AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಹೊರಗಿನವರ ಜೊತೆ ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡೋದನ್ನು ಬಿಡಬೇಕು; ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಕನ್ನಡಕ್ಕೆ ‌ಸಾರ್ವಭೌಮತ್ವ ಇರಬೇಕು. ನಾವು ಬೇರೆಯವರ ಜೊತೆ ಕನ್ನಡ ಬಿಟ್ಟು, ಬೇರೆ ಭಾಷೆ ಮಾತನಡಲ್ಲ ಎಂದು ಪ್ರತಿಜ್ಞೆ ಮಾಡಬೇಕು. ಈ ಮೂಲಕ ಕರ್ನಾಟಕದಲ್ಲಿ ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡೋದನ್ನು ಬಿಡಬೇಕು. ಬೇರೆ ಭಾಷೆ ಕಲಿರಿ. ಆದ್ರೆ, ಕನ್ನಡದಲ್ಲಿಯೇ ಮಾತನಾಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕದಲ್ಲಿ ಹೊರಗಿನವರ ಜೊತೆ ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡೋದನ್ನು ಬಿಡಬೇಕು; ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
ಸಂಜಯ್ಯಾ ಚಿಕ್ಕಮಠ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Nov 02, 2023 | 9:28 PM

Share

ವಿಜಯನಗರ, ನ.02: ಕರ್ನಾಟಕ ಸಂಭ್ರಮ 50 ರ ಕಾರ್ಯಕ್ರಮವನ್ನು ಇಂದು(ನ.02) ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನಲೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ(Siddaramaiah) ಅವರು ಹಂಪಿ ವಿರೂಪಾಕ್ಷ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಜ್ಯೋತಿ ರಥಯಾತ್ರೆ(Jyoti RathaYatra)ಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ‘ಕರ್ನಾಟಕ ನಾಮಕರಣವಾಗಿ 50 ವರ್ಷ ಪೂರ್ಣ ಹಿನ್ನೆಲೆಯಲ್ಲಿ ಜ್ಯೋತಿ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. 1973 ನವೆಂಬರ್ 2 ರಂದು ಜ್ಯೋತಿ ರಥಯಾತ್ರೆಗೆ ಮೈಸೂರು ಜಿಲ್ಲೆಯವರಾದ ದೇವರಾಜ್ ಅರಸು ಅವರು ಇಲ್ಲಿಂದಲೇ ಚಾಲನೆ ನೀಡಿದ್ದರು. ಇದೀಗ ನಾನು ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಿದ್ದೇನೆ ಎಂದರು.

‘ಕನ್ನಡ ಆಡಳಿತ ಭಾಷೆಯಾಗಿ, ಕನ್ನಡದಲ್ಲಿಯೇ ಆಡಳಿತ ನಡೆಯಬೇಕು ಎಂದು ಪ್ರತಿಪಾದಿಸಿದ್ದೆ. ಅಂದು ಇಂಗ್ಲಿಷ್ ‌ಟೈಪ್ ರೈಟರ್ ತಗೆದು, ಕನ್ನಡ ಟೈಪರೇಟರ್ ಕೊಡಿಸುವ ಕೆಲಸ ಮಾಡಿದ್ದೆ. ನಮ್ಮ ನೆಲ, ಜಲ, ಭಾಷೆ,‌ ಸಂಸ್ಕ್ರತಿಯನ್ನು ನಾವೆಲ್ಲರೂ ಗೌರವಿಸಬೇಕು. ಕರ್ನಾಟಕವನ್ನು ಸಂಪದ್ಭರಿತ ರಾಜ್ಯ ಮಾಡಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ನಾವು ದೇವರಲ್ಲಿ,‌ ಜನರಲ್ಲಿ‌ ನಂಬಿಕೆ ಇಟ್ಟುಕೊಂಡಿದ್ದೇವೆ, ಮೂಡನಂಬಿಕೆಯಲ್ಲಿ ಅಲ್ಲ ಎಂದರು.

ಇದನ್ನೂ ಓದಿ:ಕರ್ನಾಟಕ ‌ಸಂಭ್ರಮ 50 ರ ಕಾರ್ಯಕ್ರಮದಲ್ಲಿ ವೀರ ಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿದ ಸಿಎಂ ಸಿದ್ದರಾಮಯ್ಯ; ಇಲ್ಲಿದೆ ವಿಡಿಯೋ

ಇನ್ನು ಇದೇ ವೇಳೆ ‘ಸಮ‌ ಸಮಾಜ ನಿರ್ಮಾಣಕ್ಕೆ ಪ್ರಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮ ಸರ್ಕಾರ ನೀಡಿದ ಭರವಸೆಯನ್ನು ಈಡಿರಿಸಿದ್ದೇವೆ. ಕರ್ನಾಟಕದಲ್ಲಿ ಕನ್ನಡಕ್ಕೆ ‌ಸಾರ್ವಭೌಮತ್ವ ಇರಬೇಕು. ನಾವು ಬೇರೆಯವರ ಜೊತೆ ಕನ್ನಡ ಬಿಟ್ಟು, ಬೇರೆ ಭಾಷೆ ಮಾತನಡಲ್ಲ ಎಂದು ಪ್ರತಿಜ್ಞೆ ಮಾಡಬೇಕು. ಈ ಮೂಲಕ ಕರ್ನಾಟಕದಲ್ಲಿ ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡೋದನ್ನು ಬಿಡಬೇಕು. ಬೇರೆ ಭಾಷೆ ಕಲಿರಿ. ಆದ್ರೆ, ಕನ್ನಡದಲ್ಲಿಯೇ ಮಾತನಾಡಿ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್