡಿದೆ. ಆಗಸ್ಟ್​ 2ರಂದು ನಡೆಯಬೇಕಿದ್ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ‌ಯನ್ನ, ನಿನ್ನೆ ನಡೆಸಲು ಮುಂದಾಗಿದ್ದರು. ಅದರಂತೆ ನಿನ್ನೆಯೂ ಸದಸ್ಯರು ಸಕಾಲಕ್ಕೆ ಹಾಜರಾದರೂ, ಆದರೂ ಕೂಡ ಸಿಬ್ಬಂದಿಗಳು ಚುನಾವಣೆ ನಡೆಸಲಿಲ್ಲ. ಈ ಹಿನ್ನಲೆ ಆಕ್ರೋಶಗೊಂಡ ಸದಸ್ಯರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಉದ್ದೇಶಪೂರ್ವಕವಾಗಿ ಚುನಾವಣೆ ನಡೆಸುತ್ತಿಲ್ಲ ಎಂದು ಆರೋಪಿಸಿ ಸತ್ಯಾಗ್ರಹ ನಡೆಸಿದ್ದಾರೆ. ಪರಿಣಾಮ ತೊಗರಿಕಟ್ಟೆ ಗ್ರಾಮ ಪಂಚಾಯಿತಿ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ದಬ್ಬೇಘಟ್ಟ ಗ್ರಾಮ ಪಂಚಾಯತಿಯಲ್ಲಿ ಜುಲೈ 23 ರಂದು ಗ್ರಾ‌ಮ ಪಂಚಾಯತಿ ಅಧ್ಯಕ್ಷ ಚುನಾವಣೆಯಲ್ಲಿ ಸೋತ ಹಿನ್ನಲೆ ಸದಸ್ಯೆಯೊಬ್ಬರು ಮತ್ತೋರ್ವ ಸದಸ್ಯ ಮಂಜುನಾಥ್ ಎಂಬುವವರ ಮೇಲೆ ಚಪ್ಪಲಿಯಿಂದ ಹೊಡೆದು, ಅವಾಚ್ಯ ಶಬ್ಧಗಳಿಂದ ನಿಂದಿಸಿ ಶರ್ಟ್ ಹರಿದ ಘಟನೆ ನಡೆದಿತ್ತು. ಅಧ್ಯಕ್ಷ ಸ್ಥಾನಕ್ಕೆ ಸೋತ ಹತಾಶೆಯಲ್ಲಿ ಸದಸ್ಯೆ ಸುಧಾ ಜಿ.ಎನ್. ಎಂಬುವವರು ‘ನನಗೆ ಮತ ಹಾಕಿಲ್ಲ, ಹಾಗಾಗಿ ನಾನು ಸೋತಿದ್ದೇನೆಂದು ಗ್ರಾಮ ಪಂಚಾಯತಿ ಕಚೇರಿ ಒಳಗೆ ನುಗ್ಗಿ ಹಲ್ಲೆ ಮಾಡಿದ್ದರು. ಬಳಿಕ ಸುಧಾ ವಿರುದ್ಧ ಸ್ಪರ್ಧಿಸಿದ್ದ ಛಾಯಮಣಿ ಎಂಬುವವರು ಅಧ್ಯಕ್ಷೆಯಾಗಿ ಗೆಲುವು ಕಂಡಿದ್ದರು. ಹಲ್ಲೆ ಮಾಡಿದ ನಂತರ ಸುಧಾ‌ ತಲೆ ಮರೆಸಿಕೊಂಡಿದ್ದರು. ಆ ಕುರಿತು ಸುಧಾ ವಿರುದ್ಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:ಗ್ರಾ.ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ; ಸಿನಿಮೀಯ ರೀತಿಯಲ್ಲಿ ಹೋಟೆಲ್​ಗೆ ನುಗ್ಗಿ ಸದಸ್ಯರನ್ನು ಕಿಡ್ನ್ಯಾಪ್​​ ಮಾಡಿದ ಆರೋಪ

ಜುಲೈ 19 ರಂದು ಇದೇ ರೀತಿ ಘಟನೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಕ್ಷೇತ್ರವಾದ ಕೊರಟಗೆರೆ ತಾಲೂಕಿನ ಹುಲಿಕುಂಟೆ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ವೇಳೆ ಗ್ರಾ.ಪಂಚಾಯತಿ ಸದಸ್ಯ ಡಿ.ಎಲ್.ಮಲ್ಲಯ್ಯ ಮೇಲೆ ಕೊರಟಗೆರೆ ಪಿಡಬ್ಯುಡಿ ಪ್ರಥಮ ದರ್ಜೆ ಸಹಾಯಕನಾಗಿರುವ ಚಿಕ್ಕಣ್ಣ ಹಲ್ಲೆ ನಡೆಸಿದ್ದರು. ‘ನನ್ನ ಮತ ನನ್ನ ಹಕ್ಕು ಎಂದು ಹೇಳಿದ ವ್ಯಕ್ತಿಗೆ, ಸರ್ಕಾರಿ ಅಧಿಕಾರಿ ಮನ ಬಂದಂತೆ ಥಳಿಸಿ ದರ್ಪ ಮೆರೆದಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:19 pm, Tue, 8 August 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ