ನಿನ್ನೆ ಹಾಲ್ ಟಿಕೆಟ್ ನೀಡಿದ ಕಾಲೇಜ್ ಆಡಳಿತ ಮಂಡಳಿ, ಇಂದು ಪರೀಕ್ಷೆ ಬರೆಯಲು ಬಂದ 48 ವಿದ್ಯಾರ್ಥಿಗಳನ್ನ ಹೊರ ಹಾಕಿದ ಸಿಬ್ಬಂದಿ

ಹಾಜರಾತಿ ಕಡಿಮೆ ಇದೆ ಎಂಬ ಕಾರಣಕ್ಕೆ ಹಾಲ್ ಟಿಕೆಟ್ ಇದ್ದರೂ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಹೆಚ್​ಪಿಎಸ್ ಕಾಲೇಜಿನ 48 ವಿದ್ಯಾರ್ಥಿಗಳಿಗೆ ಪಿಯುಸಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಕಾಲೇಜು ಸಿಬ್ಬಂದಿ.

ನಿನ್ನೆ ಹಾಲ್ ಟಿಕೆಟ್ ನೀಡಿದ ಕಾಲೇಜ್ ಆಡಳಿತ ಮಂಡಳಿ, ಇಂದು ಪರೀಕ್ಷೆ ಬರೆಯಲು ಬಂದ 48 ವಿದ್ಯಾರ್ಥಿಗಳನ್ನ ಹೊರ ಹಾಕಿದ ಸಿಬ್ಬಂದಿ
ಪಿಯು ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳು
Follow us
ಆಯೇಷಾ ಬಾನು
|

Updated on:Mar 09, 2023 | 1:11 PM

ವಿಜಯನಗರ: ಪರೀಕ್ಷೆ ಅನ್ನೋದು ಪ್ರತಿಯೊಬ್ಬ ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ತರ ಘಟ್ಟ. ಇಂದಿನಿಂದ(ಮಾರ್ಚ್ 09) 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ(PUC Exam) ಆರಂಭವಾಗಿದೆ. ಆದ್ರೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದ ಹೆಚ್​ಪಿಎಸ್ ಕಾಲೇಜಿನ 48 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿಲ್ಲ. ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳನ್ನ ಕಾಲೇಜು ಸಿಬ್ಬಂದಿ ಹೊರ ಹಾಕಿದ್ದಾರೆ. ಸದ್ಯ 48 ವಿದ್ಯಾರ್ಥಿಗಳು ಪಿಯು ಪರೀಕ್ಷೆಯಿಂದ ವಂಚಿತರಾಗಿದ್ದಾರೆ.

ರಾಜ್ಯಾದ್ಯಂತ ಇಂದಿನಿಂದ ಪಿಯು ಪರೀಕ್ಷೆ ಆರಂಭವಾಗಿದೆ. ಈ ಬಾರಿ ಒಟ್ಟು 7 ಲಕ್ಷದ 26 ಸಾವಿರದ 195 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ ನಡೆಯಲಿದೆ. ಆದ್ರೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ಇರುವ ಹೆಚ್​ಪಿಎಸ್ ಕಾಲೇಜಿನ 48 ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಕಾಲೇಜು ಆಡಳಿತ ಮಂಡಳಿಯಿಂದ ನಿನ್ನೆಯೇ ಹಾಲ್ ಟಿಕೆಟ್ ಪಡೆದು ಇಂದು ಮೊದಲ ದಿನದ ಕನ್ನಡ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳನ್ನ ಹೊರ ಹಾಕಲಾಗಿದೆ. ಹೀಗಾಗಿ ಹರಪನಹಳ್ಳಿ ಸರ್ಕಾರಿ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರದ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಹಾಜರಾತಿ ಕಡಿಮೆ ಇದೆ ಈ ಹಿನ್ನೆಲೆ ಪರೀಕ್ಷೆ ಬರೆಯಲು ಅನುಮತಿ‌ಕೊಡಲ್ಲ ಎಂದು ಕಾಲೇಜು ಸಿಬ್ಬಂದಿ ಕಾರಣ ನೀಡಿದ್ದು ಪರೀಕ್ಷೆಗೆ ಅನುಮತಿ‌ ಇಲ್ಲ ಎಂದು ಹಾಲ್ ಟಿಕೆಟ್ ಕೊಡುವಾಗಲೇ ಹೇಳಬೇಕಿತ್ತು ಎಂದು ಪೋಷಕರು, ಸಾರ್ವಜನಿಕರು ಕಾಲೇಜು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಸೂಕ್ತ ಕ್ರಮ ಕೈಗೊಂಡು ಪರೀಕ್ಷೆ ಬರೆಯಲು ಜೊತೆಗೆ ಮುಂದಿನ ವಿಷಯಗಳ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡುವಂತೆ ವಿದ್ಯಾರ್ಥಿಗಳು ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ; ಹಿಜಾಬ್​ಗೆ ನಿಷೇಧ, ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ, ವಿಶೇಷ ಜಾಗೃತದಳ ನಿಯೋಜನೆ

20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆ

ಈ ಹಿಂದೆ 5 ಅಥವಾ 6 ಬಹು ಆಯ್ಕೆಯ ಪ್ರಶ್ನೆಗಳನ್ನು ಕೇಳಲಾಗುತ್ತಿತ್ತು. ಆದ್ರೆ ಈ ಬಾರಿ 20 ಅಂಕಗಳಿಗೆ ಮಲ್ಟಿಪಲ್ ಚಾಯ್ಸ್ ಇರಲಿದೆ. ಎಲ್ಲ ವಿಷಯಗಳಲ್ಲೂ 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು ಇರಲಿದೆ. ಮೌಲ್ಯಮಾಪನ ವ್ಯವಸ್ಥೆಯಲ್ಲಿಯೂ ಬದಲಾವಣೆ ಮಾಡಲಾಗಿದ್ದು, ಗ್ರೇಸ್ ಮಾರ್ಕ್ಸ್​​ಗೆ ಸಂಬಂಧಿಸಿಯೂ ತಿದ್ದುಪಡಿ ಮಾಡಲಾಗಿದೆ.

ಇನ್ನು ಇಂದಿನಿಂದ ಪರೀಕ್ಷೆ ಶುರುವಾಗಿದ್ದು, ಮಾರ್ಚ್​​ 29ಕ್ಕೆ ಎಕ್ಸಾಂ ಮುಗಿಯಲಿದೆ. ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:40 pm, Thu, 9 March 23

Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ