ಅಯೋಧ್ಯೆ ವಿಶೇಷ ರೈಲಿಗೆ ನುಗ್ಗಿ ಬೆಂಕಿ ಹಚ್ಚುವುದಾಗಿ ಬೆದರಿಕೆ ಕೇಸ್​: ಓರ್ವ ಯುವಕ ಅರೆಸ್ಟ್​​

ಅಯೋಧ್ಯೆ ಪ್ರಭು ಶ್ರೀರಾಮರ ದರ್ಶನ ಪಡೆದು ಸುಮಾರು 14,00 ಕ್ಕೂ ಹೆಚ್ಚು ಯಾತ್ರಿಕರು ಮೈಸೂರು- ಅಯೋಧ್ಯೆ ದಾಮಾ ರೈಲಿನಲ್ಲಿ ತಮ್ಮೂರಿಗೆ ಮರಳುತ್ತಿದ್ದರು. ಮಾಗ್ಯ ಮಧ್ಯೆ ರೈಲು ಹತ್ತಿದ ಮೂವರು ಯುವಕರಿಂದ ರೈಲಿಕೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ. ಸದ್ಯ ಓರ್ವ ಯುವಕನನ್ನು ರೈಲ್ವೆ ಪೊಲೀಸರು ಬಂಧಿಸಿದ್ದು, ಎಫ್​ಐಆರ್​ ಕೂಡ ದಾಖಲಿಸಿದ್ದಾರೆ.

ಅಯೋಧ್ಯೆ ವಿಶೇಷ ರೈಲಿಗೆ ನುಗ್ಗಿ ಬೆಂಕಿ ಹಚ್ಚುವುದಾಗಿ ಬೆದರಿಕೆ ಕೇಸ್​: ಓರ್ವ ಯುವಕ ಅರೆಸ್ಟ್​​
ಯಾತ್ರಿಕರಿಂದ ಪ್ರತಿಭಟನೆ
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಗಂಗಾಧರ​ ಬ. ಸಾಬೋಜಿ

Updated on:Feb 23, 2024 | 11:00 AM

ವಿಜಯನಗರ, ಫೆಬ್ರವರಿ 23: ಅಯೋಧ್ಯೆಯಿಂದ ವಾಪಸಾಗುತ್ತಿದ್ದ ಯಾತ್ರಿಕರಿಗೆ ಅಯೋಧ್ಯೆ (Ayodhya) ವಿಶೇಷ ರೈಲಿಗೆ ನುಗ್ಗಿ ಬೆದರಿಕೆ ಹಾಕಿದ್ದ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ. ಗದಗದ ಬಳಿ ಆರೋಪಿಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದು, ಉಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಯಾತ್ರಿಕರಿದ್ದ ಬೋಗಿಗೆ ಮೂವರು ಯುವಕರು ಹತ್ತಿ ಅವರೊಂದಿಗೆ ಕಾರಣವಿಲ್ಲದೆ ವಾಗ್ವಾದಕ್ಕಿಳಿದ್ದರು. ಮಾತಿನ ಭರದಲ್ಲಿ ಕಿಡಗೇಡಿಗಳು ಬೋಗಿಗೆ ಬೆಂಕಿ ಹಚ್ಚುವುದಾಗಿ ಧಮ್ಕಿ ಹಾಕಿದ್ದರು.

ಹೊಸಪೇಟೆಯ ರೈಲ್ವೆ ನಿಲ್ದಾಣದಲ್ಲಿ ಮೂವರು ಯುವಕರ ಆಕ್ಷೇಪಾರ್ಹ ಹೇಳಿಕೆಯಿಂದ ಶ್ರೀರಾಮ ಭಕ್ತರು ಕೆರಳಿದ್ದಾರೆ. 8.15ಕ್ಕೆ ಹೊಸಪೇಟೆಗೆ ಬಂದ ರೈಲು, 10 ಗಂಟೆಗೆ ಬಳ್ಳಾರಿ ಕಡೆ ಪ್ರಯಾಣ ಬೆಳೆಸಿದೆ. ಎರಡು ಗಂಟೆ ಕಾಲ ಹೊಸಪೇಟೆ ರೈಲ್ವೆ ನಿಲ್ದಾಣದಲ್ಲಿ ಅಯೋಧ್ಯೆ ಧಾಮ ರೈಲು ಮಾರ್ಗ ಮಧ್ಯೆ ನಿಂತಿದೆ. ಯುವಕರನ್ನು ಬಂಧಿಸುವಂತೆ ಪ್ರತಿಭಟಿಸಲಾಗಿದೆ. ಸ್ಥಳಕ್ಕೆ ವಿಜಯನಗರ ಎಸ್ಪಿ ಶ್ರೀಹರಿಬಾಬು, ಹೊಸಪೇಟೆಯ ಉಪವಿಭಾಗದ ಪೊಲೀಸ್ ಅಧಿಕಾರಿಗಳಿಂದ ಮನವೊಲಿಸಲಾಗಿದೆ.

ಇದನ್ನೂ ಓದಿ: ಅಯೋಧ್ಯೆ ಯಾತ್ರಿಕರು ಪ್ರಯಾಣಿಸುತ್ತಿದ್ದ ರೈಲಿಗೆ ಬೆದರಿಕೆ: ಬೆಂಕಿ ಹಚ್ಚುವುದಾಗಿ ಯುವಕರಿಂದ ಧಮ್ಕಿ

ಹಿಂದೂಪರ, ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ಪ್ರಯತ್ನದಿಂದ ಕೊನೆಗೂ ರೈಲು ತೆರಳಿದೆ. ಮುಂಜಾಗ್ರತಾ ಕ್ರಮವಾಗಿ ರೈಲಿನೊಳಗೆ ರೈಲ್ವೆ ಪೊಲೀಸರು, ಸ್ಥಳೀಯ ಪೊಲೀಸರು ಬಳ್ಳಾರಿಯವರೆಗೆ ಸಂಚಾರ ಮಾಡಿದ್ದಾರೆ.

ಪ್ರಕರಣ ಬಗ್ಗೆ ಯಾತ್ರಿಕ ಹರೀಶ್ ಶೆಟ್ಟಿ ಪ್ರತಿಕ್ರಿಯಿಸಿದ್ದು, ಹೊಸಪೇಟೆ ನಿಲ್ದಾಣದಲ್ಲಿ ಯುವಕರು ಬೋಗಿ ಹತ್ತಿದರು. ಅಯೋಧ್ಯೆ ರೈಲು ರಿಸರ್ವ್​ ಇದೆ, ಹತ್ತಬೇಡಿ ಎಂದಿದ್ದಕ್ಕೆ ನಮ್ಮ ಜತೆ ವಾಗ್ವಾದ ನಡೆಸಿ ರೈಲಿಗೆ ಬೆಂಕಿ ಹಚ್ಚುವುದಾಗಿ ಧಮ್ಕಿ ಹಾಕಿದರು. ತಕ್ಷಣ ರೈಲ್ವೆ ಪೊಲೀಸರಿಗೆ ಬೆದರಿಕೆ ಹಾಕ್ತಿರುವ ಬಗ್ಗೆ ಮಾಹಿತಿ ನೀಡಿದೆವು. ಆದರೆ ಪೊಲೀಸರು ಮೂವರನ್ನು ವಶಕ್ಕೆ ಪಡೆದು ಬಿಟ್ಟು ಕಳಿಸಿದ್ದರು.

ಇದನ್ನೂ ಓದಿ: Tv9 Impact: ಕುಡಿಯುವ ನೀರಿಗಾಗಿ ಹಾಹಾಕಾರ, ಟಿವಿ9 ವರದಿ ಬಳಿಕ ಕುಡಿಯುವ ನೀರಿನ ಯೋಜನೆಗೆ ಚಾಲನೆ ಕೊಟ್ಟ ಸಚಿವರು

ಮೂವರು ಯುವಕರನ್ನು ಬಿಟ್ಟು ಕಳಿಸಿದಕ್ಕೆ ಪ್ರತಿಭಟನೆ ಆರಂಭಿಸಿದೆವು. ರಾಜ್ಯದಲ್ಲಿ ಮತ್ತೊಂದು ಗೋದ್ರಾ ಹತ್ಯಾಕಾಂಡ ನಡೆಯಬಹುದು ಅಂದಿದ್ದರು. ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆ ನಮಗೆ ನೆನಪಾಯಿತು. ಆಗ ರೈಲಿನಲ್ಲಿ ಪ್ರಯಾಣಿಸಲು ನಮಗೆ ಮತ್ತಷ್ಟು ಭಯ ಶುರುವಾಯ್ತು. ಬಿ.ಕೆ.ಹರಿಪ್ರಸಾದ್ ಹೇಳಿದಂತೆ ಯುವಕರು ನಮಗೆ ಬೆದರಿಕೆ ಹಾಕಿದ್ದಾರೆ ಎಂದಿದ್ದಾರೆ.

ರಾಮ ಭಕ್ತರ ರೈಲಿಗೆ ಬೆಂಕಿ ಹಚ್ಚುವುದಾಗಿ ಯುವಕರು ಬೆದರಿಕೆ ಹಾಕಿದ್ದಾರೆ. ಸ್ಥಳಕ್ಕೆ ಆಗಮಿಸಿ ಎಸ್​ಪಿ ಕ್ರಮದ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆದೆವು. ಎಸ್​ಪಿ ಭರವಸೆ ಹಿನ್ನೆಲೆ ಪ್ರತಿಭಟನೆ ಹಿಂಪಡೆದು ಪ್ರಯಾಣ ಬೆಳೆಸಿದ್ದೇವೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:57 am, Fri, 23 February 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ