ಸಿಎಂ ಸಿದ್ದರಾಮಯ್ಯಗೆ ಪಿತೃಪಕ್ಷದ ಕಂಟಕ? ತುಂಗಭದ್ರೆಗೆ ಬಾಗಿನ ಅರ್ಪಿಸಿ ಮುಡಾ ಬಲೆಯಲ್ಲಿ ಸಿಕ್ಕಿಬಿದ್ರಾ?

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸದ್ಯ ಸಂಕಷ್ಟ ಎದುರಾಗಿದೆ. ಪಿತೃಪಕ್ಷದ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ತುಂಗಭದ್ರೆಗೆ ಬಾಗಿನ ಅರ್ಪಣೆ ಮಾಡಿದ್ದರು. ಇದರಿಂದಾಗಿಯೂ ಸಂಕಷ್ಟ ಎದುರಾಗಿದೆ ಎಂದು ಬಿಜೆಪಿ ನಾಯಕರು ಟೀಕೆ ಮಾಡಿದ್ದಾರೆ. ಸಿಎಂ ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಪಿತೃಪಕ್ಷದ ಕಂಟಕ? ತುಂಗಭದ್ರೆಗೆ ಬಾಗಿನ ಅರ್ಪಿಸಿ ಮುಡಾ ಬಲೆಯಲ್ಲಿ ಸಿಕ್ಕಿಬಿದ್ರಾ?
ಸಿದ್ದರಾಮಯ್ಯ
Follow us
| Updated By: ಆಯೇಷಾ ಬಾನು

Updated on: Sep 25, 2024 | 11:59 AM

ವಿಜಯನಗರ, ಸೆ.25: ಹಿಂದೂ ನಂಬಿಕೆ ಪ್ರಕಾರ ಪಿತೃ ಪಕ್ಷದಲ್ಲಿ (Pitru Paksha) ಯಾವುದೇ ಶುಭ ಕಾರ್ಯಗಳನ್ನು ಮಾಡಲಾಗುವುದಿಲ್ಲ. ಆದರೆ ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯನವರು (Siddaramaiah) ತುಂಗಭದ್ರಾ ಜಲಾಶಯದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ್ದರು. ಇದಾದ ಬಳಿಕ ಪಿತೃಪಕ್ಷದ ಕಂಟಕ ಕಾಡಲಿದೆ ಎಂದು ಕೆಲವರು ಟೀಕೆ ಮಾಡಿದ್ದರು. ಆದರೆ ಈಗ ಮುಡಾ ಹಗರಣದಲ್ಲಿ (MUDA Scam) ಗವರ್ನರ್ ಕ್ರಮವನ್ನ ಪ್ರಶ್ನಿಸಿ ಸಿಎಂ ಹಾಕಿದ್ದ ಅರ್ಜಿಯನ್ನೇ ಹೈಕೋರ್ಟ್ ವಜಾ ಮಾಡಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯಗೆ ಪಿತೃಪಕ್ಷದ ಕಂಟಕ ನಿಜವಾಯ್ತಾ ಎಂಬ ಪ್ರಶ್ನೆ ಎದ್ದಿದೆ.

ಪಿತೃಪಕ್ಷದಲ್ಲಿ ಬಾಗಿನ ಅರ್ಪಣೆ ಮಾಡಿದಕ್ಕೆ ಎದುರಾಯ್ತಾ ಸಿಎಂಗೆ ಕಂಟಕ?

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸದ್ಯ ಸಂಕಷ್ಟ ಎದುರಾಗಿದೆ. ಪಿತೃ ಪಕ್ಷದಲ್ಲಿ ತಾಯಿ ತುಂಗಭದ್ರೆಗೆ ಬಾಗಿನ ಅರ್ಪಣೆ ಮಾಡಿ ಅವರಕೃಪೆಗೆ ಪಾತ್ರರಾಗಿದ್ದಾರೆ ಅಂತ ಬಿಜೆಪಿ ವಿಜಯನಗರ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಹೇಳಿಕೆ ನೀಡಿದ್ದರು. ಸನಾತನ ಹಿಂದೂ ಧರ್ಮದಲ್ಲಿ ಪಿತೃ ಪಕ್ಷದಲ್ಲಿ ಯಾವುದೇ ಶುಭಕಾರ್ಯ ಮಾಡೋದಿಲ್ಲ ಅನ್ನೋ ನಂಬಿಕೆ ಇದೆ. ನಮ್ಮ ಹಿರಿಯರೂ ಸಹ ಹಿಂದಿನಿಂದಲೂ ಇದನ್ನು ನಂಬಿಕೊಂಡು ಬಂದಿದ್ದಾರೆ. ಮಂಗಳವಾರ ಅಥವಾ ಶುಕ್ರವಾರ ಪ್ರಾಶಿಕ್ಯೂಶನ್ ಗೆ ಅನುಮತಿ ಕೊಟ್ರೆ ಸಿಎಂಗೆ ಕೇಡುಗಾಲ ಪ್ರಾರಂಭವಾಗುತ್ತದೆ ಅಂತ ಹೇಳಿದ್ದಾರೆ. ಪಿತೃಪಕ್ಷದಲ್ಲಿ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿ ತಾಯಿ ತುಂಗಭದ್ರಾ ಜಲಾಶಯದ ಅವಕೃಪೆಗೆ ಪಾತ್ರರಾಗಿದ್ದಾರೆ. ಸಿಎಂ ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ

ಸಿಎಂ ಸಿದ್ದರಾಮಯ್ಯಗೆ ಮುಡಾ ಹಗರಣ ಹೆಜ್ಜೆ ಹೆಜ್ಜೆಗೂ ಸಂಕಷ್ಟ ತಂದೊಡ್ತಿದೆ. ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶದ ವಿರುದ್ಧ ಸಮರ ಸಾರಿದ್ದ ಸಿದ್ದರಾಮಯ್ಯಗೆ, ಕಾನೂನು ಹೋರಾಟದ ಮೊದಲ ಹೆಜ್ಜೆಯಲ್ಲೇ ಆಘಾತವಾಗಿದೆ. ಖುದ್ದು ವಕೀಲರಾಗಿ ಅನುಭವ ಹೊಂದಿದ್ದರೂ ಸಹ, ಹೈಕೋರ್ಟ್​ನಿಂದ ಇಂಥಾ ತೀರ್ಪು ಬರುತ್ತೆ ಅಂತಾ ಸಿದ್ದರಾಮಯ್ಯ ಕನಸು ಮನಸಿನಲ್ಲೂ ನೆನೆಸಿರಲಿಲ್ಲ. ಮುಡಾ ಹಗರಣದಲ್ಲಿ ಗವರ್ನರ್ ಕ್ರಮವನ್ನ ಪ್ರಶ್ನಿಸಿ ಸಿಎಂ ಹಾಕಿದ್ದ ಅರ್ಜಿಯನ್ನೇ ಹೈಕೋರ್ಟ್ ವಜಾ ಮಾಡಿದೆ. ಗವರ್ನರ್ ಕ್ರಮ ಸರಿಯಾಗಿದೆ ಎಂದು ರಾಜ್ಯಪಾಲರ ನಿರ್ಧಾರವನ್ನೇ ಹೈಕೋರ್ಟ್​ ಮಾನ್ಯ ಮಾಡಿದೆ.

ಇನ್ನು ಮತ್ತೊಂದೆಡೆ ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ 12 ಗಂಟೆಗೆ ಸಚಿವ ಸಂಪುಟ ಸಭೆ ಕರೆದಿದ್ದಾರೆ. ರಾಜ್ಯಪಾಲರ ಪತ್ರಕ್ಕೆ ಹೇಗೆ ಉತ್ತರಿಸಬೇಕು ಅನ್ನೋ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಅತ್ತ ಹೈಕಮಾಂಡ್​ಗೂ ಟೆನ್ಷನ್ ಶುರುವಾಗಿದೆ. ಉಸ್ತುವಾರಿ ರಣದೀಪ್ ಸುರ್ಜೇವಾಲ ರಾಜ್ಯಕ್ಕೆ ಬರ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕ್ಷಣಾರ್ಧದಲ್ಲೇ ಜಲ ಸಮಾಧಿಯಾದ ಎರಡಂತಸ್ತಿನ ಮನೆ
ಕ್ಷಣಾರ್ಧದಲ್ಲೇ ಜಲ ಸಮಾಧಿಯಾದ ಎರಡಂತಸ್ತಿನ ಮನೆ
ಕೋಲಾರದಲ್ಲಿ ಅನುಮಾನಾಸ್ಪದ ಸೂಟ್​ಕೇಸ್​ ಪತ್ತೆ, ಸ್ಥಳೀಯರಿಗೆ ಆತಂಕ
ಕೋಲಾರದಲ್ಲಿ ಅನುಮಾನಾಸ್ಪದ ಸೂಟ್​ಕೇಸ್​ ಪತ್ತೆ, ಸ್ಥಳೀಯರಿಗೆ ಆತಂಕ
ಯುವ ದಸರಾ ವೇದಿಕೆ ಮೇಲೆ ನಕ್ಕ ರುಕ್ಮಿಣಿ ವಸಂತ್; ವಿಡಿಯೋ ನೋಡಿ
ಯುವ ದಸರಾ ವೇದಿಕೆ ಮೇಲೆ ನಕ್ಕ ರುಕ್ಮಿಣಿ ವಸಂತ್; ವಿಡಿಯೋ ನೋಡಿ
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್